Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ದ್ವೇಷ ಭಾಷಣ ವಿಧೇಯಕ ರದ್ದತಿಗೆ ಎಸ್.ವಿ.ವಿಜಯಣ್ಣ ಆಗ್ರಹ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ, ಡಿ. 27 :
ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿ ಮಾಡಲು ಹೊರಟಿರುವ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕವು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ದಮನ ಮಾಡುವ ಮೂಲಕ ಸಂವಿಧಾನ ವಿರೋಧಿಯಾಗಿದ್ದು ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕವನ್ನು ರದ್ದುಗೊಳಿಸುವಂತೆ ಬಿಜೆಪಿ ಮುಖಂಡರು, ವಾಣೀಜ್ಯೋದ್ಯಮಿಗಳಾದ ಎಸ್.ವಿ.ವಿಜಯಣ್ಣ ರಾಜ್ಯಪಾಲರನ್ನು ಒತ್ತಾಯಿಸಿದ್ದಾರೆ.

ಈ ಬಗ್ಗೆ ಹೇಳಿಕೆಯನ್ನು ನೀಡಿರುವ ಅವರು ಸಂವಿಧಾನ ದೇಶದ ಪ್ರತಿಯೊಬ್ಬ ನಾಗರಿಕನಿಗೆ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ ಕಲ್ಪಿಸಿದೆ. ಅಂಬೇಡ್ಕರ್ ವಿರೋಧಿಯಾಗಿರುವ ಕಾಂಗ್ರೆಸ್ ರಾಜ್ಯದಲ್ಲಿ ನಾಗರಿಕರ ಅಭಿವ್ಯಕ್ತಿ ಸ್ವಾತಂತ್ರ್ಯ ನೀಡಿರುವ ಕಿತ್ತುಕೊಳ್ಳಲು ಮುಂದಾಗಿರುವುದು ಸಂವಿಧಾನ ವಿರೋಧಿ ನಿಲುವು ಮಸೂದೆಯಲ್ಲಿ ದ್ವೇಷ ಭಾಷಣಕ್ಕೆ ವ್ಯಾಖ್ಯಾನವೇ ಅಸ್ಪಷ್ಟವಾಗಿದ್ದು, ಸರ್ಕಾರದ ನೀತಿಗಳ ವಿರುದ್ಧ ಟೀಕೆ, ಸಾಮಾಜಿಕ ಚರ್ಚೆ, ವಿಮರ್ಶೆ ಹಾಗು ಸತ್ಯವನ್ನು ಹೇಳುವುದನ್ನು ಎಂದು ದ್ವೇಷ ಸರ್ಕಾರದ ವಿರುದ್ಧ ಮಾತನಾಡುವವರ ಬಾಯಿ ಕೂಡ ಪರಿಗಣಿಸಲಾಗಿದೆ. ಮುಚ್ಚಿಸುವ ಈ ಕಾಯ್ದೆಯು ಪ್ರಜಾಪ್ರಭುತ್ವದ ಆಶಯಗಳನ್ನು ಕತ್ತು ಹಿಸುಕುವ ಸಾಧನವಾಗಿದೆ ಎಂದು ಆಕ್ರೋಶ ಪಡಿಸಿದರು.

ಈ ಮಸೂದೆ ಕಾನೂನಾಗಿ ಜಾರಿಯಾದರೆ ರಾಜ್ಯದಲ್ಲಿ ನಡೆಯುವ ಪ್ರತಿಭಟನೆ, ಶಾಂತಿ ಸಭೆ, ಸಾಮಾಜಿಕ ಚಳವಳಿಗಳನ್ನು ಹತ್ತಿಕ್ಕುತ್ತದೆ. ರಾಜ್ಯಪಾಲರು ಕೂಡಲೇ ಈ ಕರಾಳ ಮಸೂದೆಯನ್ನು ರದ್ದುಗೊಳಿಸಬೇಕು ಎಂದ ಅವರು, ರಾಜ್ಯ ಮುಖ್ಯಮಂತ್ರಿಮ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರಾಜ್ಯ ಅಭೀವೃದ್ದಿಯ ಬಗ್ಗೆ ಆಲೋಚನೆ ಮಾಡದೆ ತಮ್ಮ ಅಧಿಕಾರಕ್ಕಾಗಿ ಕಿತ್ತಾಟವನ್ನು ನಡೆಸಿದ್ದಾರೆ. ಇದರಿಂದ ರಾಜ್ಯದ ಅಭಿವೃದ್ದಿ ಕುಠಿಂತವಾಗಿದೆ. ಅರ್ಥಿಕ ಪರಿಸ್ಥಿತಿ ಹದಗೆಟ್ಟಿದೆ, ರಾಜ್ಯದಲ್ಲಿ ಹಲವಾರು ವರ್ಷಗಳಿಂದ ನೆಲೆಯೂರಿದ್ದ ವಿದೇಶಿ ಕಂಪನಿಗಳಿಗೆ ರಾಜ್ಯದ ಸಹಕಾರ ಇಲ್ಲದೆ ನೆರೆ ರಾಜ್ಯಗಳಿಗೆ ವಲಸೆ ಹೋಗುತ್ತಿವೆ, ಇದರಿಂದ ನಮ್ಮ ರಾಜ್ಯದಲ್ಲಿನ ಕನ್ನಡಿಗರಿಗೆ ಉದ್ಯೋಗದ ಅಭದ್ರತೆ ಕಾಡುತ್ತಿದೆ ಇದರ ಬಗ್ಗೆ ರಾಜ್ಯದ ಮುಖ್ಯಮಂತ್ರಿಗಳು ಹಾಗೂ ಉಪ ಮುಖ್ಯಮಂತ್ರಿಗಳು ಆಲೋಚನೆಯನ್ನು ಮಾಡಬೇಕಿದೆ ಎಂದು  ಬಿಜೆಪಿ ಮುಖಂಡರು, ವಾಣೀಜ್ಯೋದ್ಯಮಿಗಳಾದ ಎಸ್.ವಿ.ವಿಜಯಣ್ಣ ಆಗ್ರಹಿಸಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now