Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಾಲುಮರದ ತಿಮ್ಮಕ್ಕ ನಿಧನ..!

---Advertisement---

ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಸಾಲುಮರದ ತಿಮ್ಮಕ್ಕ ನಿದ್ನರಾಗಿದ್ದಾರೆ. ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ಸಾಲುಮರದ ತಿಮ್ಮಕ್ಕ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಇಂದು ಮಧ್ಯಾಹ್ನ 12 ಗಂಟೆಗೆ ನಿಧನರಾಗಿದ್ದಾರೆ. ಅನಕ್ಷರಸ್ಥೆಯಾಗಿದ್ದರೂ ಪರಿಸರ ಸಂರಕ್ಷಣೆಯಲ್ಲಿ ತಿಮ್ಮಕ್ಕ ಅವರ ಮಹತ್ತರ ಸಾಧನೆಗೆ ಹಲವಾರು ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸಂಸ್ಥೆಗಳು ಪ್ರಶಸ್ತಿ ನೀಡಿ ಸನ್ಮಾನಿಸಿವೆ.

2019ರಲ್ಲಿ ಪದ್ಮಶ್ರೀ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. 2020 ರಲ್ಲಿ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ ತಿಮ್ಮಕ್ಕನವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಿತ್ತು. ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನಲ್ಲಿ 1911ರ ಜೂನ್ 30ರಂದು ಜನಿಸಿದ್ದ ಸಾಲುಮರದ ತಿಮ್ಮಕ್ಕ, ಹುಲಿಕಲ್ ಗ್ರಾಮದ ಚಿಕ್ಕಯ್ಯರನ್ನು ವಿವಾಹವಾಗಿದ್ದರು. ಆದರೆ ದುರಾದೃಷ್ಟವಶಾತ್ ಇವರಿಗೆ ಮಕ್ಕಳಿರಲಿಲ್ಲ. ಹೀಗಾಗಿ ತಮಗೆ ಮಕ್ಕಳಿರದ ದುಃಖವನ್ನು ಮರೆಯಲು ರಸ್ತೆಯ ಬದಿಯಲ್ಲಿ ಆಲದ ಸಸಿಗಳನ್ನು ನೆಟ್ಟು, ಅವುಗಳನ್ನೇ ಮಕ್ಕಳೆಂದು ಭಾವಿಸಿ ಬೆಳೆಸಿದ್ದರು.

 

114 ವರ್ಷದ ತಿಮ್ಮಕ್ಕರಿಗೆ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು. 385 ಆಲದ ಮರಗಳನ್ನು ನೆಟ್ಟು ಪೋಷಿಸುವುದರೊಂದಿಗೆ ಕರ್ನಾಟಕದಾದ್ಯಂತ ಸುಮಾರು 8,000ಕ್ಕೂ ಹೆಚ್ಚು ಮರಗಳನ್ನು ಬೆಳೆಸಿದ್ದಾರೆ. ಮಾಗಡಿ ತಾಲೂಕಿನಲ್ಲಿ 4.5 ಕಿ.ಮೀ ಉದ್ದಕ್ಕೂ 385 ಆಲದ ಮರಗಳನ್ನು ನೆಟ್ಟು ಬೆಳೆಸುವ ಮೂಲಕ ಪರಿಸರ ಪ್ರೇಮವನ್ನು ಮೆರೆದಿದ್ದಾರೆ. ಒಟ್ಟಾರೆಯಾಗಿ, ಅವರು ಸುಮಾರು 8,000ಕ್ಕೂ ಹೆಚ್ಚು ಮರಗಳನ್ನು ನೆಟ್ಟು ಪೋಷಿಸಿದ್ದಾರೆ. ಅಕ್ಷರಸ್ಥರಲ್ಲದಿದ್ದರೂ, ಪರಿಸರ ಸಂರಕ್ಷಣೆಯಲ್ಲಿ ಅವರು ಮಾಡಿದ ಸಾಧನೆ ಎಲ್ಲರಿಗೂ ಮಾದರಿಯಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now