ಕೇಂದ್ರ ಗೃಹ ಮಂತ್ರಿ ಅಮಿತ್‍ಷಾ ಅವರನ್ನು ವಜಾಗೊಳಿಸಿ : ಜೆ.ಯಾದವರೆಡ್ಡಿ

suddionenews
1 Min Read

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜನವರಿ. 07 : ದೇಶಕ್ಕೆ ಭದ್ರವಾದ ಸಂವಿಧಾನ ನೀಡಿರುವ ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಹೆಸರೇಳುವ ಬದಲು ದೇವರನ್ನು ಸ್ಮರಿಸಿದರೆ ಸ್ವರ್ಗ ಪ್ರಾಪ್ತಿಯಾಗುತ್ತದೆಂದು ಕೇಂದ್ರ ಗೃಹ ಸಚಿವ ಅಮಿತ್‍ಷಾ ಸಂಸತ್‍ನಲ್ಲಿ ಹಗರುವಾಗಿ ಮಾತನಾಡಿರುವುದನ್ನು ವಿರೋಧಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ
ದಾದಾ ಸಾಹೇಬ್ ಎನ್.ಮೂರ್ತಿ ಸ್ಥಾಪಿತ ಬಣದಿಂದ ಒನಕೆ ಓಬವ್ವ ವೃತ್ತದ ಸಮೀಪ ಮಂಗಳವಾರ ಧರಣಿ ಸತ್ಯಾಗ್ರಹ ನಡೆಸಲಾಯಿತು.

ಸಾಂಸ್ಕøತಿಕ ಚಿಂತಕ ಜೆ.ಯಾದವರೆಡ್ಡಿ ಧರಣಿಯನ್ನುದ್ದೇಶಿಸಿ ಮಾತನಾಡುತ್ತ ಜವಾಬ್ದಾರಿ ಸ್ಥಾನದಲ್ಲಿರುವ ಕೇಂದ್ರ ಗೃಹ ಮಂತ್ರಿ ಅಮಿತ್‍ಷಾ ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಬಗ್ಗೆ ಕೀಳಾಗಿ ಮಾತನಾಡಿರುವುದನ್ನು ದೇಶದ ಪ್ರಧಾನಿ ನರೇಂದ್ರಮೋದಿ ಸಮರ್ಥಿಸಿಕೊಳ್ಳುತ್ತಿರುವುದು ದೊಡ್ಡ ದುರಂತ. ತಕ್ಷಣವೇ ಸಂಪುಟದಿಂದ ವಜಾಗೊಳಿಸುವಂತೆ ಒತ್ತಾಯಿಸಿದರು.

 

ಬೇರೆ ದೇಶಗಳಲ್ಲಿ ಯಾರಾದರೂ ಇಂತಹ ಹೇಳಿಕೆಗಳನ್ನು ನೀಡಿದ್ದರೆ ಕ್ಷಣದಲ್ಲೆ ಅಧಿಕಾರದಿಂದ ಕೆಳಗಿಳಿಸುತ್ತಿದ್ದರು. ಸಂವಿಧಾನಕ್ಕೆ ಅಪಚಾರವೆಸಗುತ್ತಿರುವ ಅಮತ್‍ಷಾರವರ ಹೇಳಿಕೆಯನ್ನು ಸಾಮಾಜಿಕ ಬದ್ದತೆಯಿರುವ ಪ್ರತಿಯೊಬ್ಬರು ವಿರೋಧಿಸುವಂತೆ ಮನವಿ ಮಾಡಿದರು.
ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾಧ್ಯಕ್ಷ ಸಿ.ಹೆಚ್.ಮಂಜುನಾಥ್ ಮಾತನಾಡಿ ದೇಶ ವಿದೇಶಗಳಲ್ಲಿ ಓದಿ 30 ಡಿಗ್ರಿಗಳನ್ನು ಪಡೆದಿರುವ ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‍ರವರನ್ನು ಸಂಸತ್‍ನಲ್ಲಿ ಹಗರುವಾಗಿ ಮಾತನಾಡಿರುವ ಕೇಂದ್ರ ಗೃಹ ಮಂತ್ರಿ ಅಮಿತ್‍ಷಾರವರನ್ನು ಸಂಪುಟದಿಂದ ತಕ್ಷಣವೇ ವಜಾಗೊಳಿಸುವಂತೆ ಆಗ್ರಹಿಸಿದರು.

 

ಮಹಾನ್ ಮಾನವತಾವಾಧಿ ಡಾ.ಬಿ.ಆರ್.ಅಂಬೇಡ್ಕರ್ ಎರಡು ವರ್ಷಗಳ ಕಾಲ ಅಧ್ಯಯನ ನಡೆಸಿ ಪವಿತ್ರ ಗ್ರಂಥ ಸಂವಿಧಾನವನ್ನು ಕೊಡುಗೆಯಾಗಿ ನೀಡಿರುವ ಮೌಲ್ಯ ಅರಿಯದ ಗೃಹ ಸಚಿವ ಅಮಿತ್‍ಷಾ ಕೇವಲವಾಗಿ ಮಾತನಾಡಿರುವುದು ಇಡಿ ದೇಶವೇ ತಲೆ ತಗ್ಗಿಸುವಂತಾಗಿದೆ. ಪ್ರಧಾನಿ ನರೇಂದ್ರಮೋದಿರವರು ಸಮರ್ಥನೆ ಮಾಡಿಕೊಳ್ಳುವ ಬದಲು ತಕ್ಷಣದಿಂದಲೆ ಅಮಿತ್‍ಷಾರನ್ನು ಸಂಪುಟದಿಂದ ವಜಾಗೊಳಿಸಬೇಕು. ಇಲ್ಲವಾದಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದೆಂದು ಎಚ್ಚರಿಸಿದರು.

ಕರ್ನಾಟಕ ರಾಜ್ಯ ಟಿಪ್ಪುಸುಲ್ತಾನ್ ಅಭಿಮಾನಿಗಳ ಮಹಾವೇದಿಕೆ ರಾಜ್ಯಾಧ್ಯಕ್ಷ ಟಿಪ್ಪುಖಾಸಿಂ ಆಲಿ, ಹೊನ್ನೂರಪ್ಪ, ಆರ್.ಭೀಮಣ್ಣ, ಶಶಿಕುಮಾರ್, ಮಹೇಶ್, ಕರಿಬಸಪ್ಪ, ಚನ್ನಿಗರಾಮಯ್ಯ, ನಿವೃತ್ತ ಪಿ.ಯು. ಡಿ.ಡಿ.ಪಿ.ಐ. ಬಿ.ಆರ್.ಶಿವಕುಮಾರ್, ಮಹಲಿಂಗಪ್ಪ ಇನ್ನು ಅನೇಕರು ಧರಣಿಯಲ್ಲಿ ಪಾಲ್ಗೊಂಡಿದ್ದರು.

Share This Article
Leave a Comment

Leave a Reply

Your email address will not be published. Required fields are marked *