Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಪೊಲೀಸರ ತ್ಯಾಗ ಹಾಗೂ ಬಲಿದಾನ ಸ್ಮರಣೀಯ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

---Advertisement---

 

 

ಚಿತ್ರದುರ್ಗ. ಅ.21: ನಾಗರಿಕರು ನೆಮ್ಮದಿಂದ ಜೀವಿಸಲು ಪೊಲೀಸರು ತಮ್ಮ ಪ್ರಾಣವನ್ನು ಪಣಕಿಟ್ಟು ಕರ್ತವ್ಯ ನಿರ್ವಹಿಸುತ್ತಾರೆ. ಇಂತಹ ಪೊಲೀಸರ ತ್ಯಾಗ ಹಾಗೂ ಬಲಿದಾನ ಸದಾಕಾಲ ಸ್ಮರಣೀಯವಾಗಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿದರು.

ನಗರದ ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಪಡೆಯ ಆವರಣದಲ್ಲಿ ಸೋಮವಾರ ಜಿಲ್ಲಾ ಪೊಲೀಸ್ ಇಲಾಖೆಯಿಂದ ಆಯೋಜಿಸಲಾದ ಪೊಲೀಸ್ ಹುತಾತ್ಮರ ದಿನಾಚರಣೆಯ ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ಹುತಾತ್ಮರ ಸ್ಮಾರಕಕ್ಕೆ ಗೌರವ ಸಲ್ಲಿಸಿ ಅವರು ಮಾತನಾಡಿದರು.

1959 ಅಕ್ಟೋಬರ್ 21 ರಂದು ಲಡಾಕ್‍ನ ಇಂಡೋ ಟಿಬೇಟಿಯನ್ ಗಡಿಯಲ್ಲಿ ಗಸ್ತು ತಿರುಗುತ್ತದ್ದ ಸಿಆರ್ ಪಿಎಫ್ ಪಡೆಯ ಮೇಲೆ ಚೈನಾ ಸೇನೆ ಆಕ್ರಮಣ ನಡೆಸಿತು. ಸಮುದ್ರ ಮಟ್ಟದಿಂದ ಸುಮಾರು 18 ಸಾವಿರ ಅಡಿ ಎತ್ತರದಲ್ಲಿ ಜರುಗಿದ ಈ ಯದ್ದದಲ್ಲಿ, ತೀವ್ರ ಚಳಿ ಹಾಗೂ ಕಠಿಣ ಪರಿಸ್ಥಿತಿಯಲ್ಲಿ ಧೈರ್ಯದಿಂದ ಹೋರಾಟ ನಡೆಸಿದ ಸಿಆರ್ ಪಿಎಫ್ ಪಡೆಯ10 ಜನ ಪೊಲೀಸರು ಹುತಾತ್ಮರಾದರು. ಇವರ ಸ್ಮರಣಾರ್ಥ ಪ್ರತಿ ವರ್ಷ ಹುತಾತ್ಮ ದಿನಾಚರಣೆ ಆಚರಿಸಲಾಗುತ್ತಿದೆ. ಇದುವರೆಗೂ ದೇಶದ್ಯಾಂತ 40 ಸಾವಿರಕ್ಕೂ ಹೆಚ್ಚು ಪೊಲೀಸರು ಹುತಾತ್ಮರಾಗಿದ್ದಾರೆ ಎಂದು ತಿಳಿಸಿದರು.

ಬೇಂದ್ರೆಯವರ ಕವನದ ಸಾಲುಗಳಂತೆ “ಎನ್ನ ಪಾಡೆನಗಿರಲಿ, ಅದರ ಹಾಡನ್ನಷ್ಟೆ ನೀಡುವೆನು ರಸಿಕ ನಿನಗೆ; ಕಲ್ಲುಸಕ್ಕರೆಯಂಥ ನಿನ್ನೆದೆಯು ಕರಗಿದರೆ ಆ ಸವಿಯ ಹಣಿಸು ನನಗೆ” ಎನುವಂತೆ ಎಂತಹದೇ ಸಂದರ್ಭದಲ್ಲಿ ಪೊಲೀಸರು ಅವರ ಎಲ್ಲಾ ಕಷ್ಟ ಕಾರ್ಪಣ್ಯಗಳನ್ನು ಮರೆತು ಜನರ ರಕ್ಷಣೆ ಮಾಡುತ್ತಾರೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿದರು.


ಜಿಲ್ಲಾ  ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಅವರು ದೇಶದಾದ್ಯಂತ ಹುತಾತ್ಮರಾದ 216  ಪೊಲೀಸ್   ಹಾಗೂ ಸಿಬ್ಬಂದಿಗಳ ಹೆಸರುಗಳನ್ನು ಈ ಸಂದರ್ಭದಲ್ಲಿ ವಾಚಿಸಿದರು.
ಇದಕ್ಕೂ ಮುನ್ನ ಮುಖ್ಯ ಅತಿಥಿಗಳು ಸೇರಿದಂತೆ ಇತರೆ ಗಣ್ಯರು ಹುತಾತ್ಮರ ಸ್ಮಾರಕಕ್ಕೆ ಹೂ ಗೂಚ್ಛ ಇರಿಸಿ ಗೌರವ ಸಮರ್ಪಿಸಿದರು. ಹುತ್ಮಾತರ ಗೌರವಾರ್ಥ 3 ಸುತ್ತಿನ ವಾಲಿ ಫೈರಿಂಗ್ ಮಾಡುವುದರ ಜೊತೆಗೆ  ಪೊಲೀಸ್   ವಾದ್ಯ ವೃಂದದಿಂದ ರಾಷ್ಟ್ರಗೀತೆ ನುಡಿಸಲಾಯಿತು. 2 ನಿಮಿಷಗಳ ಮೌನಾಚರಣೆ ಮಾಡಲಾಯಿತು.


2023ರ ಸೆಪ್ಟೆಂಬರ್ 01 ರಿಂದ 2024ರ ಆಗಸ್ಟ್ 30 ರವರೆಗೆ ದೇಶಾದ್ಯಂತ 216  ಪೊಲೀಸ್   ಅಧಿಕಾರಿ ಹಾಗೂ ಸಿಬ್ಬಂದಿ ಹುತಾತ್ಮರಾಗಿದ್ದಾರೆ. ಈ ಅವಧಿಯಲ್ಲಿ ಕರ್ನಾಟಕದ 5  ಪೊಲೀಸ್   ಸಿಬ್ಬಂದಿ ಕರ್ತವ್ಯದ ವೇಳೆ ಹುತಾತ್ಮರಾಗಿದ್ದಾರೆ. ಕಾರ್ಯಕ್ರಮದಲ್ಲಿ ಕರ್ತವ್ಯ ನಿರತ  ಪೊಲೀಸ್   ಅಧಿಕಾರಿಗಳು, ನಿವೃತ್ತ  ಪೊಲೀಸ್ ಸಿಬ್ಬಂದಿ ಸೇರಿದಂತೆ ಸಾರ್ವಜನಿಕರು ಉಪಸ್ಥಿತರಿದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...