ಬೆಂಗಳೂರು: ಬಿಜೆಪಿ ಪಕ್ಷದಲ್ಲೂ ಕೆಲವರ ಅಸಮಾಧಾನದ ಹೊಗೆ ಬೂದಿ ಮುಚ್ಚಿದ ಕೆಂಡದಂತೆ ಇದೆ. ಆಗಾಗ ಬೂದಿ ಸರಿದಾಗ ಕೆಂಡ ಕೆಂಪಾಗುತ್ತದೆ. ಇದೀಗ ರಾಜ್ಯ ಬಿಜೆಪಿ ಘಟಕಕ್ಕೆ ನೂತನ ಪದಾಧಿಕಾರಿಗಳ ಪಟ್ಟಿಯನ್ನು ಆಯ್ಕೆ ಮಾಡಲಾಗಿದೆ. ಇದರಲ್ಲಿ ಯಡಿಯೂರಪ್ಪ ಅವರ ಆಪ್ತರ ಪೈಕಿ 6 ಜನರನ್ನು ಆಯ್ಕೆ ಮಾಡಲಾಗಿದೆ. ಆಪ್ತರಿಗೆ ಸ್ಥಾನ ನೀಡಲಾಗಿದೆ. ಇದಕ್ಕೆ ಅಸಮಾಧಾನ ಹೊಗೆ ಎದ್ದಿದೆ.
ಈ ಬಗ್ಗೆ ಬಿಜೆಪಿ ಸಂಸದ ಡಿ ವಿ ಸದಾನಂದಗೌಡ ಅವರು ಮಾತನಾಡಿ, ಈ ತಂಡವನ್ನು ಅಸಮರ್ಥರ ತಂಡ ಎನ್ನುತ್ತಿಲ್ಲ. ಆದರೆ ಅಲ್ಲೋ.. ಇಲ್ಲೋ ವ್ಯತ್ಯಾಸಗಳು ಇವೆ. ಇದನ್ನೆಲ್ಲ ಮಾಡುವ ಮುನ್ನ ಕೇಂದ್ರದ ನಾಯಕರು ಬಂದು ರಾಜ್ಯದ ಹಿರಿಯರ ಜೊತೆ ಕುಳಿತು, ತಿಳಿದುಕೊಳ್ಳಬೇಕಿತ್ತು. ಈ ತಂಡ ಎಲ್ಲರನ್ನೂ ಒಟ್ಟಿಗೆ ತೆಗೆದುಕೊಂಡು ಹೋದರೆ ಖಂಡಿತ ಯಶಸ್ವಿಯಾಗುತ್ತದೆ. ಮತ್ತೆ ಏನಾದರೂ ಹಳೆಯ ಚಾಳಿ, ಮುಂದುವರೆಸಿದರೆ ಅದು ಪಕ್ಷದ ಮೇಲೆ ಸಮಸ್ಯೆ ಆಗುತ್ತದೆ ಎಂದಿದ್ದಾರೆ.
ದಕ್ಷಿಣ ಭಾಗಕ್ಕೆ ಹೆಚ್ಚು ಆದ್ಯತೆ ಸಿಕ್ಕಿದೆ, ಉತ್ತರ ಭಾಗಕ್ಕೆ ಸರಿಯಾಗಿ ಸಿಕ್ಕಿಲ್ಲ ಎಂಬ ಮಾತುಗಳು ಇವೆ. ಅವರಿಂದ ಹೊಸ ವಿಷಯ ತೆಗೆದುಕೊಂಡು ತಂಡವನ್ನು ಮಾಡಬೇಕಿತ್ತು. ಈ ಅತೃಪ್ತರ ಸಮಸ್ಯೆ ಇರುತ್ತಿರಲಿಲ್ಲ. ಇವತ್ತಿನ ಟೀಮ್ ನಲ್ಲಿ ಅಧ್ಯಕ್ಷರನ್ನು ಕ್ರಿಯಾಶೀಲರನ್ನು ನೇಮಕ ಮಾಡಿದ್ದಾರೆ. ಜಿಲ್ಲಾ ಹಾಗೂ ತಾಲೂಕು ಪದಾಧಿಕಾರಿಗಳ ನೇಮಕ ಆಗುವಾಗ ಸಮಾನವಾಗಿ ನೇಮಕ ಆಗಬೇಕು ಎಂದಿದ್ದಾರೆ.