Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯ ಬಿಜೆಪಿ ಘಟಕದಲ್ಲಿ ಬಿಎಸ್ವೈ ಆಪ್ತರಿಗೆ ಸ್ಥಾನ : ಅಸಮಾಧಾನ ಹೊರ ಹಾಕಿದ ಸದಾನಂದಗೌಡ

---Advertisement---

 

 

ಬೆಂಗಳೂರು: ಬಿಜೆಪಿ ಪಕ್ಷದಲ್ಲೂ ಕೆಲವರ ಅಸಮಾಧಾನದ ಹೊಗೆ ಬೂದಿ ಮುಚ್ಚಿದ ಕೆಂಡದಂತೆ ಇದೆ. ಆಗಾಗ ಬೂದಿ ಸರಿದಾಗ ಕೆಂಡ ಕೆಂಪಾಗುತ್ತದೆ. ಇದೀಗ ರಾಜ್ಯ ಬಿಜೆಪಿ ಘಟಕಕ್ಕೆ ನೂತನ ಪದಾಧಿಕಾರಿಗಳ ಪಟ್ಟಿಯನ್ನು ಆಯ್ಕೆ‌ ಮಾಡಲಾಗಿದೆ. ಇದರಲ್ಲಿ ಯಡಿಯೂರಪ್ಪ ಅವರ ಆಪ್ತರ ಪೈಕಿ 6 ಜನರನ್ನು ಆಯ್ಕೆ ಮಾಡಲಾಗಿದೆ. ಆಪ್ತರಿಗೆ ಸ್ಥಾನ ನೀಡಲಾಗಿದೆ‌. ಇದಕ್ಕೆ ಅಸಮಾಧಾನ ಹೊಗೆ ಎದ್ದಿದೆ.

ಈ ಬಗ್ಗೆ ಬಿಜೆಪಿ ಸಂಸದ ಡಿ ವಿ ಸದಾನಂದಗೌಡ ಅವರು ಮಾತನಾಡಿ, ಈ ತಂಡವನ್ನು ಅಸಮರ್ಥರ ತಂಡ ಎನ್ನುತ್ತಿಲ್ಲ. ಆದರೆ ಅಲ್ಲೋ.. ಇಲ್ಲೋ ವ್ಯತ್ಯಾಸಗಳು ಇವೆ. ಇದನ್ನೆಲ್ಲ ಮಾಡುವ ಮುನ್ನ ಕೇಂದ್ರದ ನಾಯಕರು ಬಂದು ರಾಜ್ಯದ ಹಿರಿಯರ ಜೊತೆ ಕುಳಿತು, ತಿಳಿದುಕೊಳ್ಳಬೇಕಿತ್ತು. ಈ ತಂಡ ಎಲ್ಲರನ್ನೂ ಒಟ್ಟಿಗೆ ತೆಗೆದುಕೊಂಡು ಹೋದರೆ ಖಂಡಿತ ಯಶಸ್ವಿಯಾಗುತ್ತದೆ. ಮತ್ತೆ ಏನಾದರೂ ಹಳೆಯ ಚಾಳಿ, ಮುಂದುವರೆಸಿದರೆ ಅದು ಪಕ್ಷದ ಮೇಲೆ ಸಮಸ್ಯೆ ಆಗುತ್ತದೆ ಎಂದಿದ್ದಾರೆ.

ದಕ್ಷಿಣ ಭಾಗಕ್ಕೆ ಹೆಚ್ಚು ಆದ್ಯತೆ ಸಿಕ್ಕಿದೆ, ಉತ್ತರ ಭಾಗಕ್ಕೆ ಸರಿಯಾಗಿ ಸಿಕ್ಕಿಲ್ಲ ಎಂಬ ಮಾತುಗಳು ಇವೆ. ಅವರಿಂದ ಹೊಸ ವಿಷಯ ತೆಗೆದುಕೊಂಡು ತಂಡವನ್ನು ಮಾಡಬೇಕಿತ್ತು. ಈ ಅತೃಪ್ತರ ಸಮಸ್ಯೆ ಇರುತ್ತಿರಲಿಲ್ಲ. ಇವತ್ತಿನ ಟೀಮ್ ನಲ್ಲಿ ಅಧ್ಯಕ್ಷರನ್ನು ಕ್ರಿಯಾಶೀಲರನ್ನು ನೇಮಕ ಮಾಡಿದ್ದಾರೆ. ಜಿಲ್ಲಾ ಹಾಗೂ ತಾಲೂಕು ಪದಾಧಿಕಾರಿಗಳ ನೇಮಕ ಆಗುವಾಗ ಸಮಾನವಾಗಿ ನೇಮಕ ಆಗಬೇಕು ಎಂದಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment