ಹಾಸ್ಟೆಲ್ ನಲ್ಲಿ ಊಟ ಸೇವಿಸಿದ್ದ 27 ವಿದ್ಯಾರ್ಥಿನಿಯರು ಅಸ್ವಸ್ಥ..!

suddionenews
1 Min Read

ಶಿವಮೊಗ್ಗ: ಹಾಸ್ಟೇಲ್ ನಲ್ಲಿ ಊಟ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಒಟ್ಟು 27 ವಿದ್ಯಾರ್ಥಿನಿಯರು ಊಟದ ಬಳಿಕ ಅಸ್ವಸ್ಥರಾಗಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಸಹ್ಯಾದ್ರಿ ಕಾಲೇಜಿನ 27 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ. ಹಾಸ್ಟೇಲ್ ನಲ್ಲಿ ನಿನ್ನೆ ರಾತ್ರಿ ಊಟ ಸೇವಿಸಿದ ಬಳಿಕ ನಡೆದಿರೋ ಘಟನೆ ಇದು. ಊಟದ ಬಳಿಕ ಹೊಟ್ಟೆನೋವು, ವಾಂತಿಯಿಂದ ವಿದ್ಯಾರ್ಥಿನಿಯರು ಬಳಲಿದ್ದಾರೆ. ತಕ್ಷಣ ಅಸ್ವಸ್ಥಗೊಂಡ ವಿದ್ಯಾರ್ಥಿನಿಯರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.

ಇಂಥ ಘಟನೆಗಳು ಸಾಕಷ್ಟು ಜಿಲ್ಲೆಗಳಲ್ಲಿ ನಡೆಯುತ್ತಿವೆ. ವಸತಿ ಶಾಲೆಗಳಲ್ಲೂ ಊಟದಲ್ಲಿ ಹಲ್ಲಿ ಬಿದ್ದು ಮಕ್ಕಳು ಅಸ್ವಸ್ಥರಾಗಿರುವ ಘಟನೆ ಪದೇ ಪದೇ ಹಲವು ಜಿಲ್ಲೆಗಳಲ್ಲಿ ನಡೆದಿತ್ತು. ಸ್್ಯ ಸಹ್ಯಾದ್ರಿ ಕಾಲೇಜಿನ ವಿದ್ಯಾರ್ಥಿಗಳು ಉಳಿದುಕೊಂಡಿದ್ದ ಕಾಲೇಜಿನಲ್ಲಿ ಆಗಿರುವುದೇನು ಎಂಬುದನ್ನ ವಿಚಾರಣೆ ಮಾಡಲಾಗುತ್ತಿದೆ. ಸದ್ಯ ವಿದ್ಯಾರ್ಥಿಗಳಿಗೆ ಚಿಕಿತ್ಸೆ ಕೊಡಿಸಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *