ಕ್ಯಾಲಿಫೋರ್ನಿಯಾದ ಬರ್ಕ್ಲಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ಕರ್ನಾಟಕ ಮೂಲದ ಸಾಕೇತ್ ಶ್ರೀನಿವಾಸಯ್ಯ ನಿಗೂಢವಾಗಿ ಸಾವನ್ನಪ್ಪಿದ್ದಾರೆ.ಕಳೆದ ಆರು ದಿನಗಳಿಂದ 22 ವರ್ಷದ ಸಾಕೇತ್ ಶ್ರೀನಿವಾಸಯ್ಯ ನಾಪತ್ತೆಯಾಗಿದ್ದರು.
ಸಾನ್ ಫ್ರಾನ್ಸಿಸ್ಕೋದಲ್ಲಿರುವ ಭಾರತೀಯ ವಾಣಿಜ್ಯ ದೂತಾವಾಸ ಕಚೇರಿಯು ಪೊಲೀಸರು ಅವರ ಮೃತದೇಹವನ್ನು ಪತ್ತೆಹಚ್ಚಿರುವುದನ್ನು ದೃಢಪಡಿಸಿದ್ದು, ಅವರ ದೇಹವನ್ನು ಶೀಘ್ರದಲ್ಲೇ ಭಾರತಕ್ಕೆ ಸಾಗಿಸಲು ಅಗತ್ಯವಿರುವ ಎಲ್ಲಾ ಸಹಾಯವನ್ನು ನೀಡುವುದಾಗಿ ತಿಳಿಸಿದೆ.
22 ವರ್ಷದ ಸಾಕೇತ್ ಫೆ. 9ರ ಬೆಳಿಗ್ಗಿನಿಂದ ಕಾಣೆಯಾಗಿದ್ದರು. ಅವರು ಬರ್ಕ್ಲಿಯ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದಲ್ಲಿ ಎಂ.ಎಸ್ಸಿ ವ್ಯಾಸಂಗ ಮಾಡುತ್ತಿದ್ದರು.ನಾಪತ್ತೆ ಆಗಿರುವ ಬಗ್ಗೆ ಬರ್ಕ್ಲಿ ಪೊಲೀಸ್ ಇಲಾಖೆಯಲ್ಲಿ ದೂರು ದಾಖಲಾಗಿತ್ತು. ಕಳೆದ ಆರು ದಿನಗಳಿಂದ ಪೊಲೀಸರು ಸಾಕೇತ್‌ಗಾಗಿ ಹುಡುಕಾಟ ನಡೆಸುತ್ತಿದ್ದರು. ಬರ್ಕ್ಲಿ ಬೆಟ್ಟಗಳ ತಪ್ಪಲಿನಲ್ಲಿ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸರು ಹೇಳಿದ್ದಾರೆ.


