ಅತಿಥಿ ಉಪನ್ಯಾಸಕರ ವೇತನ 5 ಸಾವಿರ ಹೆಚ್ಚಳ : ಆದೇಶ ಜಾರಿ ಯಾವಾಗಿಂದ..?

suddionenews
1 Min Read

ಬೆಂಗಳೂರು: ಅತಿಥಿ ಉಪನ್ಯಾಸಕರು ಹಲವು ಬೇಡಿಕೆಗಳೊಂದಿಗೆ ಪ್ರತಿಭಟನೆ ನಡೆಸಿದ್ದಾರೆ. ಅದರಲ್ಲಿ ವೇತನ ಹೆಚ್ಚಳ ಕೂಡ ಒಂದು. ಇದೀಗ ಅತಿಥಿ ಉಪನ್ಯಾಸಕರ ಬೇಡಿಕೆಗಳಲ್ಲಿ ವೇತನ ಹೆಚ್ಚಳವನ್ನು ಸರ್ಕಾರ ಪರಿಗಣಿಸಿದೆ. ಅವರ ಆಸೆಯಂತೆ ಐದು ಸಾವಿರ ವೇತನ ಹೆಚ್ಚಳಕ್ಕೆ ಸರ್ಕಾರ ನಿರ್ಧರಿಸಿದ್ದು, ಜನವರಿ 1 ರಿಂದಾನೇ ಈ ಆದೇಶ ಜಾರಿಗೆ ಬರಲಿದೆ.

ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಅತಿಥಿ ಉಪನ್ಯಾಸಕರ ವೇತನವನ್ನು ಐದು ಸಾವಿರ ರೂಪಾಯಿಗೆ ಹೆಚ್ಚಳ ಮಾಡಲು ಸರ್ಕಾರ ನಿರ್ಧರಿಸಿದೆ. ಈ ಸಂಬಂಧ ಈಗಾಗಲೇ ಸಂಘಟನೆಗಳ ಮುಖಂಡರ ಜೊತೆಗೆ, ಉನ್ನತ ಶಿಕ್ಷಣ ಅಚಿವ ಡಾ. ಎಂ ಸಿ ಸುಧಾಕರ್ ಚರ್ಚೆ ನಡೆಸಿದ್ದಾರೆ. ಈ ಸಭೆಯಲ್ಲಿ ವೇತನ ಹೆಚ್ಚಳ, ಆರೋಗ್ಯ ವಿಮೆ ಸೇರಿದಂತೆ ಹಲವು ವಿಚಾರಗಳನ್ನು ಚರ್ಚೆ ಮಾಡಲಾಗಿದೆ. ಬಳಿಕ ವಿದ್ಯಾರ್ಹತೆ, ಅನುಭವದ ಆಧಾರದ ಮೇಲೆ ವೇತನ ಹೆಚ್ಚಳದ ನಿರ್ಧಾರ ಮಾಡಲಾಗಿದೆ. ಸದ್ಯಕ್ಕೆ 26 ಸಾವಿರದಿಂದ 32 ಸಾವಿರ ಬರುತ್ತಿದೆ. 10,600 ಅತಿಥಿ ಉಪನ್ಯಾಸಕರು ಕೆಲಸ ನಿರ್ವಹಿಸುತ್ತಿದ್ದಾರೆ.

ಈ ಸಂಬಂಧ ಮಾಹಿತಿ ಹಂಚಿಕೊಂಡಿರುವ ಸಚಿವ ಎಂ ಸಿ ಸುಧಾಕರ್, ನಮ್ಮ ಮುಂದೆ ಅತಿಥಿ ಉಪನ್ಯಾಸಕರು ಹಲವು ಬೇಡಿಕೆಗಳನ್ನು ಇಟ್ಟಿದ್ದರು. ನಾವೂ ಕೂಡ ಅವರ ಸಮಸ್ಯೆಗಳನ್ನು ಆಲಿಸಿದ್ದೇವೆ. ಸೇವೆ ಕಾಯಂ ಮಾಡುವುದು ಅವರ ಪ್ರಮುಖ ಬೇಡಿಕೆಯಾಗಿದೆ. ಅತಿಥಿ ಉಪನ್ಯಾಸಕರಿಗೆ ತಿಂಗಳಲ್ಲಿ ಒಂದು ದಿನ ವೇತನ ಸಹಿತ ರಜೆ ನೀಡಲಾಗುವುದು. ಜೊತೆಗೆ ಅತಿಥಿ ಉಪನ್ಯಾಸಕರನ್ನು ಬಹಳ ಗೌರವದಿಂದ ನಡೆಸಿಕೊಳ್ಳುತ್ತೇವೆ‌. ಈಗ ಏನು 10,600 ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಎಲ್ಲರಿಗೂ ವೇತನ ಹೆಚ್ಚಳದ ಲಾಭ ಸಮಾನವಾಗಿ ದೊರೆಯಲಿದೆ ಎಂದಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *