Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕೆಲಸ ಬಾರದೆ ತಪ್ಪಿಸಿಕೊಳ್ಳುವವರ ವೇತನ ಕಡಿತ ಶಿಕ್ಷೆ : ಸಚಿವ ಸುಧಾಕರ್

Facebook
Twitter
Telegram
WhatsApp

ಬೆಂಗಳೂರು : ಇಲಾಖೆಯಲ್ಲಿ ಗುಣಾತ್ಮಕ ಬದಲಾವಣೆ ತರುವ ನಿಟ್ಟಿನಲ್ಲಿ ಎಲ್ಲ ಹಂತದ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಬಯೋಮೆಟ್ರಿಕ್‌ ಹಾಜರಾತಿ ಆಧರಿಸಿ ವೇತನ ಪಾವತಿಸುವ ವ್ಯವಸ್ಥೆ ಕಡ್ಡಾಯಗೊಳಿಸಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ.

ನಿಜವಾದ ಕಾರಣಗಳಿಲ್ಲದೆ ಕೆಲಸ ಕದಿಯುವುದನ್ನು ಸಹಿಸಲು ಆಗುವುದಿಲ್ಲ. ಅವರ ಕರ್ತವ್ಯಲೋಪದಿಂದ ಆರೋಗ್ಯ ಸೇವೆಯಲ್ಲಿ ವ್ಯತ್ಯಯ ಆಗುತ್ತದೆ. ಹೀಗಾಗಿ ಕರ್ತವ್ಯದ ವೇಳೆಯಲ್ಲಿ ಹಾಜರಿಲ್ಲದ ಯಾರೇ ಆಗಲಿ ಅಂತಹವರ ವೇತನ ಕಡಿತಕ್ಕೆ ಸೂಚನೆ ನೀಡಲಾಗಿದೆ. ಇಲಾಖೆ ಅಡಿಯಲ್ಲಿ ಬರುವ ಎಲ್ಲ ಸಂಸ್ಥೆಗಳು ಮತ್ತು ಆಸ್ಪತ್ರೆಗಳಲ್ಲಿ ಪ್ರತಿಯೊಬ್ಬ ಅಧಿಕಾರಿ ಮತ್ತು ಸಿಬ್ಬಂದಿಗೂ ಅವರ “ಆಧಾರ್‌ “ ಆಧರಿತ ಬಯೋಮೆಟ್ರಿಕ್‌ ಹಾಜರಾತಿ (ಎಇಬಿಎಎಸ್‌) ಕಡ್ಡಾಯಗೊಳಿಸಲಾಗಿದೆ. ಅದನ್ನು ಆಧರಿಸಿಯೇ ಇನ್ನು ಮುಂದೆ ವೇತನ ನೀಡುವಂತೆ ಅಧಿಕೃತ ಆದೇಶ ಹೊರಡಿಸಲಾಗಿದೆ ಎಂದು ವಿವರಿಸಿದರು.

ಕೋವಿಡ್‌ ಕಾರಣಕ್ಕೆ ಸ್ಥಗಿತಗೊಂಡಿದ್ದ ಬಯೋಮೆಟ್ರಿಕ್‌ ಹಾಜರಾತಿ ಪದ್ಧತಿಯನ್ನು ಕಳೆದ ಎರಡು ತಿಂಗಳ ಹಿಂದಿನಿಂದಲೇ ಮತ್ತೆ ಕಡ್ಡಾಯಗೊಳಿಸಲಾಗಿದೆ. ಅನೇಕ ಸಭೆಗಗಳಲ್ಲಿ ಮತ್ತು ಸುತ್ತೋಲೆ ಮೂಲಕವೂ ಈ ಬಗ್ಗೆ ಸೂಚನೆ ನೀಡಲಾಗಿದೆ. ಆದರೂ ಕೆಲ ಅಧಿಕಾರಿಗಳು ಮತ್ತು ಸಿಬ್ಬಂದಿ ತಮ್ಮ ಹಾಜರಾತಿ ದಾಖಲಿಸದಿರುವ ಪ್ರಕರಣಗಳು ಗಮನಕ್ಕೆ ಬಂದಿವೆ. ಇದನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಈಗ ಸ್ಪಷ್ಟ ಎಚ್ಚರಿಕೆ ಜತೆಗೆ ಅಧಿಕೃತ ಆದೇಶ ನೀಡಿದ್ದುಅಂತಹ ಪ್ರಕರಣಗಳನ್ನು ಗೈರು ಹಾಜರಿ ಎಂದು ಪರಿಗಣಿಸಿ ವೇತನ ಕಡಿತಗೊಳಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಇಲಾಖೆಯ ಆಸ್ಪತ್ರೆ, ಸಂಸ್ಥೆ ಮತ್ತು ಕೇಂದ್ರಗಳ ಜವಾಬ್ದಾರಿ ನಿರ್ವಹಿಸುವ ಡಿಡಿಒ ( ಸ್ಯಾಲರಿ ಡ್ರಾಯಿಂಗ್‌ ಆಫೀಸರ್‌)ಗಳು ಪ್ರತೀ ತಿಂಗಳು ಎಇಬಿಎಎಸ್‌ ನಲ್ಲಿ ತಮ್ಮ ವ್ಯಾಪ್ತಿಯ ಎಲ್ಲ ಸಿಬ್ಬಂದಿಗಳ ಹಾಜರಾತಿ ಪರಿಶೀಲಿಸಿ ಅದರ ಅನುಸಾರವೇ ವೇತನ ಪಾವತಿಗೆ ವರದಿ ಸಿದ್ಧಪಡಿಸಿ ಸಂಬಂಧಿಸಿದ ಅಧಿಕಾರಿಗಳ ಮೂಲಕ ಆಯಾ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗೆ (ಡಿಎಚ್‌ಒ) ಸಲ್ಲಿಸಬೇಕು. ಅವರು ಅದನ್ನು ಪರಿಶೀಲಿಸಿ ವೇತನ ಬಿಡುಗಡೆ ಮತ್ತು ಕಡಿತಕ್ಕೆ ಸೂಚನೆ ನೀಡಲಿದ್ದಾರೆ. ಡಿಎಚ್‌ಒ ಅವರು ಕೈಗೊಂಡ ಕ್ರಮಗಳನ್ನ ಮೇಲಿನ ಹಂತದ ಅಧಿಕಾರಿಗಳು ನಿಯಮಿತವಾಗಿ ಪರಿಶೀಲಿಸಲಿದ್ದಾರೆ ಎಂದು ಸ್ಪಷ್ಟಪಡಿಸಿದರು.

*ಹಾಜರಾತಿ ದಾಖಲು ವೇಳಾಪಟ್ಟಿ*
1. ಆಡಳಿತ ಕಚೇರಿಗಳು : ಬೆಳಗ್ಗೆ – 10 ; ಮಧ್ಯಾಹ್ನ- 1 ; ಸಂಜೆ – 5.30
2. ಆಸ್ಪತ್ರೆಗಳು : ಬೆಳಗ್ಗೆ – 9 ; ಮಧ್ಯಾಹ್ನ – 1 ; ಸಂಜೆ – 4.30 (ಸಾರ್ವತ್ರಿಕ ರಜಾ ದಿನಗಳಲ್ಲಿ ಬೆಳಗ್ಗೆ ಮತ್ತು ಸಂಜೆ ಎರಡು ಬಾರಿ ಮಾತ್ರ)
3. ಆಸ್ಪತ್ರೆಗಳಲ್ಲಿ ಪಾಳಿಯಲ್ಲಿ ಕೆಲಸ ಮಾಡುವವರು : 1ನೇ ಪಾಳಿ – ಬೆಳಗ್ಗೆ-8 ; ಬೆಳಗ್ಗೆ- 11, ಮಧ್ಯಾಹ್ನ – 2 ; 2ನೇ ಪಾಳಿ – ಮಧ್ಯಾಹ್ನ – 2 ; ಸಂಜೆ – 5 ; ರಾತ್ರಿ – 8 ; 3ನೇ ಪಾಳಿ – ರಾತ್ರಿ – 8 ; ಮಧ್ಯ ರಾತ್ರಿ 12 ; ಮರುದಿನ ಬೆಳಗ್ಗೆ- 8 ; (ತಾಂತ್ರಿಕ ಅಡಚಣೆ ಇರುವ ಕಡೆ ಮಧ್ಯ ರಾತ್ರಿ 12ಕ್ಕೆ ಬೇಡ, ಸಮಸ್ಯೆ ಬಗೆಹರಿದ ಬಳಿಕ ಕಡ್ಡಾಯ)
4. ವಿಶೇಷ ಸಂದರ್ಭಗಳಲ್ಲಿ (ಅಪಘಾತ, ತುರ್ತು ಸೇವೆ, ಆಪರೇಷನ್‌) ಕರ್ತವ್ಯ ನಿರತ ವೈದ್ಯರು, ಶುಶ್ರೂಷಕ ಸಿಬ್ಬಂದಿ ಮೂರು ಬಾರಿ ಹಾಜರಾತಿ ಹಾಕಲು ಸಾಧ್ಯವಾಗದಿದ್ದಲ್ಲಿ ಸದರಿ ಸಂದರ್ಭಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಬಗ್ಗೆ ಜಿಲ್ಲಾ ಶಸ್ತ್ರಚಿಕಿತ್ಸಕರು ಅಥವಾ ಆಡಳಿತ ವೈದ್ಯಾಧಿಕಾರಿಗಳು ಖಾತರಿಪಡಿಸಿಕೊಂಡು ಆ ದಿವಸಗಳಲ್ಲಿ ವಿನಾಯಿತಿ ನೀಡಬಹುದು. ಆದರೆ ಕನಿಷ್ಟ ಎರಡು ಬಾರಿ (ಆಗಮನ ಮತ್ತು ನಿರ್ಗಮನ) ಹಾಜರಾತಿ ದಾಖಲಿಸಲೇಬೇಕು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ತಂದೆ ತಾಯಿಗೆ ಮಗಳ ಕುಟುಂಬದಲ್ಲಿ ತುಂಬ ಸಮಸ್ಯೆ ಇದೆ

ಈ ರಾಶಿಯ ತಂದೆ ತಾಯಿಗೆ ಮಗಳ ಕುಟುಂಬದಲ್ಲಿ ತುಂಬ ಸಮಸ್ಯೆ ಇದೆ, ಈ ರಾಶಿಯವರ ಉದ್ಯೋಗದಲ್ಲಿ ತುಂಬಾ ಸಮಸ್ಯೆ ಅದರ ಜೊತೆ ಹಣಕಾಸಿನ ಸಮಸ್ಯೆ ಕಾಡಲಿದೆ, ಬುಧವಾರ ರಾಶಿ ಭವಿಷ್ಯ -ಏಪ್ರಿಲ್-24,2024 ಸೂರ್ಯೋದಯ: 05:57,

ಬಿ ಎನ್ ಚಂದ್ರಪ್ಪ ಪರ ಮತಯಾಚನೆ ಮಾಡಿ, ಮೋದಿ, ಅಮಿತ್ ಶಾ ವಿರುದ್ಧ ಗುಡುಗಿದ ಸಿದ್ದರಾಮಯ್ಯ

ಚಿತ್ರದುರ್ಗ: ಈ ತಿಂಗಳ 26 ಕ್ಕೆ ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಅಭ್ಯರ್ಥಿ ಬಿಎನ್ ಚಂದ್ರಪ್ಪ ರನ್ನ ಹೆಚ್ಚು ಮತಗಳಿಂದ ಗೆಲ್ಲಿಸಿಕೊಡಬೇಕು ಎಂದು ಮನವಿ ಮಾಡ್ತೀನಿ. ಕಳೆದ 10 ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿದೆ ಮೋದಿಯವರು ಪ್ರಧಾನಿಯಾಗಿದ್ದಾರೆ.

ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಬರುತ್ತಿದ್ದಂತೆ ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸುತ್ತೇವೆ: ಪ್ರಿಯಾಂಕಾಗಾಂಧಿ ಭರವಸೆ

ಚಿತ್ರದುರ್ಗ ಏ 23: ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸಲು ಮೇಲದ ಮೇಲೆ ನಾವು ಕೇಂದ್ರಕ್ಕೆ ಕೇಳುತ್ತಲೇ ಇದ್ದೇವೆ. ಆದರೂ ಇದುವರೆಗೂ ಏಕೆ ಸ್ಪಂದಿಸುತ್ತಿಲ್ಲ ಮೋದಿಯವರೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಾರವಾಗಿ ಪ್ರಶ್ನಿಸಿದರು. ಇಲ್ಲಿ

error: Content is protected !!