ಸಾಲುಮರದ ವೀರಾಚಾರಿ ಆತ್ಮಹತ್ಯೆ : ನ್ಯಾಯ ಸಿಗದೆ ಇದ್ದದ್ದಕ್ಕೆ ಈ ರೀತಿ ಮಾಡಿಕೊಂಡರಾ..?

1 Min Read

 

ದಾವಣಗೆರೆ, ಸುದ್ದಿಒನ್,ಸೆ.20 : ನ್ಯಾಯಬೆಲೆ ಅಂಗಡಿ ಅಕ್ರಮದ ವಿರುದ್ಧ ಹೋರಾಟ ಮಾಡುತ್ತಿದ್ದ, ಸಾಲುಮರದ ವೀರಾಚಾರಿ, ಪರಿಸರ ಪ್ರೇಮಿ ಎಂದೇ ಪ್ರಸಿದ್ಧಿ ಪಡೆದ ಮಿಟ್ಲಕಟ್ಟೆ ವೀರಾಚಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ರಾಜ್ಯ ಪ್ರಶಸ್ತಿ ವಿಜೇತ, ಸಾಲುಮರದ ವೀರಾಚಾರಿ, ಮಧ್ಯರಾತ್ರಿ ಮರಕ್ಕೆ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ. ಮಿಟ್ಲಕಟ್ಟೆ ಗ್ರಾಮದಲ್ಲಿ ನ್ಯಾಯಬೆಲೆ ಅಂಗಡಿ ಅಕ್ರಮದ ವಿರುದ್ಧ ಹೋರಾಟ ಮಾಡುತ್ತಿದ್ದ ವೀರಾಚಾರಿ, ನ್ಯಾಯಾಲಯದಲ್ಲಿ ನ್ಯಾಯ ಸಿಗದಿದ್ದರೆ ಜನರಲ್ಲಿ ನ್ಯಾಯ ಸಿಗದಿದ್ದರೆ ದೇವರಲ್ಲಿ ನ್ಯಾಯ ಸಿಗದಿದ್ದರೆ ನೇಣಿಗೆ ಶರಣು ಎಂಬ ವಾಗ್ದಾನ ಮಾಡಿದ್ದರು. ಇದೀಗ ವಾಗ್ದಾನದಂತೆ ನೆನ್ನೆ ರಾತ್ರಿ 2 ಗಂಟೆಗೆ ನೇಣಿಗೆ ಶರಣಾಗಿದ್ದಾರೆ.

 

ಮಿಟ್ಲಗಟ್ಟೆ ಗ್ರಾಮದ ನ್ಯಾಯಬೆಲೆ ಅಂಗಡಿಯಲ್ಲಿ ಬಡವರಿಗೆ ಸೂಕ್ತವಾಗಿ ಅಕ್ಕಿ ವಿತರಣೆಯಾಗುತ್ತಿಲ್ಲ. ನ್ಯಾಯಬೆಲೆ ಅಕ್ರಮದ ವಿರುದ್ಧ ನಿರಂತರವಾಗಿ ಕಳೆದ ಒಂದು ವರ್ಷದಿಂದ ಹೋರಾಟ ನಡೆಸುತ್ತಿದ್ದ ವೀರಾಚಾರಿ. ನಿನ್ನೆ ಇದೇ ವಿಚಾರವಾಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನ್ಯಾಯ ಬೆಲೆ ಅಂಗಡಿ ರದ್ದು ಮಾಡಬೇಕು.. ಬೇಡವೇ ಎಂಬ ಬಗ್ಗೆ ಚರ್ಚೆ ನಡೆದಿತ್ತು. ಆದರೆ ಇಂದು ನೇಣಿಗೆ ಕೊರಳೊಡ್ಡಿದ್ದಾರೆ.

3000ಕ್ಕೂ ಹೆಚ್ಚು ಮರಗಳನ್ನು ಬೆಳೆಸಿ ದಾವಣಗೆರೆ ಜಿಲ್ಲೆಗೆ ಚಿರಪರಿಚಿತರಾದ ವೀರಾಚಾರಿಗೆ ಸಾಲುಮರ ಬೆಳೆಸಿದ್ದಕ್ಕಾಗಿ ಸರ್ಕಾರ ರಾಜೋತ್ಸವ ಪ್ರಶಸ್ತಿ ನೀಡಿ ಗೌರವಿಸಿತ್ತು.

Share This Article
Leave a Comment

Leave a Reply

Your email address will not be published. Required fields are marked *