Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮುಂದಿನ ಚುನಾವಣೆಗಳಲ್ಲಿ ಸಮಾಜವಾದಿ ಪಕ್ಷ ಸ್ವತಂತ್ರವಾಗಿ ಸ್ಪರ್ಧಿಸಲಿದೆ : ಮಂಜಪ್ಪ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ. ಜ. 05 : ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಿನ ದಿನಗಳಲ್ಲಿ ಜಿಲ್ಲಾ ಪಂಚಾಯಿತಿ/ತಾಲ್ಲೂಕು ಪಂಚಾಯಿತಿ/ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ನಡೆಸಲಿದೆ. ಈ ಚುನಾವಣೆಗಳಲ್ಲಿ ನಮ್ಮ ಪಕ್ಷ ಯಾವುದೇ ಪಕ್ಷದೊಂದಿಗೆ ಹೊಂದಾಣಿಕೆ ಮಾಡಿಕೊಳ್ಳದೇ ಸ್ವತಂತ್ರವಾಗಿ ಸ್ಪರ್ಧೆ ಮಾಡಲಿದೆ ಎಂದು ಸಮಾಜವಾದಿ ಪಕ್ಷದ ರಾಜ್ಯಾಧ್ಯಕ್ಷ ರಾದ ಎನ್. ಮಂಜಪ್ಪ ತಿಳಿಸಿದರು.

ಚಿತ್ರದುರ್ಗ ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು,  ರಾಜ್ಯದಲ್ಲಿ ಕಳೆದ 4-5 ವರ್ಷಗಳಿಂದ ಪಕ್ಷವನ್ನು ಸಂಘಟನೆ ಮಾಡಲಾಗುತ್ತಿದೆ. ಪಕ್ಷದ ಮುಖ್ಯಸ್ಥರಾದ ಅಖಿಲೇಶ್ ಯಾದವ್‍ರವರು ರಾಜ್ಯದಲ್ಲಿ ಪಕ್ಷವನ್ನು ಸಂಘಟಿಸಲು ಪೂರ್ಣ ಪ್ರಮಾಣದ ಸಹಕಾರವನ್ನು ನೀಡುತ್ತಿದ್ದಾರೆ. ಈಗಾಗಲೇ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪ್ರವಾಸ ಮಾಡುವ ಮೂಲಕ ಪಕ್ಷವನ್ನು ಸಂಘಟಿಸಲಾಗುತ್ತಿದೆ ಎಂದರು.

ಮುಂಬರುವ ದಿನಗಳಲ್ಲಿ ರಾಜ್ಯದಲ್ಲಿ ಸಮಾಜವಾದಿ ಪಾರ್ಟಿ ತನ್ನ ಕಾಲ ಮೇಲೆ ನಿಲ್ಲುವಂತಹ ಕಾರ್ಯವನ್ನು ಮಾಡುತ್ತಿದೆ.ಇದಕ್ಕೆ ಎಲ್ಲಾ ಮತದಾರರು ಸಹಕಾರ ನೀಡುತ್ತಿದ್ದಾರೆ.ಬೇರೆ ಬೇರೆ ಪಕ್ಷಗಳಲ್ಲಿ ಇರುವಂತಹ ಬಹುತೇಕ ಕಾರ್ಯಕರ್ತರು ನಮ್ಮ ಪಕ್ಷಕ್ಕೆ ಬರುತ್ತಿದ್ದಾರೆ ಅವರನ್ನ ಗುರುತಿಸಿ ವಿವಿಧ ರೀತಿಯ ಹುದ್ದೆಗಳನ್ನು ನೀಡಲಾಗುತ್ತಿದೆ ಎಂದು ತಿಳಿಸಿದ ಅವರು.  ಮುಂಬರುವ ನಾಲ್ಕು ವಿಧಾನ ಪರಿಷತ್ ಸದಸ್ಯರ ಸ್ಥಾನಗಳ ಚುನಾವಣೆಯಲ್ಲಿ ನಮ್ಮ ಪಕ್ಷ ಸ್ಪರ್ಧೆ ಮಾಡಲಿದೆ. ಬೇರೆ ಚುನಾವಣೆಗಳಿಗೆ ಈಗಾಗಲೇ ಈ ಚುನಾವಣೆಯಲ್ಲಿ ಸ್ಪರ್ಧೆ ಮಾಡುವವರನ್ನು ಹುಡುಕುವ ಪ್ರಯತ್ನ ನಡೆಯುತ್ತಿದೆ.

ಸಮಾಜವಾದಿ ಪಾರ್ಟಿಯ ಜಿಲ್ಲಾಧ್ಯಕ್ಷರಾದ ಲಕ್ಷ್ಮಿಕಾಂತ. ಎಸ್ ಮಾತನಾಡಿ  ರಾಜ್ಯದ ಜನತೆ ಎಲ್ಲಾ ಪಕ್ಷಗಳ ಅಧಿಕಾರವನ್ನು ನೋಡಿದ್ದಾರೆ. ಅವರ ದುರಾಡಳಿತದಿಂದ ಬೇಸತ್ತಿದ್ದಾರೆ. ಪರ್ಯಾಯಕ್ಕಾಗಿ ಪರದಾಡು ತ್ತಿದ್ದಾರೆ. ಈ ಹಿನ್ನಲೆಯಲ್ಲಿ ನಮ್ಮ ಪಕ್ಷ ಇದರ ಸದುಪಯೋಗ ಪಡೆದುಕೊಂಡು ಮುಂದೊಂದು ದಿನ ರಾಜ್ಯದ ಚುಕ್ಕಾಣಿ ಹಿಡಿಯಲಿದೆ ಎಂದು ವಿಶ್ವಾಸವನ್ನು ವ್ಯಕ್ತಪಡಿಸಿ, ಸಮಾಜವಾದಿ ಪಾರ್ಟಿಯಿಂದ ನಗರಸಭೆ ಪುರಸಭೆ ಜಿಲ್ಲಾ ಪಂಚಾಯತ್ ತಾಲೂಕು ಪಂಚಾಯತ್ ಮತ್ತು ವಿಧಾನಪರಿಷತ್ ಚುನಾವಣೆಗಳಿಗೆ ಸ್ಪರ್ಧೆ ಮಾಡುವ ಆಕಾಂಕ್ಷಿಗಳು ಮತ್ತು ಪಕ್ಷದ ತತ್ವ ಸಿದ್ಧಾಂತವನ್ನು ಒಪ್ಪಿಕೊಳ್ಳುವವರು ಲಕ್ಷ್ಮಿಕಾಂತ. ಎಸ್ ಜಿಲ್ಲಾಧ್ಯಕ್ಷರು ಸಮಾಜವಾದಿ ಪಾರ್ಟಿ, 9901170729 ಓ.ಆ ಗುರುಮೂರ್ತಿ ರಾಜ್ಯ ಪ್ರಧಾನ ಕಾರ್ಯದರ್ಶಿ ಗಳು 8197594386 ಈ ಮೊಬೈಲ್ ನಂಬರ್‍ಗೆ ಸಂಪರ್ಕಿಸಲು ಕೋರಿದೆ.

ಗೋಷ್ಟಿಯಲ್ಲಿ ಮೊಳಕಾಲ್ಲೂರು ಅಧ್ಯಕ್ಷರಾದ ಜಯ್ಯಣ್ಣ, ಕಾರ್ಯದರ್ಶಿ ಬಾಲರಾಜ್, ಹೊಸದುರ್ಗ ಅಧ್ಯಕ್ಷರಾದ ನಾಗರಾಜ್, ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾದ ಮಹಬೂಬ್ ಪಾಷ, ಮಧುಕುಮಾರ್, ಪ್ರದೀಪ್ ಸೇರಿದಂತೆ ಇತರರು ಭಾಗವಹಿಸಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...