ಸುದ್ದಿಒನ್, ದಾವಣಗೆರೆ, ಮಾರ್ಚ್. 21 : ರಾಜ್ಯ ರಾಜಕೀಯದಲ್ಲಿ ಬಾರೀ ಕುತೂಹಲ ಮೂಡಿಸಿದ್ದ ಹಾಗೂ ಕಾಂಗ್ರೆಸ್ ನಾಯಕರ ಪಾಲಿಗೆ ದೊಡ್ಡ ತಲೆನೋವಾಗಿ ಪರಿಗಣಿಸಿದ್ದ ದಾವಣಗೆರೆ ದಕ್ಷಿಣ ಟಿಕೆಟ್ ಗೊಂದಲ ಕೊನೆಗೂ ಬಗೆಹರಿದಿದೆ.
ಕೊನೆಗೂ ಶಾಮನೂರ ಶಿವಶಂಕರಪ್ಪ ನವರ ಮೊಮ್ಮಗ ಸಮರ್ಥ್ ಶಾಮನೂರ್ಗೆ ಕಾಂಗ್ರೆಸ್ ಹೈಕಮಾಂಡ್ ಟಿಕೆಟ್ ನೀಡುವ ಮೂಲಕ ಗೊಂದಲಕ್ಕೆ ತೆರೆ ಎಳೆದಿದೆ. ಅಂತಿಮವಾಗಿ ದಾವಣಗೆರೆ ದಕ್ಷಿಣ ಕ್ಷೇತ್ರದ ಟಿಕೆಟ್ ಮತ್ತೆ ಶಾಮನೂರ ಕುಟುಂಬದ ಪಾಲಾಗಿದೆ.

ಶಾಮನೂರ ಶಿವಶಂಕರಪ್ಪ ನಿಧನದಿಂದ ಕ್ಷೇತ್ರ ತೆರವಾಗಿತ್ತು. ಈ ಕ್ಷೇತ್ರದ ಟಿಕೆಟ್ ಅಲ್ಪಸಂಖ್ಯಾತದವರಿಗೆ ನೀಡಬೇಕೆಂದು ಸಚಿವ ಜಮೀರ್ ಅಹಮದ್ ಪಟ್ಟು ಹಿಡಿದಿದ್ದರು. ಕಳೆದ ಕೆಲವು ದಿನಗಳಿಂದ ಈ ವಿಚಾರವಾಗಿ ಬಾರೀ ಕುತೂಹಲ ಮೂಡಿಸಿತ್ತು. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಸುರ್ಜೇವಾಲ ಸೇರಿದಂತೆ ನಾಯಕರು ಸುದೀರ್ಘ ಚರ್ಚೆ ನಡೆಸಿ ಸಂಧಾನ ಮಾಡಲಾಯಿತು.






