Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಂಪುಟ ಸೇರುವ ಆಸೆ ಬಹಿರಂಗಪಡಿಸಿದ ಸಮರ್ಥ ಶಾಮನೂರು

---Advertisement---

ಸುದ್ದಿಒನ್, ದಾವಣಗೆರೆ, ಜೂನ್‌. 01 : ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಕುರಿತ ಚರ್ಚೆಗಳು ಜೋರಾಗಿರುವ ನಡುವೆಯೇ, ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕ ಸಮರ್ಥ ಶಾಮನೂರು ತಮ್ಮ ಸಚಿವ ಸ್ಥಾನದ ಆಕಾಂಕ್ಷೆಯನ್ನು ಬಹಿರಂಗವಾಗಿ ವ್ಯಕ್ತಪಡಿಸಿದ್ದಾರೆ. ಅವಕಾಶ ಸಿಕ್ಕರೆ ಸಚಿವರಾಗಿ ಜವಾಬ್ದಾರಿ ನಿರ್ವಹಿಸಲು ಸಂಪೂರ್ಣ ಸಿದ್ಧನಿದ್ದೇನೆ ಎಂದು ಅವರು ಹೇಳಿದ್ದಾರೆ.ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಮರ್ಥ ಶಾಮನೂರು, ಸಚಿವ ಸ್ಥಾನ ಸಿಕ್ಕರೆ ಕ್ಷೇತ್ರ ಹಾಗೂ ಜಿಲ್ಲೆಯ ಅಭಿವೃದ್ಧಿಗೆ ಹೆಚ್ಚಿನ ವೇಗ ನೀಡಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು.

“ಸಚಿವ ಸ್ಥಾನ ದೊರೆತರೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಂದ ಹೆಚ್ಚಿನ ಅನುದಾನ ತಂದು ಅಭಿವೃದ್ಧಿ ಕಾರ್ಯಗಳನ್ನು ಪರಿಣಾಮಕಾರಿಯಾಗಿ ಕೈಗೊಳ್ಳಬಹುದು. ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಲು ಅಧಿಕಾರ ಸಹಕಾರಿಯಾಗುತ್ತದೆ. ಆದ್ದರಿಂದ ಅವಕಾಶ ಸಿಕ್ಕರೆ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುತ್ತೇನೆ” ಎಂದು ಅವರು ಹೇಳಿದರು.ಸಂಪುಟದಲ್ಲಿ ಮೊದಲ ಬಾರಿಗೆ ಆಯ್ಕೆಯಾದ ಶಾಸಕರಿಗೆ ಅವಕಾಶ ನೀಡುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಸಚಿವ ಸ್ಥಾನ ನೀಡುವುದು ಅಥವಾ ನೀಡದಿರುವುದು ಪಕ್ಷದ ಹೈಕಮಾಂಡ್, ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟ ವಿಷಯ ಎಂದು ಹೇಳಿದರು.

“ಪಕ್ಷದ ನಾಯಕತ್ವ ಯಾವ ನಿರ್ಧಾರ ಕೈಗೊಂಡರೂ ಅದನ್ನು ಗೌರವಿಸುತ್ತೇವೆ. ಆದರೆ ಜವಾಬ್ದಾರಿ ನೀಡಿದರೆ ಅದನ್ನು ನಿರ್ವಹಿಸಲು ನಾನು ಸಿದ್ಧನಿದ್ದೇನೆ” ಎಂದು ಸ್ಪಷ್ಟಪಡಿಸಿದರು.ತಮ್ಮ ರಾಜಕೀಯ ಆಕಾಂಕ್ಷೆಯನ್ನು ನೇರವಾಗಿ ವ್ಯಕ್ತಪಡಿಸಿದ ಸಮರ್ಥ ಶಾಮನೂರು, “ಸಚಿವ ಸ್ಥಾನ ಕೊಟ್ಟರೆ ಯಾರು ಬೇಡ ಎನ್ನುತ್ತಾರೆ? ರಾಜಕೀಯದಲ್ಲಿ ಇರುವ ಪ್ರತಿಯೊಬ್ಬರಿಗೂ ಹೆಚ್ಚಿನ ಜವಾಬ್ದಾರಿ ಹೊತ್ತು ಜನಸೇವೆ ಮಾಡುವ ಆಸೆ ಇರುತ್ತದೆ. ನನಗೂ ಅಂತಹ ಆಸೆಯಿದೆ. ಹೊಸ ಮುಖಗಳಿಗೆ ಅವಕಾಶ ನೀಡಿದರೆ ಹೊಸ ಉತ್ಸಾಹ ಮತ್ತು ಹೊಸ ಆಲೋಚನೆಗಳೊಂದಿಗೆ ಕೆಲಸ ಮಾಡಲು ಸಾಧ್ಯ” ಎಂದರು.

ದಾವಣಗೆರೆಯ ಪ್ರಭಾವಿ ರಾಜಕೀಯ ಕುಟುಂಬದ ಹಿನ್ನೆಲೆಯುಳ್ಳ ಸಮರ್ಥ ಶಾಮನೂರು, ಮೊದಲ ಅವಧಿಯ ಶಾಸಕರಾಗಿಯೇ ಸಚಿವ ಸ್ಥಾನ ಕುರಿತ ತಮ್ಮ ಆಸೆಯನ್ನು ಬಹಿರಂಗಪಡಿಸಿರುವುದು ರಾಜಕೀಯ ವಲಯದಲ್ಲಿ ಗಮನ ಸೆಳೆದಿದೆ. ಮುಂಬರುವ ಸಂಪುಟ ವಿಸ್ತರಣೆಯಲ್ಲಿ ಯುವ ಶಾಸಕರಿಗೆ ಅವಕಾಶ ಸಿಗುತ್ತದೆಯೇ ಎಂಬ ಕುತೂಹಲವೂ ಹೆಚ್ಚಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now