ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಸುದ್ದಿಒನ್, ಚಿತ್ರದುರ್ಗ. ಸೆ.04: ಚಿತ್ರದುರ್ಗ ನಗರದಲ್ಲಿ 2009 ರಿಂದ 2015 ರವರೆಗಿನ ಮಧ್ಯದ ಅವಧಿಯಲ್ಲಿ ಶ್ರೀನಾಥ್ ಬಿಲ್ಡಿಂಗ್‌ನಲ್ಲಿ ಪುಣೆ ಮೂಲದ “ಸಮೃದ್ಧ ಜೀವನ ಫುಡ್ಸ್ ಹಾಗೂ ಸಮೃದ್ಧ ಜೀವನ ಮಲ್ಟಿಸ್ಟೇಟ್ ಮಲ್ಟಿ ಪರ್ಪಸ್ ಕೋ ಆಪರೇಟಿವ್ ಸೊಸೈಟಿ ಸಂಸ್ಥಾಪರಾದ ಮಹೇಶ್ ಕಿಸಾನ್ ಮೊತ್ತೆದಾರ್ ಹಾಗೂ ಇನ್ನಿತರರು ಸೇರಿಕೊಂಡು ಸಾರ್ವಜನಿಕರಿಂದ ಐದುವರೆ ವರ್ಷದಲ್ಲಿ ಹಣವನ್ನು ದ್ವಿಗುಣ ಮಾಡಿಕೊಡುವುದಾಗಿ ಹೇಳಿ ನಂಬಿಸಿ ಮೋಸದಿಂದ ಹಣವನ್ನು ಠೇವಣಿ ಮಾಡಿಸಿಕೊಂಡು ನಂತರ ದ್ವಿಗುಣ ಹಣ ನೀಡುವ ಸಮಯ ಬಂದಾಗ ಸೊಸೈಟಿಯನ್ನು ಮುಚ್ಚಿಕೊಂಡು ಹೋಗಿ ಕೋಟ್ಯಾಂತರ ರೂಪಾಯಿ ವಂಚಿಸಿದ್ದಾಗಿ ನೀಡಿದ ದೂರಿನ ಮೇರೆಗೆ ಚಿತ್ರದುರ್ಗ ನಗರದ ಸಿ.ಇ.ಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ, ಪ್ರಸ್ತುತ ಬೆಂಗಳೂರಿನ ಸಿ.ಐ.ಡಿ ತನಿಖೆಯಲ್ಲಿದೆ.
ಸಾರ್ವಜನಿಕರು “ಸಮೃದ್ಧ ಜೀವನ ಫುಡ್ಸ್ ಹಾಗೂ ಸಮೃದ್ಧ ಜೀವನ ಮಲ್ಟಿಸ್ಟೇಟ್ ಮಲ್ಟಿ ಪರ್ಪಸ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಹಣ ಠೇವಣಿ, ಹೂಡಿಕೆ ಮಾಡಿದ್ದು, ಅವಧಿ ಪೂರ್ಣ ನಂತರದಲ್ಲಿ ಈ ಕಂಪನಿ ಅಥವಾ ಸೊಸೈಟಿಯವರು ಹಣ ಮರುಪಾವತಿ ಮಾಡದೇ ಇದ್ದ ಪಕ್ಷದಲ್ಲಿ ಅಂತಹ ವ್ಯಕ್ತಿಗಳು ತಮಗೆ ಕಂಪನಿ, ಸೊಸೈಟಿಯವರು ಹಣ ಪಡೆದು ನೀಡಿದ್ದ ಬಾಂಡ್, ರಸೀದಿ ಇತ್ಯಾದಿ ಎಲ್ಲಾ ಮೂಲ ದಾಖಲಾತಿಗಳೊಂದಿಗೆ ವಾರದೊಳಗೆ ಬೆಂಗಳೂರು ಅರಮನೆ ರಸ್ತೆ, ಸಿ.ಐ.ಡಿ ಮುಖ್ಯ ಕಚೇರಿಯ ಆರ್ಥಿಕ ಅಫರಾಧಗಳ ವಿಭಾಗದ ಪೊಲೀಸ್ ಉಪಾಧೀಕ್ಷಕರನ್ನು ಅಥವಾ ದೂರವಾಣಿ ಸಂಖ್ಯೆ 080-22094469 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್