Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಕ್ತದಲ್ಲಿ ಬರೆದುಕೊಡಲಾ..? : ಕಾಂಗ್ರೆಸ್ ಗೆ ಹೋಗ್ತಾರಾ ಎಂಬ ಪ್ರಶ್ನೆಗೆ ಸಂಗಣ್ಣ ಕರಡಿ ರಿಯಾಕ್ಷನ್

---Advertisement---

 

ಕೊಪ್ಪಳ: ಲೋಕಸಭಾ ಚುನಾವಣೆಗೆ ಬಿಜೆಪಿಯಲ್ಲಿರುವವರು ಕಾಂಗ್ರೆಸ್ ಮರಳುತ್ತಾರೆ ಎಂಬ ವಿಚಾರ ಬಾರೀ ಸದ್ದು ಮಾಡುತ್ತಿರುವ ಬೆನ್ನಲ್ಲೇ ಒಬ್ಬೊಬ್ಬರೇ ಈ ವಿಚಾರಕ್ಕೆ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಇದೀಗ ಕೊಪ್ಪಳ ಸಂಸದ ಸಂಗಣ್ಣ ಕರಡಿ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಕಾಂಗ್ರೆಸ್ ಹೋಗಲ್ಲ ಅನ್ನೋದನ್ನ ರಕ್ತದಲ್ಲಿ ಬರೆದುಕೊಡಬೇಕಾ ಎಂದು ಪ್ರಶ್ನಿಸಿದ್ದಾರೆ.

ಜಿಲ್ಲೆಯಲ್ಲಿ ಮಾತನಾಡಿದ ಅವರು, ನಾನು ಈ ಬಾರಿಯೂ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ. ಪಕ್ಷ ನನಗೆ ಟಿಕೆಟ್ ನೀಡುತ್ತದೆ ಎಂಬ ವಿಶ್ವಾಸವಿದೆ. ಒಂದು ವೇಳೆ ಪಕ್ಷದಿಂದ ಟಿಕೆಟ್ ಸಿಗದೆ ಇದ್ದರೂ, ಪಕ್ಷ ನಿರ್ಧರಿಸಿದ, ಸೂಚಿಸಿದ ಅಭ್ಯರ್ಥಿ ಪರವಾಗಿ ಕೆಲಸ ಮಾಡುತ್ತೇನೆ. ಕುಷ್ಟಗಿ ಶಾಸಕ ದೊಡ್ಡನಗೌಡ ಸೇರಿದಂತೆ ಇತರರು ಬಿಜೆಪಿ ಬಿಡುವ ಯೋಚನೆಯಿಲ್ಲ. ಸದ್ಯಕ್ಕೆ ಬಿಜೆಪಿಗೆ ಕೊಂಚ ಹಿನ್ನಡೆಯಾಗಿದೆ. ಆದ್ರೆ ಪಕ್ಷ ಸಂಘಟನೆ ಬಗ್ಗೆ ಗಮನಹರಿಸಲಿದ್ದಾರೆ.

ಮಾಧ್ಯಮದವರು ಮತ್ತೊಮ್ಮೆ ಈ ರೀತಿಯ ಪ್ರಶ್ನೆಗಳನ್ನು ಕೇಳಬಾರದು ಎಂಬ ಕಾರಣಕ್ಕೆ ಹೇಳುತ್ತಾ ಇದ್ದೇನೆ. ಬಿಜೆಪಿ ಬಿಡುವ ಯೋಚನೆಯಿಲ್ಲ. ಪ್ರಜಾಪ್ರಭುತ್ವದಲ್ಲಿ ಸಂಖ್ಯಾಬಲದ ಹಿನ್ನಡೆಯಾಗುತ್ತಾ ಇರುತ್ತದೆ. ಶೀಘ್ರವೇ ಪ್ರತಿಪಕ್ಷದ ನಾಯಕನನ್ನು ಆಯ್ಕೆ‌ ಮಾಡಲಾಗುತ್ತದೆ ಎಂದು ಹೇಳುವ ಮೂಲಕ‌ಕಾಂಗ್ರೆಸ್ ಪಕ್ಷಕ್ಕೆ‌ ಹೋಗುವ ಯಾವುದೇ ಯೋಚನೆ ಇಲ್ಲ ಎಂಬುದಾಗಿ ಸಂಸದ ಸಂಗಣ್ಣ ಕರಡಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...