ಬೆಳಗಾವಿ: ರಾಯಣ್ಣನ ಪ್ರತಿಮೆ ಧ್ವಂಸ ಮಾಡಿರುವ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಆಶ್ವಾಸನೆ ಕೊಟ್ಟಿದ್ದಾರೆ.
ಎಂಇಎಸ್ ನಿಷೇಧಕ್ಕೆ ಕಾನೂನು ರೀತಿ ಕ್ರಮ ಕೈಗೊಳ್ಳುತ್ತೇವೆ. ಕೇಂದ್ರ ಸರ್ಕಾರದ ಜೊತೆ ಈಗಾಗಲೇ ಈ ಬಗ್ಗೆ ಚರ್ಚೆ ನಡೆಸಲಾಗಿದೆ. ರಾಯಣ್ಣನ ಪ್ರತಿಮೆ ಧ್ವಂಸ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ. ದೇಶದ್ರೋಹ, ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಲಾಗುತ್ತದೆ. ಮುಂದಿನ ದಿನಗಳಲ್ಲಿ ಇಂತಹ ದುಷ್ಕ್ರತ್ಯ ನಡೆಯದಂತೆ ನೋಡಿಕೊಳ್ಳುತ್ತೇವೆ ಎಂದಿದ್ದಾರೆ. ಇದರ ಜೊತೆ ಸುವರ್ಣ ಸೌಧದ ಆವರಣದಲ್ಲಿ ಸಂಗೊಳ್ಳಿ ರಾಯಣ್ಣ ಹಾಗೂ ಕಿತ್ತೂರು ರಾಣಿ ಚೆನ್ನಮ್ಮನ ಪ್ರತಿಮೆ ಸ್ಥಾಪನೆ ಮಾಡಲು ನಿರ್ಧರಿಸಲಾಗಿದೆ ಎಂದಿದ್ದಾರೆ.
ಉತ್ತರ ಕರ್ನಾಟಕ ಜನ ಸಮಸ್ಯೆ ಬಗ್ಗೆ ಗಂಭೀರ ಚರ್ಚೆಯಾಗಬೇಕು. ಈ ಸಂಬಂಧ ಉತ್ತರ ಕರ್ನಾಟಕ ಶಾಸಕರು ಹಾಗೂ ವಿರೋಧ ಪಕ್ಷದವರು ಸಮಯ ಕೇಳಿದ್ದಾರೆ. ನಾವೂ ಕೂಡ ಸುಮ್ಮನೆ ಹತ್ತು ನಿಮಿಷ ಮಾತನಾಡುವ ಚಟ ತೀರಿಸಿಕೊಳ್ಳಲು ಬಂದಿಲ್ಲ. ಸಮಸ್ಯೆ ಆಲಿಸಲು ಬಂದಿದ್ದೇವೆ ಎಂದಿದ್ದಾರೆ.