ಸುದ್ದಿಒನ್, ಚಳ್ಳಕೆರೆ, ಏಪ್ರಿಲ್. 09 :
ತಾಲ್ಲೂಕಿನ ಸಾಣಿಕೆರೆಯ ವೇದ ಪಿಯು ಕಾಲೇಜು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಫಲಿತಾಂಶದೊಂದಿಗೆ ಇಡೀ ತಾಲೂಕಿನಲ್ಲಿಯೇ ಒಂದು ಪ್ರತಿಷ್ಠಿತ ಸಂಸ್ಥೆಯಾಗಿ ಮತ್ತು ಗುಣಮಟ್ಟದ ಶಿಕ್ಷಣಕ್ಕೆ ಸಾಕ್ಷಿಯಾಗಿದೆ.
2025-26ನೇ ಸಾಲಿನ ಪರೀಕ್ಷೆಯ ವಿಜ್ಞಾನ ವಿಭಾಗದ ಪಿಸಿಎಂಸಿ ಹಾಗೂ ವಾಣಿಜ್ಯ ವಿಭಾಗದಲ್ಲಿ ಶೇ. 100%ಫಲಿತಾಂಶ ಕಾಲೇಜಿಗೆ ದೊರೆತರೆ, ಪಿಸಿಎಂಬಿಯಲ್ಲಿ 99% ದೊರೆತಿದೆ. ಇದರಲ್ಲಿ 5 ವಿದ್ಯಾರ್ಥಿಗಳು ಗಣಿತದಲ್ಲಿ, ಕನ್ನಡದಲ್ಲಿ ಒಂದು,ಹಾಗೂ ಅಕೌಂಟ್ಸ್ ನಲ್ಲಿ ಒಬ್ಬ ವಿದ್ಯಾರ್ಥಿ ನೂರಕ್ಕೆ ನೂರು ಅಂಕಗಳನ್ನು ಗಳಿಸುವುದರೊಂದಿಗೆ ಅತ್ಯುತ್ತಮ ಸಾಧನೆಯನ್ನು ತೋರಿದ್ದಾರೆ.
ಪಿಸಿಎಂಬಿ ವಿಭಾಗದ ವಿನೋದ್ ಕುಮಾರ್ ಎಸ್.ಆರ್ 584 ಅಂಕ ಗಳಿಸುವುದರೊಂದಿಗೆ 97. 33% ಉತ್ತಮ ಫಲಿತಾಂಶ ದಾಖಲಿಸಿದರೆ ವಾಣಿಜ್ಯ ವಿಭಾಗದಲ್ಲಿ ರಂಗಸ್ವಾಮಿ ಆರ್ ಅತ್ಯುತ್ತಮ ಸಾಧನೆ ಮಾಡಿದ್ದಾರೆ. 53 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ, 69 ವಿದ್ಯಾರ್ಥಿಗಳು ಪ್ರಥಮ ದರ್ಜೆ ಪಡೆದಿದ್ದಾರೆ.
ಉತ್ತಮ ಸಾಧನೆಯನ್ನು ತೋರಿದ ವಿದ್ಯಾರ್ಥಿಗಳಿಗೆ ಹಾಗೂ ಶ್ರಮಿಸಿದಂತಹ ಉಪನ್ಯಾಸಕರು, ಪ್ರಾಂಶುಪಾಲರಿಗೆ ಸಂಸ್ಥೆಯ ಅಧ್ಯಕ್ಷರಾದ ಡಿ ಟಿ ರವೀಂದ್ರರವರು ಹೃದಯಪೂರ್ವಕವಾಗಿ ಅಭಿನಂದಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.



















