Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಂಜು ವೆಡ್ಸ್ ಗೀತಾ -2 ತಡೆಯಾಜ್ಞೆ ತೆರವು : ಜನವರಿ 17 ಕ್ಕೆ ಬಿಡುಗಡೆ

---Advertisement---

 

ಸುದ್ದಿಒನ್, ಬೆಂಗಳೂರು : ನಾಗಶೇಖರ್ ನಿರ್ದೇಶನದ “ಸಂಜು ವೆಡ್ಸ್ ಗೀತಾ-2” ಜ.10 ರಂದೇ ಬಿಡುಗಡೆಯಾಗಬೇಕಿತ್ತು. ಆದರೆ 5 ವರ್ಷಗಳ‌ ಹಿಂದೆ ನಾಗಶೇಖರ್ ನಿರ್ದೇಶಿಸಿದ್ದ ತೆಲುಗು ಚಿತ್ರದ ನಿರ್ಮಾಪಕರು ಹೈದರಾಬಾದ್ ಸಿವಿಲ್ ಕೋರ್ಟ್ ನಲ್ಲಿ ನಾಗಶೇಖರ್ ಮೇಲೆ ಕೇಸ್ ಹಾಕಿ ಈ ಚಿತ್ರವನ್ನು ಬಿಡುಗಡೆ ಮಾಡದಂತೆ ಸ್ಟೇ ತಂದಿದ್ದರು. ಚಿತ್ರದ ಪೋಸ್ಟರ್ ನಲ್ಲಿ ನಾಗಶೇಖರ್ ಮೂವೀಸ್ ಅಂತ ಇದ್ದದ್ದೇ ಇದಕ್ಕೆಲ್ಲ ಕಾರಣವಾಗಿತ್ತು. ಬಿಡುಗಡೆಯ ಹಿಂದಿನ ದಿನವಷ್ಟೇ ಸ್ಟೇ ತಂದಿದ್ದರಿಂದ ಸಿನಿಮಾ ಬಿಡುಗಡೆಯಾಗಲಿಲ್ಲ.

 

ತಕ್ಷಣ ಲಾಯರ್ ಜತೆ ಹೈದರಾಬಾದ್ ಗೆ ಹೊರಟ ನಿರ್ಮಾಪಕ ಕುಮಾರ್ ಈ ಸಿನಿಮಾದ ನಿರ್ಮಾಪಕ ನಾನೊಬ್ಬನೇ. ನಾಗಶೇಖರ್ ನಿರ್ದೇಶಕ ಮಾತ್ರ. ನಮ್ಮ ಮಾಲೀಕತ್ವದ ಪವಿತ್ರ ಇಂಟರ್ ನ್ಯಾಷನಲ್ ಮೂವಿ ಮೇಕರ್ಸ್ ಅಡಿ ಚಿತ್ರ ನಿರ್ಮಿಸಲಾಗಿದೆ ಎಂದು ನ್ಯಾಯಾಲಯಕ್ಕೆ ದಾಖಲೆಗಳನ್ನು ಸಲ್ಲಿಸಿದ್ದಾರೆ. ಆದರೆ ಸ್ಟೇ ವೆಕೇಟ್ ಪ್ರಕ್ರಿಯೆಗೆ ಸ್ವಲ್ಪ ಕಾಲಾವಕಾಶ ಬೇಕು. ಅಲ್ಲಿಯವರೆಗೆ ನಾಲ್ಕೂವರೆ ಕೋಟಿ ಜಾಮೀನು ನೀಡಿ ಎಂದಾಗ, ಅದೇ ಮೊತ್ತದ ತಮ್ಮ ಪ್ರಾಪರ್ಟಿ ಪತ್ರಗಳನ್ನು ಜಾಮೀನು ನೀಡಿ ಪ್ರದರ್ಶನಕ್ಕೆ ಅನುಮತಿ ಪಡೆದುಕೊಂಡು ಬಂದಿದ್ದಾರೆ.

ಸದ್ಯ ಸಂಜು ವೆಡ್ಸ್ ಗೀತಾ 2 ಸಿನಿಮಾಗಿದ್ದ ನಿಷೇಧ ತೆರವುಗೊಳಿಸಲಾಗಿದ್ದು, ಜನವರಿ 17ರಂದು ‘ಸಂಜು ವೆಡ್ಸ್ ಗೀತಾ-2 ಬಿಡುಗಡೆಯಾಗಲಿದೆ. ನಾನು ಈ ಚಿತ್ರದ ನಿರ್ದೇಶಕ ಮಾತ್ರ ಎಂದ ನಾಗಶೇಖರ್, ಇದರ ಹಣಕಾಸಿನ ವ್ಯವಹಾರಕ್ಕೂ ನನಗೂ ಸಂಬಂಧವಿಲ್ಲ. ಈಗ ಗೊಂದಲ ಬಗೆಹರಿದಿದ್ದು, 17 ರಂದು ಚಿತ್ರ ಬಿಡುಗಡೆಯಾಗುತ್ತಿದೆ ಎಂದರು.

ನಿರ್ಮಾಪಕ ಕುಮಾರ್ ಮಾತನಾಡಿ ನಾವು ಥೇಟರ್ ಸೆಟಪ್ ಮಾಡಿಕೊಂಡು ರೆಡಿಯಾದ ಮೇಲೆ, ದಿ.8ರ ಮಧ್ಯಾಹ್ನ 3 ಗಂಟೆಗೆ ನಮಗೆ ಸ್ಟೇ ಆರ್ಡರ್ ಕಾಪಿ ಸಿಗುತ್ತದೆ. ಪ್ರೊಸಿಜರ್ ಪ್ರಕಾರ ಅವರು ಮೊದಲು ನನಗೆ ನೋಟೀಸ್ ಕೊಡಬೇಕಿತ್ತು. ಹಾಗೆ ಮಾಡದೆ ಏಕಾಏಕಿ ಸ್ಟೇ ತಂದಿದ್ದಾರೆ. ಪೋಸ್ಟರ್ ನಲ್ಲಿ ನಾಗಶೇಖರ್ ಮೂವೀಸ್ ಅಂತಿದ್ದರಿಂದ ನಾಗಶೇಖರ್ ಜತೆ ತೆಲುಗು ಚಿತ್ರ ಮಾಡಿ ಸೋಲುಂಡಿದ್ದ ನಿರ್ಮಾಪಕರು, ಒಪ್ಪಂದದ ಪ್ರಕಾರ ನಾಗಶೇಖರ್ ನಮಗೆ ನಾಲ್ಕೂವರೆ ಕೋಟಿ ಕೊಡಬೇಕು,ಈ ಚಿತ್ರಕ್ಕೂ ಅವರೇ ನಿರ್ಮಾಪಕರು ಎಂದುಕೊಂಡು ಸ್ಟೇ ತಂದಿದ್ದರು. ಸ್ಟೇ ವೆಕೇಟ್ ಆಗುವವರೆಗೆ ನನ್ನ 2 ಸೈಟ್ ಗಳನ್ನು ಜಾಮೀನು ಮಾಡಿ ಅನುಮತಿ ತಂದಿದ್ದೇನೆ. ಮುಂದೆ 10 ದಿನ ಅಂದ್ರದಾದ್ಯಂತ ಕೋರ್ಟ್ ರಜಾ ಇದೆ. ಕೆಲವರು ಯೂ ಟ್ಯೂಬ್ ನಲ್ಲಿ ಸಹ ನಿರ್ಮಾಪಕರ ಜತೆ ಜಗಳ, ತಂತ್ರಜ್ಞರಿಗೆ ಬಾಕಿ ಕೊಟ್ಟಿಲ್ಲ ಅಂತೆಲ್ಲ ಬರೆದಿದ್ದಾರೆ. ಸತ್ಯಾಂಶ ತಿಳಿಯದೆ ಏನೇನೋ ಬರೆಯಬೇಡಿ. ಏನಿದ್ದರೂ ಸಂಬಂಧ ಪಟ್ಟವರನ್ನು ಸಂಪರ್ಕಿಸಿ ಎಂದು ಹೇಳಿದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment