ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಜನವರಿ. 14 : ಮಕರ ಸಂಕ್ರಾಂತಿಯ ವಿಶೇಷವಾಗಿ ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪನವರ ನಿವಾಸದಲ್ಲಿ ಮಂಗಳವಾರ ಪೌರ ಕಾರ್ಮಿಕರು, ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಹಾಗೂ ಸರ್ವ ಸಮುದಾಯದೊಂದಿಗೆ ಸಹ ಪಂಕ್ತಿ ಭೋಜನ ಏರ್ಪಡಿಸಲಾಗಿತ್ತು.
ಸ್ಟೇಡಿಯಂ ರಸ್ತೆ ಪಕ್ಕ ಪ್ರಶಾಂತ್ ನಗರದಲ್ಲಿರುವ ತಮ್ಮ ನಿವಾಸದಲ್ಲಿ ಪೌರ ಕಾರ್ಮಿಕರಿಗೆ ಹುಡಿ ತುಂಬಿ ಮಾತನಾಡಿದ ಶಾಸಕ ಡಾ.ಎಂ.ಚಂದ್ರಪ್ಪ ಕೇಂದ್ರ ಸರ್ಕಾರದ ನಿರ್ದೇಶನದಂತೆ ಸರ್ವ ಸಮಾಜದವರ ಜೊತೆ ಊಟ ಮಾಡಿದ್ದೇನೆ. ದೇಶದ ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್‌ಷಾ ಇವರುಗಳು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಹಿಂದುಳಿದವರು ಶೋಷಿತರ ಪರವಾಗಿದ್ದಾರೆ. ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‌ರವರ ಆಶಯದಂತೆ ಎಲ್ಲಾ ಜಾತಿ ಧರ್ಮದವರನ್ನು ಸಮಾನವಾಗಿ ಕಾಣಲಾಗುತ್ತಿದೆ. ಪ್ರತಿನಿತ್ಯವು ಚಳಿ, ಗಾಳಿ, ಮಳೆಯನ್ನು ಲೆಕ್ಕಿಸದೆ ನಗರ ಸ್ವಚ್ಚತೆಯಲ್ಲಿ ತೊಡಗುವ ಪೌರ ಕಾರ್ಮಿಕರನ್ನು ಸಂತೋಷದಿಂದ ಸನ್ಮಾನಿಸುತ್ತಿದ್ದೇನೆಂದು ಹೇಳಿದರು.
ಬಿಜೆಪಿ.ಜಿಲ್ಲಾಧ್ಯಕ್ಷ ಎ.ಮುರಳಿ, ಹೊಳಲ್ಕೆರೆ ಬಿಜೆಪಿ.ಮಂಡಲ ಅಧ್ಯಕ್ಷ ಸಿದ್ದೇಶ್, ಭರಮಸಾಗರ ಮಂಡಲ ಅಧ್ಯಕ್ಷ ಶೈಲೇಶ್, ಸಂಪತ್‌ಕುಮಾರ್, ಯುವ ಮುಖಂಡ ಎಂ.ಸಿ.ರಘುಚಂದನ್,
ವಕ್ತಾರ ನಾಗರಾಜ್‌ಬೇದ್ರೆ, ಅಶೋಕ್, ವಸಂತ, ಸಂಜಯ್, ಮೋಹನ್, ಪಂಚಾಕ್ಷರಿ, ಬೆನ್ನೂರು ರಾಜಣ್ಣ, ಹೊಳಲ್ಕೆರೆ ಕ್ಷೇತ್ರದ ಮುಖಂಡರು ಹಾಗೂ ಕಾರ್ಯಕರ್ತರು ಸಹ ಪಂಕ್ತಿ ಭೋಜನದಲ್ಲಿ ಪಾಲ್ಗೊಂಡಿದ್ದರು.