Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಶಾಸಕ ಡಾ.ಎಂ.ಚಂದ್ರಪ್ಪನವರ ಮನೆಯಲ್ಲಿ ಸಂಕ್ರಾಂತಿ ಸಂಭ್ರಮ : ಪೌರ ಕಾರ್ಮಿಕರೊಂದಿಗೆ ಸಹ ಪಂಕ್ತಿ ಭೋಜನ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜನವರಿ. 14 : ಮಕರ ಸಂಕ್ರಾಂತಿಯ ವಿಶೇಷವಾಗಿ ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪನವರ ನಿವಾಸದಲ್ಲಿ ಮಂಗಳವಾರ ಪೌರ ಕಾರ್ಮಿಕರು, ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಹಾಗೂ ಸರ್ವ ಸಮುದಾಯದೊಂದಿಗೆ ಸಹ ಪಂಕ್ತಿ ಭೋಜನ ಏರ್ಪಡಿಸಲಾಗಿತ್ತು.

ಸ್ಟೇಡಿಯಂ ರಸ್ತೆ ಪಕ್ಕ ಪ್ರಶಾಂತ್ ನಗರದಲ್ಲಿರುವ ತಮ್ಮ ನಿವಾಸದಲ್ಲಿ ಪೌರ ಕಾರ್ಮಿಕರಿಗೆ ಹುಡಿ ತುಂಬಿ ಮಾತನಾಡಿದ ಶಾಸಕ ಡಾ.ಎಂ.ಚಂದ್ರಪ್ಪ ಕೇಂದ್ರ ಸರ್ಕಾರದ ನಿರ್ದೇಶನದಂತೆ ಸರ್ವ ಸಮಾಜದವರ ಜೊತೆ ಊಟ ಮಾಡಿದ್ದೇನೆ. ದೇಶದ ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್‌ಷಾ ಇವರುಗಳು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಹಿಂದುಳಿದವರು ಶೋಷಿತರ ಪರವಾಗಿದ್ದಾರೆ. ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‌ರವರ ಆಶಯದಂತೆ ಎಲ್ಲಾ ಜಾತಿ ಧರ್ಮದವರನ್ನು ಸಮಾನವಾಗಿ ಕಾಣಲಾಗುತ್ತಿದೆ. ಪ್ರತಿನಿತ್ಯವು ಚಳಿ, ಗಾಳಿ, ಮಳೆಯನ್ನು ಲೆಕ್ಕಿಸದೆ ನಗರ ಸ್ವಚ್ಚತೆಯಲ್ಲಿ ತೊಡಗುವ ಪೌರ ಕಾರ್ಮಿಕರನ್ನು ಸಂತೋಷದಿಂದ ಸನ್ಮಾನಿಸುತ್ತಿದ್ದೇನೆಂದು ಹೇಳಿದರು.

ಬಿಜೆಪಿ.ಜಿಲ್ಲಾಧ್ಯಕ್ಷ ಎ.ಮುರಳಿ, ಹೊಳಲ್ಕೆರೆ ಬಿಜೆಪಿ.ಮಂಡಲ ಅಧ್ಯಕ್ಷ ಸಿದ್ದೇಶ್, ಭರಮಸಾಗರ ಮಂಡಲ ಅಧ್ಯಕ್ಷ ಶೈಲೇಶ್, ಸಂಪತ್‌ಕುಮಾರ್, ಯುವ ಮುಖಂಡ ಎಂ.ಸಿ.ರಘುಚಂದನ್,
ವಕ್ತಾರ ನಾಗರಾಜ್‌ಬೇದ್ರೆ, ಅಶೋಕ್, ವಸಂತ, ಸಂಜಯ್, ಮೋಹನ್, ಪಂಚಾಕ್ಷರಿ, ಬೆನ್ನೂರು ರಾಜಣ್ಣ, ಹೊಳಲ್ಕೆರೆ ಕ್ಷೇತ್ರದ ಮುಖಂಡರು ಹಾಗೂ ಕಾರ್ಯಕರ್ತರು ಸಹ ಪಂಕ್ತಿ ಭೋಜನದಲ್ಲಿ ಪಾಲ್ಗೊಂಡಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment