ಸುದ್ದಿಒನ್, ಚಿತ್ರದುರ್ಗ, ಜನವರಿ.13 : ಸಂಕ್ರಾಂತಿ ಹಬ್ಬವು ಹೊಸ ವರ್ಷದ ಹೊಸತನವನ್ನು ಎಲ್ಲರಲ್ಲಿ ತರಲಿ ಎಲ್ಲರೂ ಕೂಡ ಇಂದಿನಿಂದ ಹೊಸ ವರ್ಷದ ವಸಂತಕ್ಕೆ ಕಾಲಿಟ್ಟು ಎಲ್ಲರನ್ನೂ ಪ್ರೀತಿ ಮತ್ತು ಗೌರವದಿಂದ ಕಾಣಿರಿ ಎಂದು ಬಾಪೂಜಿ ಸಮೂಹ ಸಂಸ್ಥೆಯ ಕಾರ್ಯದರ್ಶಿ ಕೆ. ಎಂ. ವೀರೇಶ್ ಹೇಳಿದರು.
ನಗರದ ಹೊರವಲಯದ ಬಾಪೂಜಿ ಪಬ್ಲಿಕ್ ಶಾಲೆಯಲ್ಲಿ ಸಂಕ್ರಾಂತಿ ಸಂಭ್ರಮ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಸಂಸ್ಥೆಯ ನಿರ್ದೇಶಕ ಕೆ. ಎಂ. ಚೇತನ್ ಅವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಕ್ಕಳಿಗೆ ಕೆಲವು ಸಲಹೆಗಳನ್ನು ನೀಡಿದರು. ನಂತರ ಎಲ್ಲ ಮುಖ್ಯೋಪಾಧ್ಯಾಯರು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.ಹಾಗೆಯೇ ಮಕ್ಕಳು ಕೂಡ ತಮ್ಮ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.
ಈ ಕಾರ್ಯಕ್ರಮದಲ್ಲಿ ಸಹ ಶಿಕ್ಷಕರುಗಳು ಹಾಗೂ ಮಕ್ಕಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











