ನವದೆಹಲಿ: ಇಂದು ಕೇಂದ್ರ ಗೃ ಸಚಿವ ಅಮಿತ್ ಶಾಗೆ ಹುಟ್ಟುಹಬ್ಬದ ಸಂಭ್ರಮ. ಗಣ್ಯಾತೀಗಣ್ಯರು, ರಾಜಕಾರಣಿಗಳು, ಬೆಂಬಲಿಗರು ಸೇರಿದಂತೆ ಎಲ್ಲರೂ ಅಮಿತ್ ಶಾಗೆ ಬರ್ತ್ ಡೇ ವಿಶ್ ಮಾಡಿ ಶುಭ ಕೋರುತ್ತಿದ್ದಾರೆ. ಇದೀಗ ಬಾಲಿವುಡ್ ನಟಿ ಸಾರಾ ಅಲಿಖಾನ್ ಅಮಿತ್ ಶಾಗೆ ಶುಭ ಕೋರಿದ್ದು, ಟ್ರೋಲಿಗರಿಗೆ ಆಹಾರವಾಗಿದೆ.
ಸಾರಾ ಅಲಿಖಾನ್ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಶುಭಕೋರಿ ಟ್ವೀಟ್ ಮಾಡಿದ್ದಾರೆ. ಈ ಟ್ವೀಟ್ ಟ್ರೋಲಿಗರಿಗೆ ಸಿಕ್ಕಿದ್ದು, ವೆರೈಟಿ ವೆರೈಟಿ ಟ್ರೋಲ್ ಮಾಡ್ತಿದ್ದಾರೆ. ಬಾಲಿವುಡ್ ಸ್ಟಾರ್ ಗಳಿ NCB ಯ ರಾಡರ್ ನಲ್ಲಿದ್ದಾರೆ. ಆದ್ದರಿಂದಲೇ ಸಾರಾ ವಿಶ್ ಮಾಡಿದ್ದಾರೆ ಎಂದು ಟ್ರೋಲ್ ಮಾಡ್ತಿದ್ದಾರೆ.
ಇನ್ನು ಸಾರಾ ಅಲಿಖಾನ್ ಟ್ವೀಟ್ ಗೆ ವ್ಯಕ್ತಿಯೊಬ್ಬ ಪ್ರತಿಕ್ರಿಯೆ ನೀಡಿದ್ದು, ನೀವೂ ಸುರಕ್ಷಿತವಾಗಿದ್ದೀರಿ. ಇನ್ನೂ ಎನ್ಸಿಬಿ ದಾಳಿ ನಡೆಯಲ್ಲ ಎಂದಿದ್ದಾರೆ.
ಮತ್ತೊಬ್ಬ ಸಾರಾ ಎನ್ಸಿಬಿ ದಾಳಿಯಿಂದ ತಮ್ಮನ್ನು ತಾವು ಸೇಫ್ ಮಾಡಿಕೊಂಡಿದ್ದಾರೆ ಎಂದು ಕಮೆಂಟ್ ಹಾಕಿದ್ದಾರೆ.
ಸದ್ಯ ಬಾಲಿವುಡ್ ನಲ್ಲಿ ಡ್ರಗ್ಸ್ ನದ್ದೇ ಸುದ್ದಿ. ಶಾರೂಖ್ ಪುತ್ರ ಆರ್ಯನ್ ಖಾನ್ ನನ್ನು ಡ್ರಗ್ಸ್ ಕೇಸ್ ನಲ್ಲಿ ಬಂಧಿಸಿದ್ದಾರೆ. ಅಷ್ಟೇ ಅಲ್ಲ ಇದೇ ಡ್ರಗ್ಸ್ ವಿಚಾರಕ್ಕೆ ಸಂಬಂಧಿಸಿದಂತೆ ನಿನ್ನೆಯಷ್ಟೆ ಅನನ್ಯಾ ಪಾಂಡೆಯನ್ನು ವಿಚಾರಣೆ ನಡೆಸಿದ್ದಾರೆ. ಈ ಬೆನ್ನಲ್ಲೆ ಬಾಲಿವುಡ್ ನಟಿ ಸಾರಾ ಅಲಿಖಾನ್ ಗೃಹ ಸಚಿವರಿಗೆ ವಿಶ್ ಮಾಡಿದ್ದು, ಟ್ರೋಲ್ ಗೆ ಕಾರಣವಾಗಿದೆ.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…