ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 18 : ಪಂಜಾಬ್‍ನ ಗುರುಕಾಶಿ ವಿಶ್ವವಿದ್ಯಾನಿಲಯದ ಭಟಿಂಡ ಕ್ರೀಡಾಂಗಣದಲ್ಲಿ ಮಾ.14 ರಿಂದ 16 ರವರೆಗೆ ಮೂರು ದಿನಗಳ ಕಾಲ ನಡೆದ 45 ನೆ ರಾಷ್ಟ್ರಮಟ್ಟದ ಹಿರಿಯರ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್ ಕ್ರೀಡಾಕೂಟದಲ್ಲಿ ಕರ್ನಾಟಕದ ಪ್ರತಿನಿಧಿಯಾಗಿ ಭಾಗವಹಿಸಿದ್ದ ಸತೀಶ್‍ಕುಮಾರ್ ಯು. ನೂರು ಮೀಟರ್ ಓಟದಲ್ಲಿ ಎರಡನೆ ಸ್ಥಾನ, ಇನ್ನೂರು ಮೀ. ಓಟದಲ್ಲಿ ಮೊದಲ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ.
ಚಿತ್ರದುರ್ಗದಲ್ಲಿ ತರಬೇತುದಾರರಾಗಿ ಸೇವೆ ಸಲ್ಲಿಸುತ್ತಿರುವ ಸತೀಶ್‍ಕುಮಾರ್ ಯು. ಐವತ್ತು ವರ್ಷದೊಳಗಿನ ಮೇಲ್ಪಟ್ಟವರಿಗಾಗಿ ನಡೆದ ಕ್ರೀಡಾಕೂಟದಲ್ಲಿ ಪಾಲ್ಗೊಂಡು
ಐದು ಪ್ರಶಸ್ತಿ ಪದಕಗಳನ್ನು ಬಾಚಿಕೊಂಡು ಅಂತರಾಷ್ಟ್ರೀಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.












