ನವದೆಹಲಿ: ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ರಾಜಕೀಯ ಅಖಾಡಕ್ಕೆ ಧುಮ್ಮುಕ್ಕುತ್ತಿದ್ದಾರೆ. ಇದೇ ಕಾರಣಕ್ಕೆ ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎಂಬ ಸುದ್ದಿ ಜೋರಾಗಿ ಹಬ್ಬಿತ್ತು. ಈ ವಿಚಾರದ ತಿಳಿಯುತ್ತಿದ್ದಂತೆ ಬಿಸಿಸಿಐ ಕಾರ್ಯದರ್ಶಿ ಜೈ ಶಾ ಮಾತನಾಡಿದ್ದಾರೆ.
ಈ ವಿಚಾರದ ಬಗ್ಗೆ ಮಾತನಾಡಿದ ಜೈ ಶಾ, ಸೌರವ್ ಗಂಗೂಲಿ ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಎದ್ದಿದ್ದ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.
— Sourav Ganguly (@SGanguly99) June 1, 2022
ಇಂದು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಟ್ವೀಟ್ ಒಂದನ್ನು ಮಾಡಿದ್ದಾರೆ. ಅದರಲ್ಲಿ ಕ್ರಿಕೆಟ್ ಗೆ ಬಂದು 30 ವರ್ಷಗಳಾದ ಬಳಿಕ ಮಹತ್ತರವಾದ ನಿರ್ಧಾರ ಕೈಗೊಳ್ಳುತ್ತಿರುವುದಾಗಿ ಹೇಳಿಕೊಂಡಿದ್ದಾರೆ. ಈ ಮೂಲಕ ಬಂಗಾಳದ ರಾಜಕೀಯಕ್ಕೆ ಬರುವುದು ಬಹುತೇಕ ಕನ್ಫರ್ಮ್ ಆಗಿದೆ. ದಾದಾ ರಾಜಕೀಯ ಅಖಾಡಕ್ಕೆ ಇಳಿಯುತ್ತಿರುವುದು ಫ್ಯಾನ್ಸ್ ಖುಷಿಯಾಗಿದ್ದಾರೆ.
ಆದರೆ ದಾದಾ ಯಾವ ಪಕ್ಷ ಸೇರುತ್ತಾರೆ ಎಂಬ ಕುತೂಹಲ ಮನೆ ಮಾಡಿದೆ. ಯಾಕಂದ್ರೆ ಮಮತಾ ಬ್ಯಾನರ್ಜಿ ಹಾಗೂ ಅಮಿತ್ ಶಾ ಇಬ್ಬರಿಗೂ ಅತ್ಯಾಪ್ತರಾಗಿದ್ದಾರೆ. ಹೀಗಾಗಿ ಬಿಜೆಪಿ ಸೇರುತ್ತಾರಾ ಅಥವಾ ಟಿಎಂಸಿ ಸೇರುತ್ತಾರಾ ಎಂಬ ಪ್ರಶ್ನೆ ಎಲ್ಲರನ್ನು ಕಾಡುತ್ತಿದೆ.