ದೆಹಲಿ.ಜುಲೈ.24: ದೇಶದ ಅತಿದೊಡ್ಡ ಸರ್ಕಾರಿ ಬ್ಯಾಂಕ್ ಆದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ವಿದ್ಯಾರ್ಥಿಗಳಿಗೆ ಉತ್ತಮ ಸುದ್ದಿಯೊಂದನ್ನು ನೀಡಿದೆ. ಆರ್ಥಿಕ ಸಂಕಷ್ಟದಿಂದಾಗಿ ಶಿಕ್ಷಣ ಮುಂದುವರಿಸಲು ಸಾಧ್ಯವಾಗದ ಮತ್ತು ಶುಲ್ಕ ಪಾವತಿಸಲು ಕಷ್ಟಪಡುತ್ತಿರುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಎಸ್ಬಿಐ ಆರ್ಥಿಕ ನೆರವು ನೀಡಲು ಮುಂದಾಗಿದೆ.
ದೇಶಾದ್ಯಂತ ಶಾಲಾ ಹಂತದಿಂದ ಹಿಡಿದು ಐಐಟಿ (IIT) ಮಟ್ಟದವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಈ ಸ್ಕಾಲರ್ಶಿಪ್ಗೆ ಅರ್ಜಿ ಸಲ್ಲಿಸಬಹುದು. ಅರ್ಹ ವಿದ್ಯಾರ್ಥಿಗಳಿಗೆ ಅವರ ಕೋರ್ಸ್ ಮತ್ತು ಕಾಲೇಜು ಆಧಾರದ ಮೇಲೆ ರೂ. 15,000 ದಿಂದ ಗರಿಷ್ಠ ರೂ. 15 ಲಕ್ಷದವರೆಗೆ ನೇರವಾಗಿ ಅವರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ.
ಈ ವರ್ಷ ದೇಶಾದ್ಯಂತ 25,000 ವಿದ್ಯಾರ್ಥಿಗಳಿಗೆ ಸಹಾಯ ಹಸ್ತ ಚಾಚಲು ಎಸ್ಬಿಐ ನಿರ್ಧರಿಸಿದೆ. ಕಳೆದ ಕೆಲವು ವರ್ಷಗಳಿಂದ ಈ ಯೋಜನೆಯ ಮೂಲಕ ಲಕ್ಷಾಂತರ ವಿದ್ಯಾರ್ಥಿಗಳಿಗೆ ನೆರವಾಗುತ್ತಿರುವ ಎಸ್ಬಿಐ, ಈ ಬಾರಿಯೂ ಅದನ್ನು ಮುಂದುವರಿಸಿದೆ.
ಅರ್ಹತೆಯ ಮಾನದಂಡಗಳು
ಅಂಕಗಳು: ಕಳೆದ ಶೈಕ್ಷಣಿಕ ವರ್ಷದಲ್ಲಿ ಕನಿಷ್ಠ 75% ಅಂಕಗಳನ್ನು ಪಡೆದಿರಬೇಕು.
ದಾಖಲಾತಿ: ಮಾನ್ಯತೆ ಪಡೆದ ಅಥವಾ ಪ್ರಮುಖ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಪಡೆದಿರಬೇಕು.

ಆದಾಯದ ಮಿತಿ:
ಶಾಲಾ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ ರೂ. 3 ಲಕ್ಷಕ್ಕಿಂತ ಕಡಿಮೆಯಿರಬೇಕು.
ಕಾಲೇಜು ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ ರೂ. 6 ಲಕ್ಷಕ್ಕಿಂತ ಕಡಿಮೆಯಿರಬೇಕು.
ಯಾರೆಲ್ಲಾ ಅರ್ಹರು?: 9 ರಿಂದ 12ನೇ ತರಗತಿ ವಿದ್ಯಾರ್ಥಿಗಳು, ಯುಜಿ (UG), ಪಿಜಿ (PG), ಎಂಬಿಬಿಎಸ್ (MBBS), ಐಐಟಿ (IIT), ಐಐಎಂ (IIM) ಹಾಗೂ ವಿದೇಶದಲ್ಲಿ ಮಾಸ್ಟರ್ಸ್ ಶಿಕ್ಷಣ ಪಡೆಯಲು ಬಯಸುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವುದು ಹೇಗೆ?
ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ: www.sbiashascholarship.co.in
ವೆಬ್ಸೈಟ್ನಲ್ಲಿ ನಿಮ್ಮ ಅರ್ಹತೆಯನ್ನು ಪರಿಶೀಲಿಸಿಕೊಳ್ಳಿ.

ನಿಮ್ಮ ಅಗತ್ಯ ವಿವರಗಳು ಮತ್ತು ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡಿ ಅರ್ಜಿ ಸಲ್ಲಿಸಿ.
ನೆನಪಿಡಿ: ಕೋರ್ಸ್ ಮುಗಿಯುವವರೆಗೆ ಪ್ರತಿ ವರ್ಷ ಈ ಸ್ಕಾಲರ್ ಶಿಪ್ ಮೊತ್ತ ದೊರೆಯಲಿದೆ.
ಅಂತಿಮ ದಿನಾಂಕ: ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 4, 2026 ರವರೆಗೆ ಕಾಲಾವಕಾಶವಿದೆ.
ದೇಶದ ಅತಿದೊಡ್ಡ ಸ್ಕಾಲರ್ಶಿಪ್ ಯೋಜನೆಗಳಲ್ಲಿ ಒಂದಾದ ಈ ಕಾರ್ಯಕ್ರಮಕ್ಕಾಗಿ ಎಸ್ಬಿಐ ಈ ಪ್ರಸಕ್ತ ಹಣಕಾಸು ವರ್ಷದಲ್ಲಿ 100 ಕೋಟಿ ರೂಪಾಯಿಗಳನ್ನು ಕಾಯ್ದಿರಿಸಿದೆ. 2022 ರಲ್ಲಿ ಪ್ರಾರಂಭವಾದ ಈ ಯೋಜನೆಯು ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ದಾರಿದೀಪವಾಗಿದೆ. ಅರ್ಹ ವಿದ್ಯಾರ್ಥಿಗಳು ತಕ್ಷಣವೇ ಅರ್ಜಿ ಸಲ್ಲಿಸಿ ಈ ಅವಕಾಶದ ಸೌಲಭ್ಯವನ್ನು ಪಡೆಯಬಹುದು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











