ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ಬೆಂಗಳೂರು: ಸಿದ್ದರಾಮಯ್ಯ ಸರ್ಕಾರದಲ್ಲಿ ಎಸ್ಸಿ, ಎಸ್ಟಿ ನೌಕರರ ಮುಂಬಡ್ತಿಯಲ್ಲಿ ಸಮಸ್ಯೆಗಳಾಗುತ್ತಿರುವ ಆರೋಪ ಕೇಳಿ ಬಂದಿದೆ. ಅದರಲ್ಲೂ ಸಿಎಂ ಸಿದ್ದರಾಮಯ್ಯ ಅವರು ತಾವೂ ಎಸ್ಸಿ, ಎಸ್ಟಿ ಪರ, ಹಿಂದುಳಿದವರ ವರ್ಗಗಳ ಹಿತ ಕಾಯುತ್ತೇನೆ ಎಂದು ಹೇಳುತ್ತಾರೆ. ಈಗ ನೋಡಿದ್ರೆ ಅವರ ಸರ್ಕಾರದಲ್ಲಿಯೇ ಅನ್ಯಾಯವಾಗುತ್ತಿದೆ ಎಂಬ ಮಾತು ಕೇಳಿ ಬಂದಿದೆ. ಈ ಸಂಬಂಧ ತಕ್ಷಣವೇ ಕ್ರಮ ಕೈಗೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಎಐಸಿಸಿ ಅಧ್ಯಕ್ಷ ಪತ್ರ ಬರೆದಿದ್ದಾರೆ.
ಖರ್ಗೆ ಅವರು ಬರೆದ ಪತ್ರದಲ್ಲಿ, ಕರ್ನಾಟಕ ರಾಜ್ಯ ಸರ್ಕಾರಿ ಎಸ್ಸಿ, ಎಸ್ಟಿ ನೌಕರರ ಸಂಘದವರು ಎಸ್ಸಿ, ಎಸ್ಡಿ ನೌಕರರಿಗೆ ಮುಂಬಡ್ತಿಯನ್ನು ನೀಡುವಲ್ಲಿ ರೋಸ್ಟರ್ ಬಿಂದುವನ್ನು ಸರ್ಕಾರದ ಆದೇಶದ ಪ್ರಕಾರ ನಿಗದಿಪಡಿಸಿದ್ದರೂ ಅದನ್ನು ಕಟ್ಟು ನಿಟ್ಟಾಗಿ ಪಾಲನೆ ಮಾಡಬೇಕೆಂಬ ನಿರ್ದೇಶನವಿದ್ದರೂ ಕೆಲವು ಕೆಲವು ಇಲಾಖೆಗಳ ಅಧಿಕಾರಿಗಳು ಪಾಲನೆ ಮಾಡದಿರುವ ಬಗ್ಗೆ ಪತ್ರಿಕೆಯಲ್ಲಿ ಬಂದಿರುವ ಕೆಲವು ಪ್ರಮುಖ ಅಂಶಗಳ ಜೊತೆಹೆ ಈ ವಿಚಾರವಾಗಿ ನಿಮಗೂ ಬರೆದಿರುವ ಪತ್ರದ ಪ್ರತಿಯನ್ನು ಸಂಘದ ಅಧ್ಯಕ್ಷರು ನನ್ನ ಗಮನಕ್ಕೆ ತಂದಿದ್ದಾರೆ. ಇದರ ಜೊತೆಗೆ ಲಗತ್ತಿಸಿರುವ ಪತ್ರಿಕೆಯಲ್ಲಿ ಬಂದಿರು ವಿವರಗಳನ್ನು ಹಾಗೂ ಸಂಘದವರು ನಿಮಗೆ ಈಗಾಗಲೇ ನೀಡಿರುವ ಪತ್ರವನ್ನು ಸ್ವತಃ ಅವಲೋಕಿಸುವುದರ ಜೊತೆಗೆ ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ವಿವರವಾಗಿ ಚರ್ಚಿಸಿ ಸರ್ಕಾರವೆರ ಹೊರಡಿಸಿರುವ ಆದೇಶ ಹಾಗೂ ಸುತ್ತೋಲೆಗಳಲ್ಲಿ ತಿಳಿಸಿರುವ ನಿರ್ದೇಶನಗಳನ್ನು ಕಟ್ಟು ನಿಟ್ಟಾಗಿ ಜಾರಿಗೆ ತರಲು ಸ್ಪಷ್ಟ ಆದೇಶವನ್ನು ನೀಡುವುದು ಸೂಕ್ತ.
ಇಲ್ಲದಿದ್ದರೆ ಅಧಿಕಾರಿಗಳ ಮಟ್ಟದಲ್ಲಿ ಅಸಮಾಧಾನ ಉಂಟಾಗಿ ಸರ್ಕಾರ್ ಕೆಲಸ ಕಾರ್ಯಗಳು ಸುಲಲಿತವಾಗಿ ನಡೆಯಲು ಕಷ್ಟವಾಗುತ್ತದೆ ಎಂದು ಖರ್ಗೆ ಅವರು ಸಿದ್ದರಾಮಯ್ಯ ಅವರಿಗೆ ಪತ್ರದ ಮೂಲಕ ತಿಳಿಸಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್