Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಇಡಿ ನಿರ್ದೇಶಕ ಸಂಜಯ್ ಮಿಶ್ರಾ ಸೇವಾವಧಿ ವಿಚಾರದಲ್ಲಿ ಕೇಂದ್ರ ಸರ್ಕಾರಕ್ಕೆ ಹಿನ್ನಡೆ..!

Facebook
Twitter
Telegram
WhatsApp

 

 

ನವದೆಹಲಿ: ಇಡಿ ನಿರ್ದೇಶಕ ಸಂಜಯ್ ಮಿಶ್ರಾಗೆ ಕೇಂದ್ರ ಸರ್ಕಾರ ಸೇವಾವಧಿಯನ್ನು ಮುಂದುವರೆಸಿತ್ತು. ಈ ಸಂಬಂಧ ಇಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ಪ್ರಕಟ ಮಾಡಿದೆ. ಸೇವಾವಧಿ ವಿಸ್ತರಣೆ‌ ಮಾಡಿರುವುದು ಅಕ್ರಮ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ. ಕಳೆದ ವರ್ಷ ನೀಡಿದ್ದ ಸೇವಾವಧಿ ಕಾನೂನು ಬಾಹಿರವಾಗಿದೆ ಎಂದು ತೀರ್ಪು ನೀಡಿದೆ.

ಇದೀಗ ಸುಪ್ರೀಂ ಕೋರ್ಟ್ ನೀಡಿರುವ ಆದೇಶದಿಂದ ಕೇಂದ್ರ ಸರ್ಕಾರಕ್ಕೆ ಮುಜುಗರವಾಗಿದೆ. ಇಡಿ ಅಂದ್ರೆ ಭಾರತ ಸರ್ಕಾರದ ಅವಿಭಾಜ್ಯ ಸಂಸ್ಥೆಗಳಲ್ಲಿ ಒಂದು. ಇದು ಆರ್ಥಿಕ ಕಾನೂನುಗಳನ್ನು ಜಾರಿ ಮಾಡುವ ಹಾಗೂ ಅವು ಪಾಲನೆಯಲ್ಲಿರುವಂತೆ ನಿಗಾ ವಹಿಸುವಂತೆ ಕರ್ತವ್ಯ ನಿರ್ವಹಿಸುತ್ತದೆ.

ಕೇಂದ್ರ ಸರ್ಕಾರ ಇಡಿ ನಿರ್ದೇಶಕರಾಗಿದ್ದ ಸಂಜಯ್ ಮಿಶ್ರಾಗೆ ಸೇವಾವಧಿಯನ್ನು ವಿಸ್ತರಣೆ‌ ಮಾಡಿತ್ತು. ಕಳೆದ ವರ್ಷ ನೀಡಿದ್ದ ಸೇವಾವಧಿ ಕಾನೂನು ಬಾಹಿರ. ಮೂರನೇ ಸೇವಾವಧಿ ವಿಸ್ತರಣೆ ತಪ್ಪು ಎಂದು ಹೇಳಿರುವ ಸುಪ್ರೀಂ ಕೋರ್ಟ್ ಜುಲೈ 31ರವರೆಗೂ ಹುದ್ದೆಯಲ್ಲಿ ಮುಂದುವರೆಯಲು ಅವಕಾಶ ನೀಡಿದೆ. ಈ ಮೂಲಕ ಸುಪ್ರೀಂ ಕೋರ್ಟ್ ಇನ್ನು 15 ದಿನದ ಒಳಗಾಗಿ ನೂತನ ಇಡಿ ನಿರ್ದೇಶಕರನ್ನು ನೇಮಕ ಮಾಡಬೇಕಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಮೇ 1ರಂದು ವಿದ್ಯುತ್ ವ್ಯತ್ಯಯ

ಚಿತ್ರದುರ್ಗ. ಏ.30: ಚಿತ್ರದುರ್ಗ ವಿಭಾಗ ವ್ಯಾಪ್ತಿಯಲ್ಲಿರುವ ಪಂಡರಹಳ್ಳಿ ಲೈನ್‍ನ ಟ್ಯಾಪಿಂಗ್ ಪಾಯಿಂಟ್‍ನಿಂದ ಪಂಡರಹಳ್ಳಿ 66/11 ಕೆವಿ ವಿ.ವಿ ಕೇಂದ್ರದವರೆಗೆ ಡ್ರೇಕ್ ಕಂಡಕ್ಟರ್ ಬಳಸಿ ಉದ್ದೇಶಿತ 66 ಕೆವಿ ಲೈನ್ ಮತ್ತು ಕೊಯೊಟ್ ಕಂಡಕ್ಟರ್ ಬಳಸಿ

ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು : ಕೋರ್ ಕಮಿಟಿಯಲ್ಲಿ ತೀರ್ಮಾನ

ಹುಬ್ಬಳ್ಳಿ: ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷದಿಂದ ಅಮಾನತು ಮಾಡಲಾಗಿದೆ. ಜಿ.ಟಿ ದೇವೇಗೌಡರ ನೇತೃತ್ವದ ಕೋರ್ ಕಮಿಟಿಯಲ್ಲಿ ಈ ಸಂಬಂಧ ನಿರ್ಧಾರವಾಗಿದ್ದು, ಅಮಾನತು ಮಾಡಲಾಗಿದೆ. ಈ ಸಂಬಂಧ

ಬಿಜೆಪಿ ನಾಯಕನಿಗೆ ಮಾತ್ರ ಪೆನ್ ಡ್ರೈವ್ ಕೊಟ್ಟಿದ್ದೆ : ಶಾಕಿಂಗ್ ವಿಡಿಯೋ ಬಿಟ್ಟ ಡ್ರೈವರ್ ಕಾರ್ತಿಕ್

ಹಾಸನ: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ದಿನೇ ದಿನೇ ಹಲವು ವಿಚಾರಗಳು ಹೊರಗೆ ಬರುತ್ತಿವೆ. ನಿನ್ನೆಯಷ್ಟೇ ವಕೀಲ, ಬಿಜೆಪಿ ನಾಯಕ ದೇವರಾಜೇಗೌಡ, ಪೆನ್ ಡ್ರೈವ್ ವಿಚಾರವಾಗಿ ಮಾತನಾಡಿ, ಕಾರ್ತಿಕ್ ಬಳಿ ಪೆನ್ ಡ್ರೈವ್

error: Content is protected !!