Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪರಿಶಿಷ್ಟ ಜಾತಿ ಒಳಮೀಸಲಾತಿ : ಹೊಸದಾಗಿ ನೇಮಕಾತಿ ಅಧಿಸೂಚನೆ ಹೊರಡಿಸಲು ಸೂಚನೆ

---Advertisement---

 

ಬೆಂಗಳೂರು, ಸೆ.05 : ಸೆ.4 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡ ತೀರ್ಮಾನದಂತೆ ದಿನಾಂಕ: 28.10.2024ರ ನಂತರ ಸರ್ಕಾರದ ಯಾವುದೇ ಇಲಾಖೆ/ಮಂಡಳಿ/ನಿಗಮ/ಸ್ವಾಯತ್ತ ಸಂಸ್ಥೆಗಳ ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಸಂಬಂಧಿಸಿದ ನೇಮಕಾತಿ ಪ್ರಾಧಿಕಾರಗಳು ಹೊರಡಿಸಿದ ಅಧಿಸೂಚನೆಗಳನ್ನು ರದ್ದುಗೊಳಿಸಿ ಸರಕಾರ ಆದೇಶ ಹೊರಡಿಸಿದೆ.ಪರಿಶಿಷ್ಟ ಜಾತಿ ಒಳಮೀಸಲಾತಿಯನ್ನು ಅಳವಡಿಸಿಕೊಂಡು ಕಾಲಬದ್ಧವಾಗಿ (Time Bound) ಹೊಸದಾಗಿ ನೇಮಕಾತಿ ಅಧಿಸೂಚನೆ ಹೊರಡಿಸುವಂತೆ ಸೂಚಿಸಲಾಗಿದೆ.

ಇದಕ್ಕೆ ಸಂಬಂಧಿಸಿದಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಸುತ್ತೋಲೆ ಹೊರಡಿಸಿದೆ.

ದಿನಾಂಕ: 28.10.2024ರ ಹಿಂದೆ ನೇರ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿ, ದಿನಾಂಕ: 28.10.2024ರ ನಂತರ ಸರ್ಕಾರದ ಯಾವುದೇ ಇಲಾಖೆ/ಮಂಡಳಿ/ನಿಗಮ/ಸ್ವಾಯತ್ತ ಸಂಸ್ಥೆಗಳ ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಸಂಬಂಧಿಸಿದ ನೇಮಕಾತಿ ಪ್ರಾಧಿಕಾರಗಳು ಯಾವುದಾದರೂ ತಿದ್ದುಪಡಿ ಅಧಿಸೂಚನೆಗಳನ್ನು ಹೊರಡಿಸಿದ್ದಲ್ಲಿ ಅಂತಹ ಎಲ್ಲಾ ಅಂತಹ ಎಲ್ಲಾ ನೇಮಕಾತಿ ಅಧಿಸೂಚನೆಗಳನ್ನೂ ಸಹ ರದ್ದುಗೊಳಿಸಿ, ಪರಿಶಿಷ್ಟ ಜಾತಿ ಒಳ ಮೀಸಲಾತಿಯನ್ನು ಅಳವಡಿಸಿಕೊಂಡು ಹೊಸದಾಗಿ ನೇಮಕಾತಿ ಅಧಿಸೂಚನೆ ಹೊರಡಿಸಬೇಕೆಂದೂ ಸಹ ಹಾಗು ಕಾಲಬದ್ದವಾಗಿ (Time Bound) ನೇಮಕಾತಿ ಪ್ರಕ್ರಿಯೆಗಳನ್ನು ಪೂರ್ಣಗೂಳಿಸಲು ಎಲ್ಲಾ ನೇಮಕಾತಿ ಪ್ರಾಧಿಕಾರಗಳಿಗೆ ಆಯ್ಕೆ ಪ್ರಾಧಿಕಾರಗಳಿಗೆ ಸೂಚಿಸಲಾಗಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿಗಳು ಹೊರಡಿಸಿದ ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...