Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಿದ್ಯಾ ವಿಕಾಸ ವಿದ್ಯಾ ಸಂಸ್ಥೆಯಲ್ಲಿ “ಶಾಲಾ ಸಂಸತ್ತು” ಮಕ್ಕಳ ಚುನಾವಣೆ

---Advertisement---

 

ಸುದ್ದಿಒನ್, ಚಿತ್ರದುರ್ಗ, ಜೂನ್. 13 : ನಗರದ ಪ್ರತಿಷ್ಠಿತ ವಿದ್ಯಾ ವಿಕಾಸ ವಿದ್ಯಾ ಸಂಸ್ಥೆಯಲ್ಲಿಂದು “ಶಾಲಾ ಸಂಸತ್ತು” ಮಕ್ಕಳ ಚುನಾವಣೆಯನ್ನು ಹಮ್ಮಿಕೊಳ್ಳಲಾಗಿತ್ತು. ಮಕ್ಕಳಲ್ಲಿ ನಾಯಕತ್ವ, ಸಹಕಾರ, ಸಹಬಾಳ್ವೆ, ಹೊಂದಾಣಿಕೆ ಈ ಗುಣಗಳನ್ನು ಬೆಳೆಸುವಲ್ಲಿ ಮಕ್ಕಳ ಸಂಸತ್ತು ಮುಖ್ಯ ಪಾತ್ರ ವಹಿಸುತ್ತದೆ. ಈ ನಿಟ್ಟಿನಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳು ಅಭ್ಯರ್ಥಿಗಳಾಗಿ ತಮ್ಮದೇ ಶೈಲಿಯಲ್ಲಿ ಪ್ರಣಾಳಿಕೆಯೊಂದಿಗೆ ಮತಯಾಚನೆ ಮಾಡಿದ್ದರು. 6ನೇ ತರಗತಿಯಿಂದ 10ನೇ ತರಗತಿ ವರೆಗಿನ ವಿದ್ಯಾರ್ಥಿಗಳು ಮತ ಚಲಾಯಿಸುವ ಮೂಲಕ ಮತದಾನ ಜಾಗೃತಿಯನ್ನು ಮನಗಂಡರು. ಕೈ ಬೆರಳಿಗೆ ಶಾಹಿ ಹಚ್ಚಿಸಿಕೊಂಡು ಬ್ಯಾಲೆಟ್ ಪೇಪರ್‍ನಲ್ಲಿ ಸ್ವಸ್ತಿಕ್ ಚಿಹ್ನೆ ನಮೂದಿಸುವ ಮೂಲಕ ಮತ ಚಲಾಯಿಸಿ ಸಂತಸ ಪಟ್ಟರು.

ಮತದಾನ ಜಾಗೃತಿ ಕಾರ್ಯಕ್ರಮದ ಸಂಪೂರ್ಣ ಜವಾಬ್ದಾರಿಯನ್ನು ಹೊತ್ತು ಸಮಾಜ ವಿಜ್ಞಾನ ಶಿಕ್ಷಕರಾದ ಖಾನ್ ಖಾದರ್ ವಲಿ, ಸೈಯದ್ ಖಾದರ್ ಭಾಷಾ, ಅಯ್ಯಪ್ಪನ್, ಉಷಾ ಎಲ್ ಆರ್, ಮಂಜೂಷ, ಶಾರದ ಕೆ, ವೈಶಾಲಿ ಬೆನ್ನಾಡಿ ಹಾಗೂ ಇತರೆ ಸಮಾಜ ವಿಜ್ಞಾನ ಶಿಕ್ಷಕರು ಮತದಾನ ಕಾರ್ಯಕ್ರಮದ ಯಶಸ್ವಿಯಲ್ಲಿ ಸಹಕರಿಸಿದರು.
ಮತದಾನ ಪ್ರಕ್ರಿಯೆಯನ್ನು ಶಾಲೆಯ ಶೈಕ್ಷಣಿಕ ವ್ಯವಸ್ಥಾಪಕ ನಿರ್ದೇಶಕರಾದ ಪೃಥ್ವೀಶ ಎಸ್.ಎಂ ಅವರು ಮೊದಲ ಮತ ಚಲಾಯಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ವಿದ್ಯಾ ವಿಕಾಸ ವಿದ್ಯಾ ಸಂಸ್ಥೆಯಲ್ಲಿ ಕಾರ್ಯದರ್ಶಿಗಳಾದ ಬಿ ವಿಜಯಕುಮಾರ್, ಸಂಸ್ಥೆಯ ನಿರ್ದೇಶಕರಾದ ಶ್ರೀಮತಿ ಸುನೀತಾ ಪಿ ಸಿ, ಐಸಿಎಸ್‍ಸಿ ಪ್ರಾಚಾರ್ಯರಾದ ಬಸವರಾಜಯ್ಯ ಪಿ, ಹಾಗೂ ಮುಖ್ಯೋಪಾಧ್ಯಾಯರಾದ ತಿಪ್ಪೇಸ್ವಾಮಿ.ಎನ್.ಜಿ ಹಾಗೂ ಎಲ್ಲಾ ಶಿಕ್ಷಕರು ಮತ್ತು ಶಿಕ್ಷಕೇತರ ಸಿಬ್ಬಂದಿಯವರು ಮತ ಚಲಾಯಿಸುವ ಮೂಲಕ ಭಾಗಿಯಾಗಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment