Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿಕ್ಕಗೊಂಡನಹಳ್ಳಿ ಸರ್ಕಾರಿ ಶಾಲೆಯಲ್ಲಿ ಶಾಲಾ ಸಂಸತ್ತು ಚುನಾವಣೆ

---Advertisement---

ಸುದ್ದಿಒನ್, ಚಿತ್ರದುರ್ಗ, ಜುಲೈ. 19 : ತಾಲ್ಲೂಕಿನ ಚಿಕ್ಕಗೊಂಡನಹಳ್ಳಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿಂದು 2025-26ನೇ ಶೈಕ್ಷಣಿಕ ಸಾಲಿನ ಶಾಲಾ ಸಂಸತ್ತು ಚುನಾವಣೆ ನಡೆಸಲಾಯಿತು.

ವಿದ್ಯಾರ್ಥಿಗಳಿಗೆ ಶಾಲೆಯಲ್ಲಿ ರಾಜಕೀಯ ಆಡಳಿತ ಹಾಗೂ ಶೈಕ್ಷಣಿಕ ಆಡಳಿತ ಸಾಂಸ್ಕೃತಿಕ ಆಡಳಿತ ಹೇಗಿರಬೇಕೆಂಬ ಪರಿಕಲ್ಪನೆ ಯೊಂದಿಗೆ ಪ್ರಜಾ ಪ್ರಭುತ್ವದ ಪರಿಕಲ್ಪನೆ ಮೂಡಿಸುವ ನಿಟ್ಟಿನಲ್ಲಿ ಈವಿಎಂ ಮೂಲಕ ಮತದಾನ ಪ್ರಕ್ರಿಯೆ ನಡೆಸಲಾಯಿತು. ಪ್ರತಿ ಮಗು ತನಗೆ ಇಷ್ಟ ಬಂದ ವ್ಯಕ್ತಿಗೆ ಮುಕ್ತ ಹಾಗೂ ನ್ಯಾಯ ಸಮ್ಮತ ಮತದಾನ ಮಾಡಿ ನಮ್ಮ ಶಾಲೆಗೆ ಅಗತ್ಯವಿರುವ ಪ್ರತಿನಿಧಿಗಳನ್ನು ಆರಿಸಲಾಯಿತು. ಅದರಲ್ಲಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಗೃಹಮಂತ್ರಿ, ಸೇರಿದಂತೆ ವಿವಿಧ ಖಾತೆಗಳಿಗೆ ಮಕ್ಕಳನ್ನು ಆಯ್ಕೆ ಮಾಡಲಾಯಿತು.


ಮುಖ್ಯ ಶಿಕ್ಷಕರಾದ ದಿನೇಶ್ ರೆಡ್ಡಿ ಮಾತನಾಡುತ್ತಾ ಮಕ್ಕಳಲ್ಲಿ ನಾಯಕತ್ವ ಗುಣ ಬೆಳೆಸಬೇಕಾದಲ್ಲಿ ಅವರಿಗೆ ಮತದಾನದ ಪರಿಕಲ್ಪನೆ ಅವಶ್ಯಕತೆ ಇದೆ. ನಾವು ಯೋಗ್ಯರನ್ನು ಆರಿಸುವುದರಿಂದ ನಮಗೆ ಒಳ್ಳೆಯ ಆಡಳಿತ ಸಿಗುವಂತಾಗುತ್ತದೆ ಎಂಬುದನ್ನು ತಿಳಿಸಿದರು.


ಕಾರ್ಯಕ್ರಮದಲ್ಲಿ ಎಸ್ ಡಿ ಎಂ ಸಿ ಅಧ್ಯಕ್ಷರಾದ ದಿನೇಶ್ ಹಾಗೂ ಗ್ರಾಮ ಪಂಚಾಯತಿ ಸದಸ್ಯರಾದ ಪ್ರಕಾಶ್ ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀ ಹರೀಶ್ ಮತ್ತು ಶಾಲೆಯ ಚುನಾವಣಾ ಪ್ರಕ್ರಿಯೆಯನ್ನು ಶಾಲೆಯ ಹಿರಿಯ ಶಿಕ್ಷಕರಾದ ಎಚ್. ರುರ್ದ್ರಪ್ಪ, ಸುದರ್ಶನ್, ಕೆ.ರೇವಣ್ಣ ಹಾಗೂ ಶಿಕ್ಷಕಿಯರಾದ ಶ್ರೀಮತಿ ವಿಜಯಲಕ್ಷ್ಮಿ, ಶ್ರೀಮತಿ ಸುವರ್ಣಮ್ಮ, ಶ್ರೀಮತಿ ಕುಸುಮ, ಶ್ರೀಮತಿ ರಿಟಾಮಣಿ, ಶ್ರೀಮತಿ ವೀಣಾ, ಶ್ರೀಮತಿ ಸಿದ್ದಮ್ಮ, ಶ್ರೀಮತಿ ತ್ರಿವೇಣಿ ಹಾಗೂ ಕಾರ್ಯಕ್ರಮದ ರೂವಾರಿ ಶಿಕ್ಷಕರುಗಳಾದ ಅರುಣ್ ಕುಮಾರ್, ಅಣ್ಣಪ್ಪ ಸ್ವಾಮಿ, ಬಸವರಾಜ್ ಹಾಗೂ ಮಕ್ಕಳು ಭಾಗವಹಿಸಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...