Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಜೂನ್ ನಿಂದ ಶಾಲೆಗೆ ಶಿಕ್ಷಕರ ನೇಮಕಾತಿ : ಕಂಪ್ಲೀಟ್ ಮಾಹಿತಿ ಇಲ್ಲಿದೆ

---Advertisement---

ಬೆಂಗಳೂರು; ಸಾಕಷ್ಟು ಶಾಲೆಗಳಲ್ಲಿ ಈಗಲೂ ಶಿಕ್ಷಕರ ಕೊರತೆ ಇದೆ. ಇದೀಗ ರಾಜ್ಯ ಸರ್ಕಾರ ಶಾಲೆಗಳಿಗೆ ಶಿಕ್ಷಕರ ನೇಮಕಾತಿ ಮಾಡಲು ಹೊರಟಿದೆ. ಈ ಮೊದಲೇ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನ ಫುಲ್ ಫಿಲ್ ಮಾಡಲು ಸರ್ಕಾರ ನಿರ್ಧಾರ ಮಾಡಿದೆ. ಅದರಲ್ಲೂ 2025ನೇ ಶೈಕ್ಷಣಿಕ ವರ್ಷ ಆರಂಭದಲ್ಲಿಯೇ ಶಿಕ್ಷಕರ ನೇಮಕಾತಿ ಮಾಡಲಾಗುತ್ತಿದೆ. ಜೂನ್ 1ರಿಂದಾನೇ ನೇಮಕಾತಿ ಮಾಡಲು ಸರ್ಕಾರ ಆದೇಶ ಹೊರಡಿಸಿದೆ.

2025-26ನೇ ಸಾಲಿನಲ್ಲಿ ಸರ್ಕಾರಿ ಪ್ರೌಢಶಾಲೆಗಳಲ್ಲಿನ ಖಾಲಿ ಇರುವ ವಿಷಯ ಶಿಜ್ಷಕರ ಹುದ್ದೆಗಳಿಗೆ ನೇರ ನೇಮಕಾತಿ / ಬಡ್ತಿ / ವರ್ಗಾವಣೆ ಮೂಲಕ ಭರ್ತಿ ಮಾಡುವವರೆಗೆ ಅಥವಾ ಪ್ರಸಕ್ತ ಶೈಕ್ಷಣಿಕ ಸಾಲಿನ ಮಾರ್ಚ್ 2026ರ ಅಂತ್ಯದವರೆಗೆ ಇವುಗಳಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ಇಟ್ಟು 11 ಸಾವಿರ ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ಗೌರವಧನದ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಒಪ್ಪಿಗೆ ನೀಡಲಾಗಿದೆ. ಅದರಂತೆ ಮೊದಲ ಹಂತದಲ್ಲಿ ಪ್ರೌಢಶಾಲೆಗಳಲ್ಲಿನ ಪ್ರಸ್ತುತ ಖಾಲಿ ಇರುವ 9,499 ವಿಷಯ ಶಿಕ್ಷಕರ ಹುದ್ದೆಗಳಿಗೆದುರಾಗಿ ಒಟ್ಟು 9,499 ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ನಿರ್ಧಾರ ಮಾಡಲಾಗಿದೆ.

ಸರ್ಕಾರಿ ಪ್ರೌಢ ಶಾಲೆಗಳಿಗೆ ಶಾಲಾವಾರು/ ತಾಲ್ಲೂಕುವಾರು ಖಾಲಿ ಇರುವ ಅಗತ್ಯ ಹುದ್ದೆಗಳಿಗೆ ಮಾತ್ರ ಅತಿಥಿ ಶಿಕ್ಷಕರನ್ನು ತ್ವರಿತವಾಗಿ ನೇಮಕಾತಿ ಮಾಡಲು ತಾಲೂಕುವಾರು ಅತಿಥಿ ಶಿಕ್ಷಕರ ಹುದ್ದೆಗಳನ್ನು ಹಂಚಿಕೆ ಮಾಡಲಾಗಿರುತ್ತದೆ. ಅತಿಥಿ ಶಿಕ್ಷಕರ ಆಯ್ಕೆ ಜವಾಬ್ದಾರಿಯನ್ನು ಸಂಬಂಧಿಸಿದ ಸರ್ಕಾರಿ ಪ್ರೌಢ ಶಾಲಾ ಮುಖ್ಯ ಶಿಕ್ಷಕರುಗಳ ಮೂಲಕವೇ ನೇಮಕ ಮಾಡುವುದು. ಶಾಲಾ ಶಿಕ್ಷಣ ಇಲಾಖೆಯ ಸರ್ಕಾರಿ ಕರ್ನಾಟಕ ಪಬ್ಲಿಕ್ ಶಾಲೆಗಳು/ ಬೆಂಗಳೂರು ಪಬ್ಲಿಕ್ ಶಾಲೆಗಳು ಹಾಗೂ ಆದರ್ಶ ವಿದ್ಯಾಲಯಗಳಲ್ಲಿ ಖಾಲಿ ಇರುವ ಸಹ ಶಿಕ್ಷಕರ ಹುದ್ದೆಗಳ ಶೇಕಡ 100 ರಷ್ಟು ಅತಿಥಿ ಶಿಕ್ಷಕರನ್ನು ಮೊದಲ ಆದ್ಯತೆ ನೀಡಿ ನೇಮಕ ಮಾಡಿಕೊಳ್ಳಲು ಕ್ರಮವಹಿಸುವುದು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment