Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಇಂದಿನಿಂದ ಶಾಲೆಗಳು ಆರಂಭ : ಮಕ್ಕಳನ್ನು ಸ್ವಾಗತಿಸಲು ಸಜ್ಜಾದ ಶಿಕ್ಷಕರು

---Advertisement---

ಚಿತ್ರದುರ್ಗ, (ಮೇ.31) : ಬೇಸಿಗೆ ರಜೆ ಕಳೆದಿದೆ.  ಶಾಲೆಗಳು ಆರಂಭವಾಗಿದೆ.. ಮಕ್ಕಳು ರಜೆಯ ಮಜೆಯಿಂದ ಹೊರ ಬಂದು ಶಾಲೆಗೆ ಹೊರಡಲು ಸಿದ್ಧರಾಗಿದ್ದಾರೆ. ಇಂದಿನಿಂದ ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಆರಂಭವಾಗಿದೆ. ಮಕ್ಕಳನ್ನು ಶಾಲೆಗೆ ಬರಮಾಡಿಕೊಳ್ಳಲು ಶಿಕ್ಷಕರು ಕೂಡ ಸಿದ್ಧರಾಗಿ ನಿಂತಿದ್ದಾರೆ.

ಮೊದಲ ದಿನ ಶಾಲೆ ಆರಂಭವಾದಾಗ ಮಕ್ಕಳನ್ನು ವಿಶೇಷವಾಗಿ ಬರಮಾಡಿಕೊಳ್ಳುತ್ತಾರೆ. ಇದು ಕೆಲವು ವರ್ಷಗಳಿಂದ ನಡೆದುಕೊಂಡ ಬಂದ ಸಂಪ್ರದಾಯವಾಗಿದೆ. ಈ ಬಾರಿಯೂ ಹಲವು ಜಿಲ್ಲೆಗಳಲ್ಲಿ ಶಾಲೆಗಳು ಮಧುವಣಗಿತ್ತಿಯಂತೆ ಶೃಂಗಾರಗೊಂಡಿದೆ. ತಳಿರು ತೋರಣಗಳಿಂದ ಅಲಂಕಾರಗೊಂಡಿದೆ.

ಎಲ್ಲಾ ಶಾಲೆಗಳಿಗೂ ಶಿಕ್ಷಣ ಇಲಾಖೆ ಸೂಚನೆಯನ್ನು ನೀಡಿದೆ. ಮಕ್ಕಳನ್ನು ಖುಷಿ ಖುಷಿಯಾಗಿ ಬರಮಾಡಿಕೊಳ್ಳಲು ತಿಳಿಸಿದೆ. ಮೊದಲ ದಿನ ಬರುವ ಮಕ್ಕಳಿಗೆ ಸಿಹಿ ನೀಡಿ ಬರಮಾಡಿಕೊಳ್ಳುವಂತೆ ಸೂಚಿಸಿದೆ. ಮೊದಲ ದಿನವಾದ್ದರಿಂದ ಮಕ್ಕಳಿಗೆ ಆರಂಭದಲ್ಲಿ ಸ್ವಲ್ಪ ಸಮಯ ನೀಡಿ ಬಳಿಕ ತರಗತಿಗಳನ್ನು ಆರಂಭಿಸಬೇಕೆಂದು ಸೂಚನೆ ನೀಡಿದೆ.

ಮಳೆಗಾಲ ಬೇರೆ ಶುರುವಾಗಿರುವ ಕಾರಣ ಎಷ್ಟೋ ಶಾಲಾ ಕೊಠಡಿಗಳು ಇನ್ನು ದುರಾವಸ್ಥೆಯಲ್ಲಿಯೇ ಇದೆ. ಹೀಗಾಗಿ ಅವುಗಳ ಕಡೆಗೆ ಎಚ್ಚರಿಕೆ ವಹಿಸಲು ಸೂಚನೆ ನೀಡಿದೆ. ಸ್ವಚ್ಛತೆ ಜೊತೆಗೆ ಎಚ್ಚರಿಕೆಯನ್ನು ವಹಿಸಿಕೊಂಡು ತರಗತಿ ಆರಂಭಿಸಲು ಶಿಕ್ಷಣ ಇಲಾಖೆ ಸೂಚನೆ ನೀಡಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...