Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಶ್ರೀ ಪಾರ್ಶ್ವನಾಥ ಶಾಲೆಯಲ್ಲಿ ವಿಜ್ಞಾನ ಪ್ರದರ್ಶನ 

---Advertisement---

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

 

ಸುದ್ದಿಒನ್, ಚಿತ್ರದುರ್ಗ ಫೆ. 28 : ಪ್ರತಿ ವರ್ಷದಂತೆ ಶ್ರೀ ಪಾರ್ಶ್ವನಾಥ ವಿದ್ಯಾ ಸಂಸ್ಥೆಯಲ್ಲಿ  ವಿಜ್ಞಾನ ದಿನಾಚರಣೆ ಅಂಗವಾಗಿ ಇಂದು ದಿನಾಂಕ ಫೇ. 28ರ ಶುಕ್ರವಾರವಾರದಂದು ಶಾಲಾ ಆವರಣದಲ್ಲಿ ಶೈಕ್ಷಣಿಕ ವಿಷಯವಾರು ವಸ್ತು ಪ್ರದರ್ಶನ ಹಮ್ಮಿಕೊಳ್ಳಲಾಗಿತ್ತು.

ಉದ್ಘಾಟನೆಯನ್ನು ಶಾಲಾ ಅಧ್ಯಕ್ಷರಾದ ಬಾಬುಲಾಲ್ ಜೀ ಪಟಿಯಾತ್ ರವರು ನೆರವೇರಿಸಿ ಮಾತನಾಡಿದರು. ಮಕ್ಕಳು ವೈಜ್ಞಾನಿಕ ಮನೋಭಾವವನ್ನು ಬೆಳಸಿಕೊಳ್ಳುವುದು ಅತೀ ಮುಖ್ಯ. ಅದನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದು ಹೇಗೆ ಎಂಬುದನ್ನು ಈ ವಸ್ತು ಪ್ರದರ್ಶನದ ಮೂಲಕ ತಿಳಿದು ಕೊಳ್ಳಬಹುದು. ಹಾಗೆಯೇ ವಿಜ್ಞಾನವು ಮೌಡ್ಯತೆ ಮತ್ತು ಅಂಧಕಾರವನ್ನು ನಿರ್ಮೂಲನೆ ಮಾಡಿ ಜೀವ ಜಗತ್ತಿಗೆ ಪೂರಕವಾದ ಬದುಕನ್ನು ಕಲ್ಪಿಸುತ್ತದೆ ಎಂದು ತಿಳಿಸಿದರು.

 

ಈ ಪ್ರದರ್ಶನದಲ್ಲಿ ಪ್ಲೇಗ್ರೂಪ್ ನಿಂದ 9ನೇ ತರಗತಿವರೆಗೆ ಸುಮಾರು 150ಕ್ಕೂ ಹೆಚ್ಚು ಪಠ್ಯಕ್ಕೆ ಸಂಬಂಧಪಟ್ಟ ವಿಷಯವಾರು ವಸ್ತು ಪ್ರದರ್ಶನವನ್ನು ಸುಮಾರು 450 ಮಕ್ಕಳಿಂದ ಪ್ರದರ್ಶಿಸಲಾಯಿತು. ಈ ಪ್ರದರ್ಶನದಲ್ಲಿ ಮಳೆನೀರು ಸಂಗ್ರಹ, ವಾಯು ಮಾಲಿನ್ಯ , ಹವಾಮಾನ, ಸೌರ ಮಂಡಳ , ಗ್ರಹಗಳ, ಗಣಕಯಂತ್ರ, ಭಾಷಾವಾರು ವಿಷಯಗಳ ಮಾದರಿಯನ್ನು ಪ್ರದರ್ಶಸಿಸಲಾಯಿತು.

 

ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಉಪಾಧ್ಯಕ್ಷರಾದ ಉತ್ತಮ್ ಚಂದ್ ಸುರಾನ , ಕಾರ್ಯದರ್ಶಿಸುರೇಶ್ ಕುಮಾರ್ ಸಿಸೋಡಿಯಾ,ಮುಖ್ಯೋಪಾಧ್ಯಾಯರಾದ ಶ್ರೀಮತಿ ನಾಜಿಮಾ ಸ್ವಾಲೆಹಾ, ವಿಜಯಲಕ್ಷ್ಮೀ, ಶಾಂತಕುಮಾರಿ, ಹಾಗೂ, ಚಿತ್ರಕಲಾ ಶಿಕ್ಷಕರಾದ ನಾಗರಾಜ್ ಬೇದ್ರೆ, ಶಿಕ್ಷಕರು ಮತ್ತು ಪೋಷಕರು ಸಹ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಿದರು.

 

 

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...