Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಎಸ್‌ಸಿಪಿ/ಟಿಎಸ್‌ಪಿ ಹಣ ಬಳಕೆ : ಕರ್ನಾಟಕ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 07 : ಎಸ್‌ಸಿಪಿ/ಟಿಎಸ್‌ಪಿ ಹಣವನ್ನು ಅನ್ಯ ಉದ್ದೇಶಗಳಿಗೆ ಬಳಸುತ್ತಿರುವ ರಾಜ್ಯ ಸರ್ಕಾರದ ನಡೆ ವಿರೋಧಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿ ಕಚೇರಿ ಸಹಾಯಕರಾದ ನಾಗವೇಣಿರವರ ಮೂಲಕ ರಾಜ್ಯದ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.

ಸಾಮಾಜಿಕ, ಶೈಕ್ಷಣಿಕ, ಆರ್ಥಿಕವಾಗಿ ಹಿಂದುಳಿದಿರುವ ಪರಿಶಿಷ್ಟ ಜಾತಿ, ಪರಿಶಿಷಷ್ಟ ವರ್ಗದ ಏಳಿಗೆಗಾಗಿ ಬಳಸಬೇಕಾಗಿರುವ ಹಣವನ್ನು ಬೇರೆ ಉದ್ದೇಶಗಳಿಗೆ ಖರ್ಚು ಮಾಡುವಂತಿಲ್ಲ. ಆದರೂ ರಾಜ್ಯ ಸರ್ಕಾರ ಎಸ್ಸಿ.ಎಸ್ಟಿ.ಗಳ ಅಭಿವೃದ್ದಿಗಾಗಿ ಬಳಸಬೇಕಾಗಿರುವ ಹಣವನ್ನು ಬೇರೆ ಕೆಲಸಗಳಿಗೆ ವಿನಿಯೋಗಿಸುತ್ತ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದವರನ್ನು ವಂಚಿಸಿಕೊಂಡು ಬರುತ್ತಿದೆ. ವಿಧಾನಸಭೆ ಚುನಾವಣೆ ಪೂರ್ವದಲ್ಲಿ ಸಿದ್ದರಾಮಯ್ಯನವರು ಘೋಷಿಸಿದ ಐದು ಉಚಿತ ಗ್ಯಾರೆಂಟಿಗಳಿಗೆ ಎಸ್ಸಿ.ಪಿ. ಟಿ.ಎಸ್ಪಿ. ಹಣವನ್ನು ಖರ್ಚು ಮಾಡುತ್ತ ದಲಿತರನ್ನು ಕಡೆಗಣಿಸುತ್ತಿದ್ದಾರೆ. 38 ಇಲಾಖೆಗಳಲ್ಲಿ ಖಾಲಿಯಿರುವ ಬ್ಯಾಕ್‍ಲಾಗ್ ಹುದ್ದೆಗಳನ್ನು ತುಂಬಬೇಕು. ಎಸ್ಸಿಪಿ. ಟಿಎಸ್ಪಿ. ಹಣವನ್ನು ಬಳಸುತ್ತಿರುವ ಅಧಿಕಾರಿಗಳ ವಿರುದ್ದ ಕಾನೂನು ರೀತಿಯ ಕ್ರಮ ಕೈಗೊಳ್ಳುವಂತೆ ಪ್ರತಿಭಟನಾಕಾರರು ಒತ್ತಾಯಿಸಿದರು.

ಸುಪ್ರಿಂಕೋರ್ಟ್ ನಿರ್ದೇಶನದಂತೆ ದತ್ತಾಂಶ ಪಡೆದ ತಕ್ಷಣವೇ ಪರಿಶಿಷ್ಟ ಜಾತಿಯಲ್ಲಿನ 101 ಜಾತಿಗಳಿಗೆ ಜನಸಂಖ್ಯೆಗನುಗುಣವಾಗಿ ಬ್ಯಾಕ್‍ಲ್ಯಾಗ್ ಹುದ್ದೆಗಳನ್ನು ಭರ್ತಿ ಮಾಡಬೇಕೆಂದು ಆಗ್ರಹಿಸಿದರು. ಕರ್ನಾಟಕ ದಲಿತ ಸಂಘರ್ಷ ಸಮಿತಿ ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ ಜಿಲ್ಲಾ ಘಟಕದ ಸಂಚಾಲಕ ಕೊಂಡಾಪುರ ಪರಮೇಶ್ವರಪ್ಪ, ಹೊನ್ನೂರು ಮಾರಣ್ಣ, ಹಿರೇಹಳ್ಳಿ ರಾಜಣ್ಣ, ಆನಂದ, ದಡಗೂರು ಗಂಗಾಧರ, ಹೆಚ್.ಉಮೇಶ, ಎಸ್.ಆನಂದ ಗೌರಸಮುದ್ರ, ಎಸ್.ಮಹಾಂತೇಶ ಇನ್ನು ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment