Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಶಾಸಕ ರಮೇಶ್ ಬಂಡಿ ಸಿದ್ದೇಗೌಡರ ವಿರುದ್ದ ಎಸ್.ಡಿ.ಪಿ.ಐ. ಪ್ರತಿಭಟನೆ

---Advertisement---

ಶಾಸಕ ರಮೇಶ್ ಬಂಡಿ ಸಿದ್ದೇಗೌಡರ ವಿರುದ್ದ ಎಸ್.ಡಿ.ಪಿ.ಐ. ಪ್ರತಿಭಟನೆ

SDPI protest against MLA Ramesh Bandi Siddegowda

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜೂನ್. 24 : ಅರ್ಜಿ ಸಲ್ಲಿಸಿರುವ ಮುಸ್ಲಿಂರ ಹೆಸರಿಗೆ ಜಮೀನು ಮಂಜೂರು ಮಾಡಿದರೆ ಅಧಿಕಾರಿಯನ್ನು ನೇಣಿಗೇರಿಸುತ್ತೇನೆಂಬ ಅಸಾಂವಿಧಾನಿಕ ಮಾತುಗಳನ್ನಾಡಿರುವ ಶಾಸಕ ರಮೇಶ್ ಬಂಡಿ ಸಿದ್ದೇಗೌಡರ ವಿರುದ್ದ ಎಸ್.ಡಿ.ಪಿ.ಐ. ಕಾರ್ಯಕರ್ತರು ಮಂಗಳವಾರ ಜಿಲ್ಲಾ ಕಾಂಗ್ರೆಸ್ ಕಚೇರಿ ಸಮೀಪ ಪ್ರತಿಭಟನೆ ನಡೆಸಿ ಧಿಕ್ಕಾರಗಳನ್ನು ಕೂಗಿದರು.

ಮುಸ್ಲಿಂ ಸಮುದಾಯದ ಮತಗಳನ್ನು ಪಡೆದು ಶಾಸಕನಾಗಿದ್ದೇನೆಂಬ ಜ್ಞಾನವಿಲ್ಲದ ಕಾಂಗ್ರೆಸ್ ಶಾಸಕ ರಮೇಶ್ ಬಂಡಿ ಸಿದ್ದೇಗೌಡರನ್ನು ಕೂಡಲೆ ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ಪ್ರತಿಭಟನಾಕಾರರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.

ಪ್ರತಿಭಟನೆಯ ನೇತೃತ್ವ ವಹಿಸಿದ್ದ ಎಸ್.ಡಿ.ಪಿ.ಐ. ರಾಜ್ಯ ಸಮಿತಿ ಸದಸ್ಯ ಬಾಳೆಕಾಯಿ ಶ್ರೀನಿವಾಸ್ ಮಾತನಾಡಿ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು 45 ಸಾವಿರ ಮುಸ್ಲಿಂರಿಂದ ಮತಗಳನ್ನು ಪಡೆದು ಶಾಸಕನಾಗಿರುವ ರಮೇಶ್ ಬಂಡಿ ಸಿದ್ದೇಗೌಡನಿಗೆ ನಿಜವಾಗಿಯೂ ಅಲ್ಪಸಂಖ್ಯಾತರ ಮತಗಳು ಬೇಡವಾಗಿದ್ದರೆ ತಾಲ್ಲೂಕು ಕಚೇರಿ ಇಲ್ಲವೇ ಜಿಲ್ಲಾಧಿಕಾರಿ ಕಚೇರಿಗೆ ಹೋಗಿ ಮುಸ್ಲಿಂ ಮತಗಳನ್ನು ತಿರಸ್ಕರಿಸಿ ಎಂದು ಬರೆದುಕೊಡುವಂತೆ ಸವಾಲು ಹಾಕಿದರು.

 

ರಾಜ್ಯದ 224 ಕ್ಷೇತ್ರಗಳ ಪೈಕಿ 135 ಕ್ಕೂ ಹೆಚ್ಚು ವಿಧಾನಸಭಾ ಕ್ಷೇತ್ರಗಳಲ್ಲಿ ಮುಸ್ಲಿಂ ಮತದಾರರು ನಿರ್ಣಾಯಕರಾಗಿದ್ದಾರೆ. ಅಹಿಂದ ನಾಯಕ ಎಂದು ಬೊಬ್ಬೆ ಹೊಡೆಯುತ್ತಿರುವ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ನಿಜವಾಗಿಯೂ ತಳ ಸಮುದಾಯ ಮುಸ್ಲಿಂ ಜನಾಂಗದವರ ಬಗ್ಗೆ ಕಾಳಜಿಯಿದ್ದರೆ ಕೂಡಲೆ ಶಾಸಕ ರಮೇಶ್ ಬಂಡಿ ಸಿದ್ದೇಗೌಡನನ್ನು ವಜಾಗೊಳಿಸಬೇಕು. ಇಲ್ಲವಾದಲ್ಲಿ ರಾಜ್ಯಾದ್ಯಂತ ಎಸ್.ಡಿ.ಪಿ.ಐ.ನಿಂದ ಹೋರಾಟ ನಡೆಸಲಾಗುವುದೆಂದು ಎಚ್ಚರಿಸಿದರು.

ಮುಸ್ಲಿಂ ಸಮುದಾಯಕ್ಕೆ ಧಕ್ಕೆಯಾಗುವಂತೆ ಶಾಸಕ ರಮೇಶ್ ಬಂಡಿ ಸಿದ್ದೇಗೌಡ ಹೇಳಿಕೆ ನೀಡಿದ್ದು, ಮುಸ್ಲಿಂರಲ್ಲಿ ಸ್ವಾಭಿಮಾನವಿದ್ದರೆ ರಾಜ್ಯಾದ್ಯಂತ ಕಾಂಗ್ರೆಸ್ ಸದಸ್ಯತ್ವ ಸ್ಥಾನಕ್ಕೆ ರಾಜಿನಾಮೆ ನೀಡಿ ತಮ್ಮ ಶಕ್ತಿ ಏನೆಂಬುದನ್ನು ಪಕ್ಷಕ್ಕೆ ತೋರಿಸಬೇಕಿದೆ ಎಂದು ಜಾಗೃತಿಗೊಳಿಸಿದರು.

ಎಸ್.ಡಿ.ಪಿ.ಐ. ಜಿಲ್ಲಾಧ್ಯಕ್ಷ ಅಫಾನ್‍ಅಲಿ, ಉಪಾಧ್ಯಕ್ಷ ಸುಭಾನುಲ್ಲಾ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಗೀರ್‍ಅಹಮದ್, ಕೋಶಾಧಿಕಾರಿ ಗಾಜಿಹುಸೇನ್ ಸೇರಿದಂತೆ ಪದಾಧಿಕಾರಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment