ಈಶ್ವರಪ್ಪರನ್ನ ಮಂಪರು ಪರೀಕ್ಷೆಗೆ ಒಳಪಡಿಸಿದ್ರೆ ಸತ್ಯ ತಿಳಿಯುತ್ತೆ : SDPI ರಾಜ್ಯಾಧ್ಯಕ್ಷ

 

ಬೆಂಗಳೂರು: ಶಿವಮೊಗ್ಗದಲ್ಲಿ ನಿನ್ನೆ ಭಜರಂಗದಳದ ಕಾರ್ಯಕರ್ತ ಹರ್ಷ ಕೊಲೆಯಾಗಿದೆ. ಈ ಘಟನೆ ಸಂಬಂಧ ಸಾಕಷ್ಟು ನಾಯಕರು ಎಸ್ಡಿಪಿಐ ಮೇಲೂ ಆರೋಪ ಮಾಡುತ್ತಿದ್ದಾರೆ. ಈ ಬೆನ್ನಲ್ಲೇ ಸುದ್ದಿಗೋಷ್ಟಿ ನಡೆಸಿರುವ SDPI ಸಂಘಟನೆ ರಾಜ್ಯಧ್ಯಕ್ಷ ಪೊಲೀಸರಿಗೂ ಸವಾಲು ಹಾಕಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ಸುಪಾರಿ ಕೊಟ್ಟವರಿಗೂ ಸಚಿವ ಈಶ್ವರಪ್ಪ ಅವರಿಗೂ ಏನೋ ಸಂಬಂಧವಿದೆ. ಈಶ್ವರಪ್ಪ ಅವರನ್ನ ಮಂಪರು ಪರೀಕ್ಷೆಗೆ ಒಳಪಡಿಸಿ, ಎಲ್ಲಾ ಸತ್ಯ ಹೊರ ಬರಲಿದೆ ಎಂದು ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಒತ್ತಾಯಿಸಿದ್ದಾರೆ.

ಸಂಘ ಪರಿವಾರದವರು ಇಲ್ಲಿವರೆಗೂ 36 ಕೊಲೆ ಮಾಡಿದ್ದಾರೆ. 13 ಜನ ಹಿಂದೂ ಯುವಕರ ಕೊಲೆಯಲ್ಲಿ ಸಂಘ ಪರಿವಾರದವರ ಪಾತ್ರವಿದೆ. ಶಿವಮೊಗ್ಗ ಯುವಕನ ಕೊಲೆ ನಿಜಕ್ಕೂ ಖಂಡನೀಯ. ಕೊಲೆ ನಡೆದ ಕೂಡಲೇ ಪೊಲೀಸರ ತನಿಖೆಗೆ ಒಪ್ಪಿಸಬೇಕು. ತನಿಖೆ ಆರಂಭವಾಗುವ ಮುನ್ನ ಈಶ್ವರಪ್ಪ, ರಾಘವೆಂದ್ರ, ಪ್ರತಾಪ್ ಸಿಂಹ ಸೇರಿ ಕೊಲೆಯನ್ನ ಮುಸ್ಲಿಂರ ತಲೆಗೆ ಕಟ್ಟುತ್ತಿದ್ದಾರೆ. ಇವರ ಪ್ರಚೋದನಕಾರಿ ಹೇಳಿಕೆಯಿಂದಾಗಿ ಮುಸ್ಲಿಂರ ಮನೆ, ಅಂಗಡಿ, ವಾಹನಗಳಿಗೆ ಬೆಂಕಿ ಹಚ್ಚಲಾಗುತ್ತಿದೆ. ಶಿವಮೊಗ್ಗದಲ್ಲಿ ಎರಡು ದಿನದ ಹಿಂದೆ ಮುಸ್ಲಿಂ ಹುಡುಗರ ಹತ್ಯೆಯಾಗಿತ್ತು ಎಂದು ಆಕ್ರೋಶ ವ್ಯಕ್ತಪಡಿಸಿದರು.

suddionenews

Recent Posts

ಬೆಲೆಯೇರಿಕೆಯಾಗಲು ಕೇಂದ್ರದ ಬಿಜೆಪಿ ಸರ್ಕಾರ ಕಾರಣ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೀದರ್,(ಏಪ್ರಿಲ್ 16): ಗ್ಯಾರಂಟಿಗಳನ್ನು ಜಾರಿ ಮಾಡಿ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು…

3 hours ago

ಹೊಳಲ್ಕೆರೆ : ಶ್ರೀ ಹರಿಮತಿ ಚೌಡೇಶ್ವರಿ ಅಮ್ಮನವರ  ಜಾತ್ರೆ ಸಂಪನ್ನ

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ ಏ. 16 : ಹೊಳಲ್ಕೆರೆ…

6 hours ago

ಬೆಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

ಚಿತ್ರದುರ್ಗ. ಏ.16: ಜಿಲ್ಲೆಯಲ್ಲಿ ಪೂರ್ವ ಮುಂಗಾರು ಮಳೆಯಿಂದಾಗಿ ಹಾನಿಗೊಳಗಾದ ಬೆಳೆಹಾನಿ ಪ್ರದೇಶಗಳಿಗೆ ಕೃಷಿ ಮತ್ತು ತೋಟಗಾರಿಕೆ ಇಲಾಖೆ ಅಧಿಕಾರಿಗಳು ಭೇಟಿ…

6 hours ago

ಹಜ್ ಯಾತ್ರಾರ್ಥಿಗಳಿಗೆ ಉಚಿತ ಆರೋಗ್ಯ ತಪಾಸಣೆ ಹಾಗೂ ಲಸಿಕಾಕರಣ

ಚಿತ್ರದುರ್ಗ. ಏ.16: ಆರೋಗ್ಯ ಇಲಾಖೆ, ಜಿಲ್ಲಾ ಆಸ್ಪತ್ರೆ, ಹಜ್ ಸಮಿತಿ ಸಹಯೋಗದೊಂದಿಗೆ ಬುಧವಾರ ನಗರದ ಎಂ.ಕೆ.ಪ್ಯಾಲೇಸ್ ಸಭಾಂಗಣದಲ್ಲಿ ಜಿಲ್ಲೆಯ 99…

7 hours ago

ರಂಗಭೂಮಿ ಮಕ್ಕಳ ಸರ್ವತೋಮುಖ ಅಭಿವೃದ್ದಿಗೆ ಸಹಕಾರಿ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 16 : ರಂಗಭೂಮಿ ಚಟುವಟಿಕೆಗಳ ಆಯಾಮಗಳನ್ನು ಶಿಕ್ಷಣ ಕ್ಷೇತ್ರದಲ್ಲಿ ಅಳವಡಿಸಿಕೊಂಡರೆ ಬೋಧನೆಯು ಹೆಚ್ಚು ಪರಿಣಾಮಕಾರಿಯಾಗಿರುತ್ತದೆ. ಶಿಕ್ಷಕ…

7 hours ago

ಚಿತ್ರದುರ್ಗ : ಯೂನಿಯನ್ ಪಾರ್ಕ್ ಬಳಿ ಅನಾಮಧೇಯ ಶವ ಪತ್ತೆ

ಚಿತ್ರದುರ್ಗ. ಏ.16:ಚಿತ್ರದುರ್ಗ ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಪಕ್ಕದಲ್ಲಿರುವ ಯೂನಿಯನ್ ಪಾರ್ಕ್ ಬಳಿ, ಪುಟ್‍ಪಾತ್ ಮೇಲೆ ಅನಾಮಧೇಯ ವ್ಯಕ್ತಿಯ ಶವ ಪತ್ತೆಯಾಗಿದೆ.…

7 hours ago