Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಾಳೆಯಿಂದ ದ್ವಿತೀಯ ಪಿಯು ಪರೀಕ್ಷೆ ; ವೆಬ್ ಕಾಸ್ಟಿಂಗ್ ಕಣ್ಗಾವಲಿನಲ್ಲಿ ವಿದ್ಯಾರ್ಥಿಗಳು..!

---Advertisement---

ಬೆಂಗಳೂರು; ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿವೆ. ಈಗಾಗಲೇ ಶಿಕ್ಷಣ ಇಲಾಖೆ ಎಲ್ಲಾ ರೀತಿಯ ತಯಾರಿಯನ್ನು ಮಾಡಿಕೊಂಡಿದೆ. ಜೊತೆಗೆ ಈ ಬಾರಿ ವಿದ್ಯಾರ್ಥಿಗಳು ವೆಬ್ ಕಾಸ್ಟಿಂಗ್ ಕಣ್ಗಾವಲಿನಲ್ಲಿ ಪರೀಕ್ಷೆ ಬರೆಯಲಿದ್ದಾರೆ. ಈ ವ್ಯವಸ್ಥೆಯಿಂದ ವಿದ್ಯಾರ್ಥಿಗಳಿಗೆ ಕಾಪಿ ಹೊಡೆಯುವ ಅವಕಾಶಕ್ಕೆ ಬ್ರೇಕ್ ಬೀಳಲಿದೆ.

ಹಾಗಾದ್ರೆ ಈ ವೆಬ್ ಕಾಸ್ಟಿಂಗ್ ಹೇಗೆ ವರ್ಕ್ ಆಗುತ್ತೆ ಅನ್ನೋದನ್ನ ನೋಡೋದಾದ್ರೆ, ವೆಬ್ ಕಾಸ್ಟಿಂಗ್ ಅಂದ್ರೆ ಅಂತರ್ಜಾಲದಲ್ಲಿ ನೇರವಾಗಿ ಪ್ರಸಾರ ಮಾಡುವ ಪ್ರಕ್ರಿಯೆಯಾಗಿದೆ. ಈ ತಂತ್ರಜ್ಞಾನವೂ ಸೂಕ್ತ ಸಮಯದಲ್ಲಿ ಕೆಲಸ ಮಾಡಲಿದೆ. ವೆಬ್ ಕಾಸ್ಟರ್ ಹಾಗೂ ವೀಕ್ಷಕರ ನಡುವೆ ಕ್ರಿಯಾತ್ಮಕವಾಗಿ, ಸಕ್ರಿಯವಾಗಿ ಸಂಭಾಷಣೆಗಳಿಗೆ ಅನುಕೂಲ ಮಾಡಿಕೊಡುತ್ತದೆ. ಪ್ರತಿದಿನದ ಪರೀಕ್ಷಾ ಕಾರ್ಯದ ಚಟುವಟಿಕೆಗಳನ್ನು ವೆಬ್ ಕಾಸ್ಟ್ ಮಾಡಲು ಜಿಲ್ಲಾ ಪಂಚಾಯ್ತಿಗಳ ಕೊಠಡಿಯನ್ನು ಸ್ಥಾಪಿಸಲಾಗುತ್ತದೆ. ಪರೀಕ್ಷಾ ಕೇಂದ್ರದಲ್ಲಿ ಅಗತ್ಯ ಮೂಲಭೂತ ಸೌಲಭ್ಯಗಳಾದ ಕುಡಿಯುವ ನೀರು, ಶೌಚಾಲಯ, ಉತ್ತಮವಾದ ಗಾಳಿ, ಬೆಳಕು, ಪೀಠೋಪಕರಣಗಳನ್ನು ಒದಗಿಸಲು ಸಂಬಂಧಿಸಿದ ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರಿಗೆ ಮತ್ತು ಶಾಲಾ ಮುಖ್ಯ ಶಿಕ್ಷಕರಿಗೆ ಸೂಚನೆ ನೀಡಲಾಗಿದೆ. ಈ ವರ್ಷ ಮೊದಲ ಬಾರಿಗೆ ಈ ರೀತಿಯ ವ್ಯವಸ್ಥೆ ಮಾಡಲಾಗಿದೆ.

ಕರ್ನಾಟಕದ 1171 ಕೇಂದ್ರಗಳನ್ನು ಪರೀಕ್ಷೆಗೆ ಸಜ್ಜುಗೊಳಿಸಲಾಗಿದೆ. ಮಾರ್ಚ್ 1ರಿಂದ 20ರವರೆಗೆ ರಾಜ್ಯಾದ್ಯಂತ 1171 ಕೇಂದ್ರಗಳಲ್ಲಿ ಬಿಗಿ ಭದ್ರತೆಯಲ್ಲಿ ದ್ವಿತೀಯ ಪಿಯು ಪರೀಕ್ಷೆ ನಡೆಯಲಿದೆ. ಒಟ್ಟು 7,13,862 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. 3,35,468 ಗಂಡು ಮಕ್ಕಳು, 3,78,389 ಹೆಣ್ಣು ಮಕ್ಕಳು ಹಾಗೂ ಐವರು ತೃತೀಯ ಲಿಂಗಿಗಳಿದ್ದಾರೆ. ಒಟ್ಟು 1,171 ಪರೀಕ್ಷಾ ಕೇಂದ್ರಗಳ ವ್ಯವಸ್ಥೆ ಮಾಡಲಾಗಿದೆ. ಇದರೊಂದಿಗೆ 2,342 ಸ್ಥಾನಿಕ ಜಾಗೃತದಳ, 76 ಉತ್ತರ ಪತ್ರಿಕೆ ಮೌಲ್ಯಮಾಪನ ಕೇಂದ್ರಗಳು ಹಾಗೂ 31,000 ಮೌಲ್ಯಮಾಪಕರನ್ನ ಕರ್ತವ್ಯಕ್ಕೆ ನಿಯೋಜಿಸಲಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...