Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದ್ವಿತೀಯ ಪಿಯು ಪರೀಕ್ಷೆ: ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಉತ್ತಮ ಫಲಿತಾಂಶ

---Advertisement---

ಚಿತ್ರದುರ್ಗ. ಏ.10:  2025-26ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಚಿತ್ರದುರ್ಗ ನಗರದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ದಾಖಲಿಸಿದ್ದಾರೆ.

ಈ ಬಾರಿಯ ಪರೀಕ್ಷೆಯಲ್ಲಿ ಕಾಲೇಜಿನ 21 ವಿದ್ಯಾರ್ಥಿಗಳು ಉನ್ನತ ಶ್ರೇಣಿ ಪಡೆದಿದ್ದಾರೆ. ಉಳಿದಂತೆ 116 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 66 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿ ಹಾಗೂ 39 ವಿದ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ವಾಣಿಜ್ಯ ವಿಭಾಗದಲ್ಲಿ ಎಸ್.ಅಜಯ್ (572 ಅಂಕ), ವಿಜ್ಞಾನ ವಿಭಾಗದಲ್ಲಿ ಆರ್.ಸಂದೀಪ (558 ಅಂಕ) ಹಾಗೂ ಕಲಾ ವಿಭಾಗದಲ್ಲಿ ವಿ. ರಾಮಾಂಜಿನೇಯ (551 ಅಂಕ) ಅವರು ಅತಿ ಹೆಚ್ಚು ಅಂಕಗಳನ್ನು ಪಡೆದು ಕಾಲೇಜಿನ ಟಾಪರ್‍ಗಳಾಗಿ ಹೊರಹೊಮ್ಮಿದ್ದಾರೆ.

ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷರು ಹಾಗೂ ಚಿತ್ರದುರ್ಗ ಶಾಸಕರಾದ ಕೆ.ಸಿ. ವೀರೇಂದ್ರ ಪಪ್ಪಿ ಹಾಗೂ ಸಮಿತಿಯ ಸದಸ್ಯರು, ಪ್ರಾಂಶುಪಾಲರು ಹಾಗೂ ಉಪನ್ಯಾಸಕ ವರ್ಗದವರು ಅಭಿನಂದಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...