Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಾಳೆ ದ್ವಿತೀಯ ಪಿಯು ಫಲಿತಾಂಶ : ವೆಬ್ಸೈಟ್ ಬ್ಯುಸಿ ಇದ್ರೆ ರಿಸಲ್ಟ್ ನೋಡೋಕೆ ಹೀಗೆ ಮಾಡಿ

---Advertisement---

ಬೆಂಗಳೂರು: ಎಲ್ಲವೂ ಅಂದುಕೊಂಡಂತೆ ರೆಡಿಯಾಗಿದ್ದರೆ ನಿನ್ನೆಯೇ ದ್ವಿತೀಯ ಪಿಯುಸಿ ಫಲಿತಾಂಶ ಬಂದು ವಿದ್ಯಾರ್ಥಿಗಳೆಲ್ಲಾ ಮುಂದಿನ ಭವಿಷ್ಯದ ಬಗ್ಗೆ ಆಲೋಚನೆ ಮಾಡ್ತಾ ಇದ್ದರು. ಆದರೆ ಆ ರೀತಿ ಆಗ್ಲಿಲ್ಲ ಯಾವುದೋ ತಾಂತ್ರಿಕ ಕಾರಣದಿಂದಾಗಿ. ನಾಳೆ ಅಧಿಕೃತವಾಗಿ ಫಲಿತಾಂಶ ಪ್ರಕಟವಾಗ್ತಾ ಇದೆ. ನಾಳೆ ಮಧ್ಯಾಹ್ನ 3 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧಿಕೃತ ವೆಬ್ಸೈಟ್ ನಲ್ಲಿ ಫಲಿತಾಂಶ ವನ್ನು ಅಪ್ಲೋಡ್ ಮಾಡಲಾಗುತ್ತದೆ. ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆಯನ್ನು ಬಳಸಿಕೊಂಡು ಅಂಕಗಳನ್ನು ವೀಕ್ಷಿಸಬಹುದು.

ಸಹಜವಾಗಿ ಬೆಳಗ್ಗೆಯೇ ಫಲಿತಾಂಶವನ್ನ ಪ್ರಕಟ‌ ಮಾಡ್ತಾ ಇದ್ರು. ಆದರೆ ಈ ಬಾರಿ ಮಧ್ಯಾಹ್ನದ ವೇಳೆ ಫಲಿತಾಂಶ ಪ್ರಕಟವಾಗಲಿದ್ದು, ಸಂಜೆ 6.15ಕ್ಕೆ ಸಚಿವ ಮಧು ಬಂಗಾರಪ್ಪ ಅವರು ಸುದ್ದಿಗೋಷ್ಠಿ ನಡೆಸಲಿದ್ದಾರೆ. ವಿದ್ಯಾರ್ಥಿಗಳು ಫಲಿತಾಂಶವನ್ನ karresults.nic.in ಗೆ ಭೇಟಿ ನೀಡಿ, ನೋಡಬಹುದು. ಎಲ್ಲಾ ವಿದ್ಯಾರ್ಥಿಗಳಿಗೆ ಪೋಷಕರಿಗೆ ಆತಂಕ, ಕುತೂಹಲ ಒಟ್ಟೊಟ್ಟಿಗೆ ಇರುವ ಕಾರಣ, ರಿಸಲ್ಟ್ ಬಂದ ಕೂಡಲೇ ಎಲ್ಲರೂ ಅದೇ ವೆಬ್ಸೈಟ್ ನಲ್ಲಿ ಇರ್ತಾರೆ.

ಹೀಗಾಗಿಯೇ ಸರ್ವರ್ ಬ್ಯುಸಿಯಾಗುವ ಸಾಧ್ಯತೆಯೂ ಇದೆ. ಒಂದು ವೇಳೆ ವೆಬ್ಸೈಟ್ ಬ್ಯುಸಿ ಇದ್ರೆ ‘ಕರ್ನಾಟಕ ಒನ್’ ಎಂಬ ಮೊಬೈಲ್ ಆಪ್ ಮೂಲಕವೂ ಫಲಿತಾಂಶವನ್ನ ವೀಕ್ಷಣೆ ಮಾಡಬಹುದು. ಜೊತೆಗೆ ಶಿಕ್ಷಣ ಇಲಾಖೆಯೇ ಎಸ್ಎಂಎಸ್ ಮೂಲಕ ಫಲಿತಾಂಶವನ್ನ ವಿದ್ಯಾರ್ಥಿಗಳಿಗೆ ತಲುಪಿಸುವ ಕೆಲಸ ಮಾಡುತ್ತದೆ. ನೋಂದಾಯಿತ ನಂಬರ್ ಗೆ ಫಲಿತಾಂಶವೂ ಎಸ್ಎಂಎಸ್ ಮೂಲಕ ಬರಲಿದೆ. ಈ ಬಾರಿ ಪರೀಕ್ಷೆ ಬರೆದಿರುವ ಲಕ್ಷಾಂತರ ವಿದ್ಯಾರ್ಥಿಗಳು ಕುತೂಹಲದಿಂದ ಫಲಿತಾಂಶಕ್ಕೆ ಕಾಯ್ತಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now