ಯುಗಾದಿ ಹಬ್ಬದ ದಿನವೇ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಶುಭ ಸುದ್ದಿ ಸಿಕ್ಕಿದೆ. ನಾಳೆಯೇ ಫಲಿತಾಂಶ ಪ್ರಕಟಗೊಳ್ಳಲಿದೆ. ಏಪ್ರಿಲ್ 10 ರಂದು ಫಲಿತಾಂಶ ಬಿಡುಗಡೆಯಾಗಲಿದೆ. ಈ ಸಂಬಂಧ ನಾಳೆ ಬೆಳಗ್ಗೆ 10 ಗಂಟೆಗೆ ಸುದ್ದಿಗೋಷ್ಠಿ ಕರೆಯಲಾಗಿದೆ.
https://karesults.nic.in ವೆಬ್ ಸೈಟ್ ನಲ್ಲಿ 11 ಗಂಟೆ ನಂತರ ಫಲಿತಾಂಶ ವೀಕ್ಷಿಸಬಹುದು ಎಂದು ತಿಳಿಸಿದೆ. ಮಾರ್ಚ್ 01 ರಿಂದ 22 ರವರೆಗೆ ಪರೀಕ್ಷೆ ನಡೆಸಿತ್ತು. ರಾಜ್ಯದಾದ್ಯಂತ 1,124 ಕೇಂದ್ರಗಳಲ್ಲಿ ಸುಮಾರು 6.98 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಮಾ.25ರಿಂದಲೇ ಮೌಲ್ಯಮಾಪನ ಪ್ರಕ್ರಿಯೆ ಆರಂಭಿಸಲಾಗಿತ್ತು. ಈ ವರ್ಷದಿಂದ ಮೂರು ಬಾರಿ ಪರೀಕ್ಷೆ ಬರೆಯುವ ಅವಕಾಶ ಇದೆ. ವಿದ್ಯಾರ್ಥಿಗಳು ಬಯಸಿದರೆ ಮತ್ತೊಮ್ಮೆ ಪರೀಕ್ಷೆ ಬರೆಯಬಹುದು.
ಶಿಕ್ಷಣ ಇಲಾಖೆಯ
karresults.nic.in ಅಥವಾ pue.kar.nic ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ.
* ಮುಖಪುಟದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶಗಳ ಲಿಂಕ್ ಅನ್ನು ಕ್ಲಿಕ್ ಮಾಡಿ.
* ಲಾಗಿನ್ ಪುಟದಲ್ಲಿ ನಿಮ್ಮ ನೋಂದಣಿ ಸಂಖ್ಯೆಯೊಂದಿಗೆ ಯಾವ ವಿಭಾಗವೆಂದು ನಮೂದಿಸಿ. ವಿಜ್ಞಾನ, ವಾಣಿಜ್ಯ ಮತ್ತು ಕಲೆ ಎಂಬ ಆಯ್ಕೆಗಳಿರಲಿದ್ದು, ನಿಮ್ಮ ಕೋರ್ಸ್ ಯಾವುದೋ ಅದನ್ನು ಆಯ್ಕೆ ಮಾಡಿಕೊಳ್ಳಬೇಕಾಗುತ್ತದೆ.
* ನಂತರ ಕ್ಲಿಕ್ ಮಾಡಿದಾಗ ನಿಮಗೆ ಫಲಿತಾಂಶವು ಸ್ಕ್ರೀನ್ ಮೇಲೆ ಕಾಣಿಸಲಿದ್ದು, ಬಳಿಕ ಈ ಫಲಿತಾಂಶದ ಪುಟವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.












