Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಏಪ್ರಿಲ್ 9ಕ್ಕೆ ದ್ವಿತೀಯ ಪಿಯು ಫಲಿತಾಂಶ ಪ್ರಕಟ

---Advertisement---

ಬೆಂಗಳೂರು : ಸಚಿವರು ಹೇಳಿದಂತೆ ಆಗಿದ್ದರೆ ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಆಗ್ಬೇಕಿತ್ತು. ಆದರೆ ತಾಂತ್ರಿಕ ಕಾರಣದಿಂದ ಅದು ಸಾಧ್ಯವಾಗಿಲ್ಲ. ಕುತೂಹಲದಿಂದ ಕಾಯ್ತಿದ್ದ ವಿದ್ಯಾರ್ಥಿಗಳಿಗೂ ಬೇಸರ ತರಿಸಿದೆ. ಇದೀಗ ಮತ್ತೆ ದಿನಾಂಕವನ್ನ ಅಧಿಕಾರಿಗಳು ತಿಳಿಸಿದ್ದಾರೆ. ಏಪ್ರಿಲ್ 9 ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ ಎಂಬ ಮಾಹಿತಿ ಸಿಕ್ಕಿದೆ. ವಿದ್ಯಾರ್ಥಿಗಳು ಫಲಿತಾಂಶವನ್ನು ವೆಬ್ಸೈಟ್ ನಲ್ಲಿ ನೋಡಬಹುದಾಗಿದೆ.

ಈ ಬಾರಿಯ ಪರೀಕ್ಷೆಗೆ 7,10,363 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಎಕ್ಸಾಂ ಬರೆದಿದ್ದರು. ಫೆಬ್ರವರಿ 28 ರಿಂದ ಮಾರ್ಚ್ 17 ರವರೆಗೆ ಪರೀಕ್ಷೆ ನಡೆದಿತ್ತು. ಆನ್ಲೈನ್ ನಲ್ಲೂ ಫಲಿತಾಂಶ ಲಭ್ಯವಿರಲಿದೆ. ವಿದ್ಯಾರ್ಥಿಗಳು ತಮ್ಮ ಫಲಿತಾಂಶ ನೋಡಲು ನೋಂದಣಿ ಸಂಖ್ಯೆ, ಜನ್ಮ ದಿನಾಂಕ ನಮೂದಿಸಿ, ಮಾರ್ಕ್ಸ್ ಅನ್ನು ಪರಿಶೀಲಿಸಬಹುದಾಗಿದೆ.

ಮಾಹಿತಿ ಪ್ರಕಾರ ರಾಜ್ಯದಲ್ಲಿ ದಾವಣಗೆರೆ ಹಾಗೂ ಬಾಗಲಕೋಟೆಯಲ್ಲಿ ಉಪ ಚುನಾವಣೆ ನಡೀತಾ ಇದೆ. ನೀತಿ ಸಂಹಿತೆ ಕೂಡ ಜಾರಿಯಲ್ಲಿದೆ. ಹೀಗಾಗಿ ಸಚಿವರು ಫಲಿತಾಂಶ ಪ್ರಕಟಿಸಲು ಚುನಾವಣಾ ಆಯೋಗದ ಅನುಮತಿ ಪಡೆಯಬೇಕಿದೆ. ಈ ಕಾರಣದಿಂದ ಫಲಿತಾಂಶ ತಡವಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now