ಬೆಂಗಳೂರು: ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ನಿರ್ಣಯ ಮಂಡಳಿಯಲ್ಲಿ ಪರೀಕ್ಷೆಯ ಫಲಿತಾಂಶವನ್ನು ಸುದ್ದಿಗೋಷ್ಟಿ ಮೂಲಕ ಪ್ರಕಟವಾಗಿದೆ. ಮಂಡಳಿ ಅಧ್ಯಕ್ಷೆ ಮಂಜುಶ್ರೀ ಹಾಗೂ ಪರೀಕ್ಷಾ ವಿಭಾಗದ ನಿರ್ದೇಶಕ ಗೋಪಾಲಕೃಷ್ಣ ಸೇರಿ ಹಲವು ಅಧಿಕಾರಿಗಳಿಂದ ಫಲಿತಾಂಶದ ಮಾಹಿತಿ ಹೊರಬಿದ್ದಿದೆ. ಈ ಬಾರಿ 6 ಲಕ್ಷದ 98 ಸಾವಿರದ 378 ವಿದ್ಯಾರ್ಥಿಗಳು ಅರ್ಹರಾಗಿದ್ದರು. ಆದರೆ ಈ ಬಾರಿ 6 ಲಕ್ಷದ 81 ಸಾವಿರದ 079 ವಿದ್ಯಾರ್ಥಿಗಳು ಹಾಜರಾಗಿದ್ದರು.
5 ಲಕ್ಷದ 52 ಸಾವಿರದ 690 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಬಾರಿ ಶೇಕಡ 81 ಎಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಇನ್ನು ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದಿದೆ. ಗದಗ ಜಿಲ್ಲೆ ಕೊನೆಯ ಸ್ಥಾನ ಪಡೆದಿದೆ. ವಿಜ್ಞಾನ ವಿಭಗಾದಲ್ಲಿ ವಿದ್ಯಾಲಕ್ಷ್ಮೀ 598 ಅಂಕ ಪಡೆಯುವ ಮೂಲಕ ಟಾಪರ್ ಆಗಿದ್ದಾರೆ.