Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದ್ವಿತೀಯ ಪಿಯುಸಿ ಫಲಿತಾಂಶ : ಚಿತ್ರದುರ್ಗ ಜಿಲ್ಲೆಯ ಸಂಪೂರ್ಣ ಮಾಹಿತಿ ಇಲ್ಲಿದೆ…!

---Advertisement---

ಚಿತ್ರದುರ್ಗ. ಏ.08: ಜಿಲ್ಲೆಯಲ್ಲಿ ಕಳೆದ ಮಾರ್ಚ್ 01 ರಿಂದ 20ರವರೆಗೆ ನಡೆದ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟವಾಗಿದ್ದು, ಜಿಲ್ಲೆಗೆ ಪರೀಕ್ಷೆ-1ರಲ್ಲಿ ಶೇ.59.87 ರಷ್ಟು ಫಲಿತಾಂಶ ಲಭಿಸಿದೆ.

 

ಕಲಾ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾದ 4,590 ವಿದ್ಯಾರ್ಥಿಗಳ ಪೈಕಿ 1,684   ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾದ 3,746 ವಿದ್ಯಾರ್ಥಿಗಳ ಪೈಕಿ 2,192 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾದ 6,425 ವಿದ್ಯಾರ್ಥಿಗಳ ಪೈಕಿ 4,330 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ ಪರೀಕ್ಷೆಗೆ ಹಾಜರಾದ 14761 ವಿದ್ಯಾರ್ಥಿಗಳ ಪೈಕಿ 8206 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಪರೀಕ್ಷೆಗೆ ಹಾಜರಾದ 13,426  ರೆಗ್ಯುಲರ್ ವಿದ್ಯಾರ್ಥಿಗಳ ಪೈಕಿ 8,038 ತೇರ್ಗಡೆಯಾಗಿದ್ದಾರೆ.  1,082 ಪುನರಾವರ್ತಿತ ವಿದ್ಯಾರ್ಥಿಗಳ ಪೈಕಿ  107 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಹಾಗೂ 253 ಖಾಸಗಿ  ವಿದ್ಯಾರ್ಥಿಗಳ ಪೈಕಿ 61 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.
ನಗರ ಪ್ರದೇಶದಲ್ಲಿ ಪರೀಕ್ಷೆಗೆ ಹಾಜರಾದ 9,926 ವಿದ್ಯಾರ್ಥಿಗಳ ಪೈಕಿ 5,471 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಪರೀಕ್ಷೆ ಹಾಜರಾದ 4,835 ವಿದ್ಯಾರ್ಥಿಗಳ ಪೈಕಿ 2,735 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

 

ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳ ವಿವರ: ಕಲಾ ವಿಭಾಗದಲ್ಲಿ ಚಿತ್ರದುರ್ಗ ತಾಲ್ಲೂಕಿನ ಸಿರಿಗೆರೆಯ ಬಿ.ಲಿಂಗಯ್ಯ ಪಿ.ಯು ಕಾಲೇಜು ವಿದ್ಯಾರ್ಥಿ ಪಾಂಡುರಂಗ ಆನೆಗೊಂದಿ 586 (ಶೇ.97.66) ಅಂಕ ಗಳಿಸುವುದರೊಂದಿಗೆ ಜಿಲ್ಲೆಗೆ ಪ್ರಥಮ ಸ್ಥಾನ ಗಳಿಸಿದ್ದಾರೆ.

ಹೊಳಲ್ಕೆರೆ ತಾಲ್ಲೂಕಿನ ಮುತ್ತಗದೂರು ಗ್ರಾಮದ ತರಳಬಾಳು ಪಿಯು ಕಾಲೇಜಿನ ಅಂಜುಮನ್ ಬಾನು ಹೆಚ್.ಎಸ್ 581 (ಶೇ.96.83) ಹಾಗೂ ಮೊಳಕಾಲ್ಮೂರು ತಾಲ್ಲೂಕಿನ ಚಿಕ್ಕೋಬನಹಳ್ಳಿ ಶ್ರೀ.ಆಂಜನೇಯ ಪಿಯು ಕಾಲೇಜಿನ ಸಮೀನ ಜೆ. 579 (ಶೇ.96.5) ಅಂಕಗಳಿಸುವುದರೊಂದಿಗೆ ಅನುಕ್ರಮವಾಗಿ ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದಿದ್ದಾರೆ.

 

ವಾಣಿಜ್ಯ ವಿಭಾಗದಲ್ಲಿ ಚಿತ್ರದುರ್ಗ ನಗರದ ಎಸ್.ಆರ್.ಎಸ್ ಪಿಯು ಕಾಲೇಜಿನ ವಿದ್ಯಾರ್ಥಿಗಳಾದ ಇಶಿತಾ ಬಿ.ಎನ್ 592 (ಶೇ.98.66), ಸಾಕ್ಷಿ ಎಸ್.ಬಿ 589 (ಶೇ.98.16) ಹಾಗೂ ರಿಯ ಎಸ್ ಕೊಠಾರಿ 588 (ಶೇ.588) ಅಂಕಗಳನ್ನು ಗಳಿಸುವ ಮೂಲಕ ಅನುಕ್ರಮವಾಗಿ ಜಿಲ್ಲೆಗೆ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಚಿತ್ರದುರ್ಗ ನಗರದ ಡಾನ್ ಬಾಸ್ಕೋ ಪಿಯು ಕಾಲೇಜು ವಿದ್ಯಾರ್ಥಿ ಮಾರುತಿ ಎಂ 593 (ಶೇ.98.83) ಅಂಕ ಪಡೆದು ಜಿಲ್ಲೆಗೆ ಪ್ರಥಮ ಸ್ಥಾನ ಗಳಿಸಿದ್ದಾನೆ. ಚಿತ್ರದುರ್ಗ ನಗರದ ಎಸ್.ಆರ್.ಎಸ್ ಪಿಯು ಕಾಲೇಜಿನ ವಿದ್ಯಾರ್ಥಿಗಳಾದ ವಿಜೇತರೆಡ್ಡಿ ಬಿ.ಸಿ 589 (ಶೇ.98.16) ಹಾಗೂ ಅಮರೇಶ್ 587 (ಶೇ.97.83) ಅಂಕಗಳನ್ನು ಗಳಿಸುವ ಮೂಲಕ ಅನುಕ್ರಮವಾಗಿ ಜಿಲ್ಲೆಗೆ ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದಿದ್ದಾರೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...