2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ಶೇ.86ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್ https://karresults.nic.in ಮೂಲಕ ಆನ್‌ಲೈನ್‌ನಲ್ಲಿ ವೀಕ್ಷಿಸಬಹುದಾಗಿದೆ.ಜಾಲತಾಣದಲ್ಲಿ ತಾಂತ್ರಿಕ ಸಮಸ್ಯೆಗಳು ಎದುರಾದರೆ, ಪರ್ಯಾಯವಾಗಿ ಡಿಜಿಲಾಕರ್ ಅಪ್ಲಿಕೇಶನ್ ಹಾಗೂ ವೆಬ್‌ಸೈಟ್ ಮೂಲಕವೂ ಫಲಿತಾಂಶ ಪರಿಶೀಲಿಸಲು ಅವಕಾಶ ನೀಡಲಾಗಿದೆ.
ಇದೇ ಮೊದಲ ಬಾರಿಗೆ ಅಂಕಪಟ್ಟಿಗಳನ್ನು ಡಿಜಿಲಾಕರ್ ಮತ್ತು ನ್ಯಾಷನಲ್ ಅಕಾಡೆಮಿಕ್ ಡಿಪಾಸಿಟರಿ (NAD) ಮೂಲಕವೂ ಲಭ್ಯವಾಗುವಂತೆ ವ್ಯವಸ್ಥೆ ಮಾಡಲಾಗಿದೆ.ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸಂಜೆ 6 ಗಂಟೆಗೆ ಮಲ್ಲೇಶ್ವರಂನಲ್ಲಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಲಿದ್ದು, ಟಾಪರ್‌ಗಳ ಪಟ್ಟಿ, ಜಿಲ್ಲಾವಾರು ಫಲಿತಾಂಶ ಮತ್ತು ಇತರ ವಿವರಗಳನ್ನು ಪ್ರಕಟಿಸಲಿದ್ದಾರೆ.
ಈ ವರ್ಷದ ಪರೀಕ್ಷೆಗಳು ಫೆಬ್ರವರಿ 28ರಿಂದ ಮಾರ್ಚ್ 12ರವರೆಗೆ ರಾಜ್ಯದ 1,217 ಕೇಂದ್ರಗಳಲ್ಲಿ ನಡೆದಿದ್ದು, 5,174 ಕಾಲೇಜುಗಳಿಂದ ಸುಮಾರು 7.10 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಇದರಲ್ಲಿ ವಿಜ್ಞಾನ ವಿಭಾಗದ 2.92 ಲಕ್ಷ, ವಾಣಿಜ್ಯ ವಿಭಾಗದ 2.11 ಲಕ್ಷ ಹಾಗೂ ಕಲಾ ವಿಭಾಗದ 1.42 ಲಕ್ಷ ವಿದ್ಯಾರ್ಥಿಗಳು ಸೇರಿದ್ದಾರೆ.
ಈ ಬಾರಿ ಉತ್ತೀರ್ಣತೆಗೆ ಅಗತ್ಯವಾದ ಕನಿಷ್ಠ ಅಂಕಗಳನ್ನು 35ರಿಂದ 30ಕ್ಕೆ ಇಳಿಸಲಾಗಿದ್ದು, ಇದು ವಿದ್ಯಾರ್ಥಿಗಳಿಗೆ ಅನುಕೂಲಕರವಾಗಿದೆ.
ಸರ್ವರ್ ಸಮಸ್ಯೆಗಳನ್ನು ತಪ್ಪಿಸಲು ಡಿಜಿಟಲ್ ವ್ಯವಸ್ಥೆಗಳನ್ನು ಬಲಪಡಿಸಲಾಗಿದ್ದು, ವಿದ್ಯಾರ್ಥಿಗಳು ಸುಲಭವಾಗಿ ತಮ್ಮ ಅಂಕಪಟ್ಟಿಯನ್ನು ಮೊಬೈಲ್‌ನಲ್ಲೇ ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ.

ಇದೇ ವೇಳೆ, ಮುಂದಿನ ಶೈಕ್ಷಣಿಕ ವರ್ಷದಿಂದ ಕಾಗದದ ಅಂಕಪಟ್ಟಿ ನೀಡುವ ಪದ್ಧತಿಗೆ ಅಂತ್ಯವಿದ್ದು, APAAR ಐಡಿ ಮೂಲಕ NAD–ಡಿಜಿಲಾಕರ್‌ನಲ್ಲಿ ಮಾತ್ರ ದಾಖಲೆಗಳನ್ನು ಒದಗಿಸಲು ಸರ್ಕಾರ ನಿರ್ಧರಿಸಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.









