2024-25ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದೆ. ಈ ಬಾರಿ ಸಾಕಷ್ಟು ವಿದ್ಯಾರ್ಥಿಗಳುಫೇಲ್ ಕೂಡ ಆಗಿದ್ದಾರೆ. ಕಲಾ, ವಾಣಿಜ್ಯ, ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡಿದ ಮಕ್ಕಳು ಶೇಕಡಾ 82.54 ರಷ್ಟು ಪಾಸ್ ಆಗಿದ್ದಾರೆ. ದ್ವಿತೀಯ ಪಿಯುಸಿ ಫಲಿತಾಂಶವನ್ನು ಸಚಿವ ಮಧು ಬಂಗಾರಪ್ಪ ಅನೌನ್ಸ್ ಮಾಡಿದ್ದಾರೆ. ಬಳಿಕ ಫೇಲ್ ಆದ ಮಕ್ಕಳಿಗೆ ಆತ್ಮಸ್ಥೈರ್ಯ ತುಂಬಿ, ಗುಡ್ ನ್ಯೂಸ್ ಒಂದನ್ನ ನೀಡಿದ್ದಾರೆ.
ಇದೇ ವೇಳೆ ಯಾರೆಲ್ಲಾ ಪಾಸ್ ಆಗಿದ್ದಾರೆ ಅಂತಹವರ ಲೀಸ್ಟ್ ಮಾತ್ರ ಹಾಕಿದ್ದೇವೆ. ಫೇಲ್ ಆದವರನ್ನ ಈಗಲೇ ಫೇಲ್ ಎಂದು ಹೇಳುವುದಕ್ಕೆ ಆಗುವುದಿಲ್ಲ. ಏಪ್ರಿಲ್ 4 ರಿಂದ ಮೇ 8ರವರೆಗೆ ದ್ವಿತೀಯ ಪಿಯು ಪರೀಕ್ಷಾ -2 ನಡೆಯಲಿದೆ. ಎರಡನೇ ಮತ್ತು ಮೂರನೇ ಪರೀಕ್ಷೆಯ ಡೇಟ್ ಕೂಡ ಈಗಲೇ ಅನೌನ್ಸ್ ಮಾಡಿದ್ದೇವೆ. ಅನುತ್ತೀರ್ಣರಾದ ಮಕ್ಕಳು ಈಗಲೇ ಎರಡು ಮತ್ತು ಮೂರನೇ ಪರೀಕ್ಷೆಗೆ ಸಿದ್ಧ ಮಾಡಿಕೊಳ್ಳಿ. ಈ ಬಾರಿ ದ್ವಿತೀಯ ಪಿಯು ಮಕ್ಕಳಿಗೆ ಎರಡು ಹಾಗೂ ಮೂರನೇ ಪರೀಕ್ಷೆಗೆ ಯಾವುದೇ ಶುಲ್ಕ ಇರುವುದಿಲ್ಲ.

ಮಕ್ಕಳಿಗೆ ಆರ್ಥಿಕ ಹೊರೆಯನ್ನು ಕಡಿಮೆ ಮಾಡಲು ಶಿಕ್ಷಣ ಇಲಾಖೆ ಈ ನಿರ್ಧಾರ ತೆಗೆದುಕೊಂಡಿದೆ. ಹೀಗಾಗಿ ಈ ಬಾರಿ ಪರೀಕ್ಷಾ ಶುಲ್ಕ ಇರುವುದಿಲ್ಲ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಸಂಜೆ ಸಮಯ ಮಕ್ಕಳಿಗೆ ಸ್ಪೆಷಲ್ ಕ್ಲಾಸ್ ಮಾಡಲು ತಿಳಿಸಿದ್ದೇವೆ. ಯಾರೂ ಈ ಬಾರಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿಲ್ಲ, ಅಂತಹ ಮಕ್ಕಳಿಗೆ ಈ ಬಾರಿ ಎರಡು ಸಲ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ. ಶಿಕ್ಷಣ ಇಲಾಖೆಯಿಂದ ಇಂದು ಮಹತ್ವದ ಹೆಜ್ಜೆ ಇಡಲಾಗಿದೆ ಎಂದು ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.









