Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಏಪ್ರಿಲ್ 7ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಸಾಧ್ಯತೆ: ಆನ್‌ಲೈನ್‌ನಲ್ಲಿ ಫಲಿತಾಂಶ ನೋಡುವ ವಿಧಾನ ಹೀಗೆ 

---Advertisement---

ರಾಜ್ಯಾದ್ಯಂತ ಕುತೂಹಲ ಮೂಡಿಸಿರುವ ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವು ಏಪ್ರಿಲ್ 7ರಂದು ಪ್ರಕಟವಾಗುವ ಸಾಧ್ಯತೆ ಹೆಚ್ಚಿದೆ. ಈ ಬಾರಿ ಪರೀಕ್ಷೆ ಬರೆದ ಲಕ್ಷಾಂತರ ವಿದ್ಯಾರ್ಥಿಗಳ ನಿರೀಕ್ಷೆಗೆ ಶೀಘ್ರದಲ್ಲೇ ತೆರೆ ಬೀಳಲಿದೆ ಎಂದು ಶಿಕ್ಷಣ ಇಲಾಖೆಯ ಮೂಲಗಳು ತಿಳಿಸಿವೆ.ಈಗಾಗಲೇ ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಬಹುತೇಕ ಪೂರ್ಣಗೊಂಡಿದೆ. ಫೆಬ್ರವರಿ 28ರಿಂದ ಮಾರ್ಚ್ 17ರವರೆಗೆ ಪರೀಕ್ಷೆಗಳು ನಡೆದಿದ್ದು, ಮಾರ್ಚ್ 20ರಿಂದ ಮೌಲ್ಯಮಾಪನ ಪ್ರಕ್ರಿಯೆ ಆರಂಭವಾಗಿತ್ತು. ರಾಜ್ಯದಾದ್ಯಂತ ಸುಮಾರು 7 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆಗೆ ಹಾಜರಾಗಿದ್ದರು.

ಶಿಕ್ಷಣ ಇಲಾಖೆ ಸೂಚಿಸಿರುವಂತೆ, ಏಪ್ರಿಲ್ 7ರಂದು ಫಲಿತಾಂಶ ಅಧಿಕೃತವಾಗಿ ಪ್ರಕಟವಾಗುವ ನಿರೀಕ್ಷೆ ಇದ್ದು, ವಿದ್ಯಾರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್ ಮೂಲಕ ತಮ್ಮ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ.

ಆನ್‌ಲೈನ್‌ನಲ್ಲಿ ಫಲಿತಾಂಶ ನೋಡುವ ವಿಧಾನ:
ಮೊದಲು karresults.nic.in ವೆಬ್‌ಸೈಟ್‌ಗೆ ಭೇಟಿ ನೀಡಿ.
‘Karnataka 2nd PUC Result 2026’ ಲಿಂಕ್ ಮೇಲೆ ಕ್ಲಿಕ್ ಮಾಡಿ.
ನಿಮ್ಮ ರಿಜಿಸ್ಟರ್ ನಂಬರ್ ಹಾಗೂ ಸ್ಟ್ರೀಮ್ ವಿವರಗಳನ್ನು ನಮೂದಿಸಿ.
‘Submit’ ಕ್ಲಿಕ್ ಮಾಡಿದರೆ ಫಲಿತಾಂಶ ಪರದೆಯ ಮೇಲೆ ಕಾಣಿಸುತ್ತದೆ.
ಫಲಿತಾಂಶವನ್ನು ಪರಿಶೀಲಿಸಿ, ಡೌನ್‌ಲೋಡ್ ಮಾಡಿ.
ಮುಂದಿನ ದಾಖಲೆ ಪ್ರಕ್ರಿಯೆಗಾಗಿ ಪ್ರಿಂಟ್‌ಔಟ್ ತೆಗೆದುಕೊಳ್ಳುವುದು ಉತ್ತಮ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now