ಶಿವಮೊಗ್ಗ: ಕೊನೆಯ ಸಂಪುಟ ಸಭೆಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಎಸ್ಸಿ/ಎಸ್ಟಿ ಸಮುದಾಯಕ್ಕೆ ಒಳ ಮೀಸಲಾತಿಯನ್ನು ಜಾರಿಗೊಳಿಸುವುದಾಗಿ ಘೋಷಿಸಿದೆ. ಇದನ್ನು ವಿರೋಧಿಸಿ ಬಂಜಾರ ಸಮುದಾಯ ಶಿವಮೊಗ್ಗದ ಶಿಕಾರಿಪುರದಲ್ಲಿ ಹೋರಾಟ ನಡೆಸುತ್ತಿದೆ. ಈ ಹೋರಾಟ ತೀವ್ರ ಸ್ವರೂಪ ಪಡೆದಿದ್ದು, ಇದೀಗ ಶಿಕಾರಿಪುರ ಉದ್ವಿಗ್ನ ಸ್ಥಿತಿಗೆ ತಿರುಗಿದೆ.
ಪರಿಸ್ಥಿತಿ ಹತೋಟಿ ಮೀರುತ್ತಿದ್ದಂತೆ ಪೊಲೀಸರು 144 ಸಕ್ಷನ್ ಜಾರಿ ಮಾಡಿದ್ದಾರೆ. ಬಂಜಾರ ಸಮುದಾಯದವರು ರೊಚ್ಚಿಗೆದ್ದವರಂತೆ ನಡೆದುಕೊಳ್ಳುತ್ತಿದ್ದಾರೆ. ಕಲ್ಲು ತೂರಾಟ ನಡೆಸಿದ್ದಾರೆ. ಬಿಎಸ್ವೈ ಅವರ ಮನೆಯ ಗಾಜು, ಕಿಟಕಿ ಪುಡಿ ಪುಡಿ ಮಾಡಿದ್ದಾರೆ. ಹೀಗಾಗಿ ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ಕೂಡ ನಡೆಸಿದ್ದಾರೆ.
ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಆಕ್ರೋಶಗೊಂಡಿರುವ ಬಂಜಾರ ಸಮುದಾಯದವರು, ಅವರ ಹುಟ್ಟುಹಬ್ಬದ ಪ್ರಯುಕ್ತ ಜನರಿಗೆ ಹಂಚಿದ್ದ ಸೀರೆಯನ್ನು ತಂದು ಸುಡಲಾಗಿದೆ. ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ.





GIPHY App Key not set. Please check settings