Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕೆನಡಾ ಕಾಮನ್ವೆಲ್ತ್ ಪವರ್ ಲಿಫ್ಟಿಂಗ್ ಗೆ ಆಯ್ಕೆ : ಕ್ರೀಡಾಪಟು ಸಚಿನ್ ಗೆ ಶಾಸಕ ವೀರೇಂದ್ರ ಪಪ್ಪಿ ಆರ್ಥಿಕ ನೆರವು

---Advertisement---

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ಸೆ. 19 :  ಕೆನಡಾದಲ್ಲಿ ನಡೆಯಲಿರುವ ಕಾಮನ್ವೆಲ್ತ್ ಪವರ್ ಲಿಫ್ಟಿಂಗ್ ಚಾಂಪಿಯನ್‍ಷಿಪ್‍ಗೆ ಭಾರತ ತಂಡದಿಂದ ವಿಜಯಪುರ ಜಿಲ್ಲೆಯ ತಿಗಣೆ ಬೀದರ ಗ್ರಾಮದ ಸಚಿನ್ ತುಕಾರಾಮ್ ಸಾಲೊಂಕೆ ಆಯ್ಕೆಯಾಗಿದ್ದು, ಅಲ್ಲಿಗೆ ಹೋಗಲು ಆರ್ಥಿಕ ತೊಂದರೆಯಿದ್ದು ಅದನ್ನು ಅರಿತ ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ, ಚಾಂಪಿಯನ್‍ಷಿಪ್‍ನಲ್ಲಿ ಪಾಲ್ಗೊಳ್ಳಲು ಅವರಿಗೆ ಅಗತ್ಯವಾದ ಆರ್ಥಿಕ ನೆರವು ನೀಡಿದ್ದಾರೆ.

ವಿಜಯಪುರ ಜಿಲ್ಲೆಯ ತಿಗಣೆ ಬೀದರ ಗ್ರಾಮದ ಸಚಿನ್ ತುಕಾರಾಮ್ ಸಾಲೊಂಕೆ ಪ್ರತಿಷ್ಠಿತ ಕಾಮನ್ವೆಲ್ತ್ ಪವರ್ ಲಿಫ್ಟಿಂಗ್ ಚಾಂಪಿಯನ್‍ಷಿಪ್‍ಗೆ ಭಾರತ ತಂಡಕ್ಕೆ ಅಧಿಕೃತವಾಗಿ ಆಯ್ಕೆಯಾಗಿದ್ದಾರೆ. ಕೆನಡಾದಲ್ಲಿ ಸೆಪ್ಟೆಂಬರ್ 17ರಂದು ಆರಂಭವಾಗಿರುವ ಅಂತಾರಾಷ್ಟ್ರೀಯ ಚಾಂಪಿಯನ್‍ಷಿಪ್‍ನಲ್ಲಿ ಭಾರತವನ್ನು ಪ್ರತಿನಿಧಿಸುತ್ತಿದ್ದಾರೆ. ಈ ಚಾಂಪಿಯನ್‍ಷಿಪ್ ಸೆ. 27ರವರೆಗೆ ನಡೆಯಲಿದ್ದು, ಇದರಲ್ಲಿ ಭಾಗವಹಿಸಲು ಅವರು ತೆರಳಲಿದ್ದಾರೆ.

ಗ್ರಾಮೀಣ ಹಿನ್ನೆಲೆಯಿಂದ ಬಂದ ಸಚಿನ್ ಸೌಲಭ್ಯಗಳ ಕೊರತೆಯ ನಡುವೆಯೂ ಸ್ವಂತ ಪರಿಶ್ರಮದಿಂದ ಅಭ್ಯಾಸ ನಡೆಸಿ ಈ ಮೈಲಿಗಲ್ಲು ತಲುಪಿದ್ದಾರೆ. ಕ್ರೀಡಾಪಟುವಿನ ಸಂಕಷ್ಟ ಅರಿತು ಬೆಂಗಳೂರಿಗೆ ಕರೆಯಿಸಿ ಕೊಂಡ ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ, ಚಾಂಪಿಯನ್‍ಷಿಪ್‍ನಲ್ಲಿ ಪಾಲ್ಗೊಳ್ಳಲು ಅಗತ್ಯ ಆರ್ಥಿಕ ನೆರವು ನೀಡಿದ್ದಾರೆ. ಈ ಸಂದರ್ಭದಲ್ಲಿ ಸೈಯದ್ ಮೋಹಿದ್ದೀನ್ ಇದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now