ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 24 : ದಾವಣಗೆರೆ ವಿಶ್ವವಿದ್ಯಾನಿಲಯ ಪದವಿ ಕಾಲೇಜುಗಳ ಸಮಾಜಶಾಸ್ತç ಅಧ್ಯಾಪಕರ ಸಂಘದ ಸರ್ವ ಸದಸ್ಯರ ಸಭೆಯಲ್ಲಿ ಈಚೆಗೆ ಸಂಘಕ್ಕೆ ನೂತನ ಪದಾಧಿಕಾರಿ ಆಯ್ಕೆ ನಡೆಯಿತು.
ಸಮಾಜಶಾಸ್ತ್ರ ಅಧ್ಯಾಪಕರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಹರಿಹರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕ ಡಾ.ಹೆಚ್.ತಿಪ್ಪೇಸ್ವಾಮಿ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.
ಉಪಾಧ್ಯಕ್ಷರಾಗಿ ಪ್ರೊ.ಹೆಚ್.ಎಸ್.ಶಿವಣ್ಣ, ಪ್ರಧಾನ ಕಾರ್ಯದರ್ಶಿಯಾಗಿ ಚಿತ್ರದುರ್ಗ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಸಹ ಪ್ರಾಧ್ಯಾಪಕ ಡಾ.ಡಿ.ಓ.ಸಿದ್ದಪ್ಪ, ಖಜಾಂಚಿಯಾಗಿ ಟಿ.ಬಿ.ಜ್ಯೋತಿ, ಸಹ ಕಾರ್ಯದರ್ಶಿ ಡಾ.ಎಸ್.ಎನ್.ವಿನಯ್, ಸಂಘಟನಾ ಕಾರ್ಯದರ್ಶಿ ಡಾ.ಎ.ಡಿ.ಬಸವರಾಜ್, ನಿರ್ದೇಶಕರಾಗಿ ಡಾ.ಎಸ್.ಎಂ.ಲತಾ, ಡಾ.ಹೆಚ್.ಬಿ.ಪ್ರಕಾಶ್, ಪ್ರೊ.ಎನ್.ಎಸ್.ಸಂಗಮೇಶ್ವರ್, ಪ್ರೊ..ಜಿ.ಟಿ.ಪ್ರದೀಪ್ ಕುಮಾರ್, ಡಾ.ನವೀನ್ ಗಂಗಾಧರ ಕೂಗಿ ಇವರನ್ನು ನೂತನ ಪದಾಧಿಕಾರಿಗಳಾಗಿ ಆಯ್ಕೆ ಮಾಡಲಾಗಿದೆ ಎಂದು ದಾವಣಗೆರೆ ವಿವಿ ಪದವಿ ಕಾಲೇಜುಗಳ ಸಮಾಜಶಾಸ್ತ್ರ ಅಧ್ಯಾಪಕರ ಸಂಘ ಪ್ರಕಟಣೆ ತಿಳಿಸಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.
















